ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮಳೆಯಿಂದಾಗಿ 22 ಮನೆಗಳಿಗೆ ಹಾನಿಯಾಗಿದ್ದು, 8 ಮನೆಗಳು ಸಂಪೂರ್ಣ ಹಾನಿಗೀಡಾಗಿದೆ. ರಾಜ್ಯ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಮಾಜಿ ಸಚಿವ, ಶಾಸಕ ಕೆ.ಎಸ್. ಈಶ್ವರಪ್ಪ MLA Eshwarappa ಹೇಳಿದ್ದಾರೆ.
ಮಳೆಯಿಂದಾಗಿ ಹಾನಿಗೊಳಗಾದ ನಗರದ ವಿವಿಧ ಬಡಾವಣೆಗಳ ಮನೆಗಳಿಗೆ ಭೇಟಿ ನೀಡಿದ ನಂತರ ಅವರು ಮಾತನಾಡಿದರು.
ಭಾಗಶಃ ಹಾನಿಯಾಗಿರುವ ಮನೆಗಳಿಗೆ 3 ಲಕ್ಷ ರೂ. ಪರಿಹಾರ ನೀಡಲಾಗುವುದು. ಬರುವ ಸೋಮವಾರದಿಂದಲೇ ಪರಿಹಾರ ಪ್ರಕ್ರಿಯೆ ಆರಂಭಿಸಲಾಗುವುದು ಎಂದರು.
Also read: ಶೃಂಗೇರಿ ಜಗದ್ಗುರುಗಳಿಗೆ ಅವಮಾನ: ಆರೋಪಿ ಮುನ್ನಾಗೆ ಜೈಲು ಶಿಕ್ಷೆ ವಿಧಿಸಿದ ಕೋರ್ಟ್
ಶಾಂತಿ ನಗರ, ಬಾಪೂಜಿ ನಗರ, ಶೇಷಾದ್ರಿಪುರಂ ಸೇರಿ ವಿವಿಧ ಬಡಾವಣೆಗಳಲ್ಲಿ ಮಳೆಯಿಂದಾಗಿ ಹಾನಿಗೊಳಗಾದ ಮನೆಗಳಿಗೆ ತೆರಳಿ ಅವರು ಪರಿಶೀಲನೆ ನಡೆಸಿದರು. ಮನೆ ಕಳೆದುಕೊಂಡು ಸಂಕಷ್ಟಕ್ಕೀಡಾದವರಿಗೆ ಸಾಂತ್ವನ ಹೇಳಿ, ಆದಷ್ಟು ಬೇಗ ಪರಿಹಾರ ಒದಗಿಸುವ ಭರವಸೆ ನೀಡಿದರು.
ಜಿಪಂ ಮಾಜಿ ಸದಸ್ಯ ಕೆ.ಈ. ಕಾಂತೇಶ್, ಮೇಯರ್ ಸುನಿತಾ ಅಣ್ಣಪ್ಪ, ಪಾಲಿಕೆ ಸದಸ್ಯರಾದ ಎಸ್.ಎನ್. ಚನ್ನಬಸಪ್ಪ, ಸುರೇಖಾ ಮುರಳೀಧರ್, ಸುವರ್ಣಾ ಶಂಕರ್, ಪ್ರಮುಖರಾದ ಎನ್.ಜಿ. ನಾಗರಾಜ್, ತಹಶೀಲ್ದಾರ್ ನಾಗರಾಜ್ ಸೇರಿದಂತೆ ಹಲವರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















