ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸಾಗರ ತಾಲೂಕಿನ ಬೆಳೆಯೂರು ಗ್ರಾಮದಲ್ಲಿ ಯುವಕ ಆತ್ಮಹತ್ಯೆಗೆ ಯತ್ನಸುತ್ತಿದ್ದ ಸಂದರ್ಭದಲ್ಲಿ ಹಿರಿಯರೊಬ್ಬರು ಬುದ್ಧಿವಾದ ಹೇಳಿದಕ್ಕೆ ಯುವಕ ರಾಡ್‌ನಿಂದ ಹಲ್ಲೆ ಮಾಡಿರುವ ಘಟನೆ ವರದಿಯಾಗಿದೆ.
ಬೆಳೆಯೂರಿನ ರಾಜೀವ (36) ಮಂಗಳವಾರ ಗ್ರಾಮದ ತೋಟವೊಂದರ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸ್ಥಳೀಯರು ಗಮನಿಸಿ ತಡೆಯುತ್ತಿದ್ದ ಸಂದರ್ಭ ಶೇಷಗಿರಿ ಎಂಬ ಹಿರಿಯರು ರಾಜೀವನಿಗೆ ಬುದ್ಧಿವಾದ ಹೇಳಿದ್ದಾರೆ. ಆಗ ಶೇಷಗಿರಿಯವರಿಗೆ ರಾಜೀವ ರಾಡ್‌ನಿಂದ ಹೊಡೆದಿದ್ದಾನೆ. ಹಲ್ಲೆಗೊಳಗಾದ ಶೇಷಗಿರಿಯವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
Also read: ಸಾರ್ವಜನಿಕ ಪಡಿತರ ವ್ಯವಸ್ಥೆಯಲ್ಲಿ ಸಾರವರ್ಧಿತ ಅಕ್ಕಿ ವಿತರಣೆ
ಗ್ರಾಮಾಂತರ ಠಾಣೆಗೆ ಶೇಷಗಿರಿ ಬುಧವಾರ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post