ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮಾದಕ ವಸ್ತು ಸೇವಿಸಿ ಕಾಲೇಜು ವಿದ್ಯಾರ್ಥಿಗಳು ಮತ್ತಿನಲ್ಲಿರುವ ವೀಡಿಯೋ ವೈರಲ್ ಆದ ಕುರಿತಾಗಿ ಪೊಲೀಸ್ ಇಲಾಖೆ ಸ್ಪಷ್ಟನೆ ನೀಡಿದ್ದು, ಇವರೆಲ್ಲಾ ಮದ್ಯ ಸೇವನೆ ಮಾಡಿದ್ದರು ಎಂದು ತಿಳಿಸಿದೆ.
ಕಾಲೇಜಿನ ಕ್ಯಾಂಪಸ್’ವೊಂದರಲ್ಲಿ ವಿದ್ಯಾರ್ಥಿಗಳು ಮಾದಕ ವಸ್ತು ಸೇವಿಸಿ ಮತ್ತಿನಲ್ಲಿರುವಂತಹ ವೀಡಿಯೋ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಕುರಿತಂತೆ ಪೊಲೀಸರು ಪ್ರಾಥಮಿಕ ತನಿಖೆ ನಡೆಸಿದ್ದಾರೆ. ವಿದ್ಯಾರ್ಥಿಗಳು ಸಾಗರ ರಸ್ತೆಯಲ್ಲಿರುವ ಬಾರ್ ಒಂದರಲ್ಲಿ ಮದ್ಯ ಸೇವನೆ ಮಾಡಿಕೊಂಡು ಬಸ್ ಹತ್ತಲು ಕಾಲೇಜಿನ ಹತ್ತಿರ ಬಂದಾಗ ಕಾಲೇಜಿನ ಗೇಟ್’ನಲ್ಲಿ ತಡೆದು ಅವರ ಪೋಷಕರಿಗೆ ಈ ವಿಚಾರವನ್ನು ತಿಳಿಸಲಾಗಿದೆ. ಕಾಲೇಜು ಆಡಳಿತ ಮಂಡಳಿಯು ಪೋಷಕರೊಂದಿಗೆ ವಿದ್ಯಾರ್ಥಿಗಳಿಗೆ ಈ ವಿಷಯವಾಗಿ ಸಮಾಲೋಚನೆ ನಡೆಸಿದ್ದಾರೆ ಎಂದು ತಿಳಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post