ಕಲ್ಪ ಮೀಡಿಯಾ ಹೌಸ್ | ಮಂಗಳೂರು |
ಬಿಜೆಪಿ ಯುವಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಣಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆಯನ್ನು ಖಂಡಿಸಿ ಪುತ್ತೂರು, ಬೆಳ್ಳಾರೆ, ಸುಳ್ಯ, ಕಡಬ ಪಟ್ಟಣಗಳಲ್ಲಿ ಸ್ವಯಂ ಘೋಷಿತ ಬಂದ್ ಗೆ ಹಿಂದು ಪರ ಸಂಘಟನೆಗಳು ಕರೆ ನೀಡಿದ್ದು, ಇತ್ತೀಚಿನ ಮಾಹಿತಿಯ ಪ್ರಕಾರ ಹತ್ಯೆ ಪ್ರಕರಣದಲ್ಲಿ ಐವರು ಶಂಕಿತರನ್ನು ವಶಕ್ಕೆ ಪಡೆಯಲಾಗಿದೆ ಎನ್ನಲಾಗಿದೆ.
ಹಂತಕರ ವಿರುದ್ಧ ಕಠಿಣ ಕ್ರಮ: ಸಿಎಂ
ಪ್ರವೀಣ್ ನೆಟ್ಟಾರು ಹತ್ಯೆ ಮಾಡಿರುವ ಹಂತರಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.

ಹಂತಕರು ಕೇರಳ ನೋಂದಣಿ ಇರುವ ವಾಹನದಲ್ಲಿ ಬಂದು ಹತ್ಯೆ ಮಾಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಹಂತರ ಪತ್ತೆಗೆ 5 ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಐದು ತಂಡಗಳ ಪೈಕಿ ಮೂರು ತಂಡಗಳನ್ನು ಕ್ರಮವಾಗಿ ಕೇರಳ ಮತ್ತು ಮಡಿಕೇರಿ ಮತ್ತು ಕರ್ನಾಟಕದ ಹಾಸನಕ್ಕೆ ಕಳುಹಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾಯ್ ಮಾಹಿತಿ ನೀಡಿದ್ದಾರೆ.











Discussion about this post