ಕಲ್ಪ ಮೀಡಿಯಾ ಹೌಸ್ | ಮಂಗಳೂರು |
ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು Praveen Nettaru ಅವರ ಭೀಕರ ಹತ್ಯೆಗೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಕರಣ ಕುರಿತಂತೆ ಬೆಳ್ಳಾರೆಯ ಮಹಮದ್ ಶಫೀಕ್ ಹಾಗೂ ಸವಣೂರಿನ ಝಾಕಿರ್ ಎಂಬ ಇಬ್ಬರನ್ನು ನಿನ್ನೆ ಸಂಜೆಯೇ ವಶಕ್ಕೆ ಪಡೆದಿದ್ದ ಪೊಲೀಸರು ಇಂದು ಬಂಧಿಸಿದ್ದಾರೆ.
ಪ್ರವೀಣ್ ಹತ್ಯೆಗೆ ಈ ಇಬ್ಬರೂ ಸಂಚು ರೂಪಿಸಿದ್ದರು ಎಂದು ಹೇಳಲಾಗಿದ್ದು, ಕೇರಳ ಮೂಲದವರು ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗಿದೆ.
ಈ ಕುರಿತಂತೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಎಡಿಜಿಪಿ ಅಲೋಕ್ ಕುಮಾರ್, ಇಂದು ಬಂಧಿಸಲಾಗಿರುವ ಈ ಇಬ್ಬರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ವಿಚಾರಣೆಗಾಗಿ ಪೊಲೀಸರ ವಶಕ್ಕೆ ಕೇಳಲಾಗುವುದು. ಪೊಲೀಸ್ ಕಸ್ಟಡಿಗೆ ಪಡೆದ ನಂತರ ವಿಚಾರಣೆ ನಡೆಸಿದ ನಂತರ, ಹೆಚ್ಚಿನ ಮಾಹಿತಿ ತಿಳಿದುಬರಲಿದೆ ಎಂದಿದ್ದಾರೆ.
ಇನ್ನು, ಇಬ್ಬರ ಬಂಧನವನ್ನು ಖಚಿತಪಡಿಸಿರುವ ದಕ್ಷಿಣ ಕನ್ನಡ ಎಸ್’ಪಿ ಋಷಿಕೇಶ್ ಸೋನಾವಣೆ ಅವರು, ಇಬ್ಬರನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ಪಡೆಯಲಾಗುವುದು ಎಂದಿದ್ದಾರೆ.
ಇನ್ನು ಬಂಧಿತ ಝಾಕಿರ್ ವಿರುದ್ಧ ಈಗಾಗಲೇ ಕ್ರಿಮಿನಲ್ ಪ್ರಕರಣವಿದ್ದು, ಹೆಚ್ಚಿನ ವಿವರಗಳನ್ನು ಶೀಘ್ರದಲ್ಲೇ ಪ್ರಕಟಿಸುತ್ತೇವೆ ಎಂದಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















