ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಇಂತಹ ಕ್ಲಿಷ್ಟ ಸಂದರ್ಭದಲ್ಲಿ ಹೇಗೆ ನಿಭಾಯಿಸಬೇಕು ಎಂದು ನಮಗೆ ತಿಳಿದಿದೆ. ಇದಕ್ಕೆಲ್ಲ ಸಮಾಜಘಾತುಕ ಶಕ್ತಿಗಳ ಕುಮ್ಮಕ್ಕು ಇದ್ದು, ಪ್ರತಿಯೊಂದನ್ನೂ ರಾಜಕೀಯವಾಗಿ ಬಳಸಿಕೊಳ್ಳುವುದು ಸರಿಯಲ್ಲ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ವಿರುದ್ಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ವಾಗ್ದಾಳಿ ನಡೆಸಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಹೇಳಿದ್ದೇ ವೇದವಾಕ್ಯ ಅಲ್ಲ. ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ೩೨ ಕೊಲೆಗಳಾಗಿವೆ ಎಂದು ಕಿಡಿ ಕಾರಿದರು.
ಎಡಿಜಿಪಿ ಲಾ ಆಂಡ್ ಆರ್ಡರ್ ಅವರಿಗೆ ಘಟನಾ ಸ್ಥಳದಲ್ಲಿಯೇ ಇರಲು ಸೂಚಿಸಿದ್ದೇನೆ. ನಿನ್ನೆ ತಾವು ಪ್ರವೀಣ್ ಮನೆಗೆ ಹೋಗಿ ವಾಪಸ್ ಬರುವಾಗ ಮತ್ತೊಂದು ಕೊಲೆ ಆಗಿದೆ. ಈ ಮೂರು ಕೊಲೆಗಳನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ. ಅಲ್ಲಿನ ಜನರ ಬದುಕು ನಮಗೆ ಅಷ್ಟೇ ಪ್ರಮುಖ ಎಂದರು.
Also read: ತಮಿಳು ನಟ, ನಿರ್ದೇಶಕ ಜಿ.ಎಂ. ಕುಮಾರ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















