ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ದೇಶದಲ್ಲಿಯೇ ಮೊದಲ ಬಾರಿಗೆ ಪ್ರಾರಂಭಿಸಿದ ರೈತ ವಿದ್ಯಾನಿಧಿ ಯೋಜನೆಯಡಿ ರೈತ ವಿದ್ಯಾನಿಧಿಯಿಂದ ಕಳೆದ ವರ್ಷ 8.50 ಲಕ್ಷ ಹಾಗೂ ಈ ವರ್ಷ 9.8 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಹೇಳಿದರು.
ಒಂದು ವರ್ಷದ ತಮ್ಮ ಅಧಿಕಾರಾವಧಿ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.
ಪ್ರತಿ ದಿನವೂ ಕೂಡ 15-20 ಸಾವಿರ ಮಕ್ಕಳಿಗೆ ಡಿಬಿಟಿ ಮೂಲಕ ತಲುಪಿದೆ. ರೈತರ ಕುಟುಂಬಗಳಲ್ಲಿ ಅವರ ಮಕ್ಕಳ ವಿದ್ಯಾಭ್ಯಾಸ ಮಾಡುತ್ತಿರುವುದಕ್ಕೆ ರೈತರಲ್ಲಿ ಭರವಸೆ ಮೂಡಿದೆ ಎಂದರು.

ಮೊತ್ತ ಹೆಚ್ಚಳವಾಗಿದ್ದು, ಹೆಚ್ಚಿನ ಆರ್ಥಿಕ ನೆರವು , ಆಸರೆಯನ್ನು ಬಡವರಿಗೆ, ಅಂಗವಿಕಲರಿಗೆ ನೀಡಲಾಗಿದೆ. ಎಸ್.ಸಿ/ಎಸ್.ಟಿ ಸಮುದಾಯಕ್ಕೆ ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ ಯಲ್ಲಿ ಅನುದಾನವನ್ನು ಹಚ್ಚಿಸಲಾಗಿದೆ. ಎಸ್.ಸಿ/ ಎಸ್.ಟಿ., ಹಿಂದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತರ ವಿವಿಧ ನಿಗಮಗಳಿಗೆ ಬಜೆಟ್ ನಲ್ಲಿ ನೀಡಿರುವ ಮೊತ್ತಕ್ಕೆ ಹೆಚ್ಚುವರಿಯಾಗಿ 800 ಕೋಟಿ ರೂ. ಅನುದಾನ ಒದಗಿಸಲಾಗಿದೆ.
Also read: ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಹಿಂದೂ ಪರ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ವಿಶೇಷವಾಗಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದಸುಮಾರು 25 ಲಕ್ಷ ಕ್ಕಿಂತ ಹೆಚ್ಚು ಬಡ ಕುಟುಂಬಗಳಿಗೆ 75 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಇದಕ್ಕೆ ವಾರ್ಷಿಕ 700 ಕೋಟಿ ರೂ. ಹೆಚ್ಚುವರಿ ಅನುದಾನ ಒದಗಿಸಲಾಗುತ್ತಿದೆ ಎಂದು ತಿಳಿಸಿದರು.

ಇದರೊಂದಿಗೆ ಮನೆ ನಿರ್ಮಾಣಕ್ಕೆ ನೀಡುವ ಅನುದಾನವನ್ನು 75 ಸಾವಿರದಿಂದ 1 ಲಕ್ಷ ರೂ. ಗಳಿಗೆ ಹೆಚ್ಚಿಸಲಾಗಿದೆ. ಭೂಚೇತನ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಸುಮಾರು 3500 ಹೆಕ್ಟೇರ್ ಜಮೀನು ಖರೀದಿ ಮಾಡಲಾಗಿದೆ. ಮನೆ ಖರೀದಿ ಮಾಡುವ ದರವನ್ನೂ ಸಹ ಹೆಚ್ಚಿಸಲಾಗಿದೆ. ರೂ. 1.75 ಲಕ್ಷ ಇದ್ದ ಮೊತ್ತವನ್ನು ರೂ. 2 ಲಕ್ಷಕ್ಕೆ ಏರಿಸಲಾಗಿದೆ ಎಂದು ತಿಳಿಸಿದರು.

ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಒಪ್ಪಿ, ಅನುಷ್ಠಾನ ಮಾಡುತ್ತಿರುವ ರಾಜ್ಯ ನಮ್ಮದು. ಕೋವಿಡ್ ಸಂದರ್ಭದಲ್ಲಿ ಆರೋಗ್ಯ ವಲಯದಲ್ಲಿ ಮೂಲಸೌಕರ್ಯಗಳನ್ನು ಹೆಚ್ಚಿಸಲಾಗಿದೆ. ನಮ್ಮ ಸರ್ಕಾರ 750 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಅಭಿವೃದ್ಧಿಪಡಿಸಲು ತಲಾ 20 ಲಕ್ಷ ರೂ.ಗಳನ್ನು ಒದಗಿಸಿದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post