ಕಲ್ಪ ಮೀಡಿಯಾ ಹೌಸ್ | ಧಾರವಾಡ |
ಇಲ್ಲಿನ ತೋಟಗಾರಿಕೆ ಇಲಾಖೆ ಕಚೇರಿ ಆವರಣದಲ್ಲಿ ಇಂದಿನಿಂದ ಆಗಸ್ಟ್ 1 ರವರೆಗೆ ನಡೆಯುವ ಸಸ್ಯಸಂತೆ ಕಾರ್ಯಕ್ರಮಕ್ಕೆ ಜಿಲ್ಲಾ ಹಾಪ್‍ಕಾಮ್ಸ್ ಸಂಸ್ಥೆಯ ಅಧ್ಯಕ್ಷ ಈಶ್ವರಚಂದ್ರ ಹೊಸಮನಿ ಚಾಲನೆ ನೀಡಿದರು.
ಔಷಧೀಯ ಸಸ್ಯಗಳು, ಒಳಾಂಗಣ, ಹೊರಾಂಗಣ ಸಸಿಗಳು, ವಿವಿಧ ಜಾತಿಯ ಹೂ, ಅಲಂಕಾರಿಕ ಗಿಡಗಳು ಸರ್ಕಾರದ ನಿಗದಿತ ದರದಲ್ಲಿ ಮಾರಾಟವಾಗುತ್ತಿವೆ. ಹುಬ್ಬಳ್ಳಿ ಧಾರವಾಡ ಅವಳಿ ನಗರ ಹಾಗೂ ಜಿಲ್ಲೆಯ ಸಾರ್ವಜನಿಕರು ಮತ್ತು ರೈತರು ಸಸ್ಯ ಸಂತೆಗೆ ಭೇಟಿ ನೀಡಿ ಸಸಿಗಳನ್ನು ಖರೀದಿಸಿ, ನೆಟ್ಟು ಪರಿಸರ ಸಂರಕ್ಷಣೆ ಕಾರ್ಯದಲ್ಲಿ ಭಾಗಿಯಾಗಬೇಕು ಎಂದು ಈಶ್ವರಚಂದ್ರ ಹೊಸಮನಿ ಕರೆ ನೀಡಿದರು.
ತೋಟಗಾರಿಕೆ ಉಪನಿರ್ದೇಶಕ ಡಾ.ಕಾಶಿನಾಥ ಭದ್ರಣ್ಣವರ, ಹಿರಿಯ ಸಹಾಯಕ ನಿರ್ದೇಶಕ ಸಂಗಮೇಶ ಗೋಳಪ್ಪನವರ ಸೇರಿದಂತೆ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ವರ್ಗ, ರೈತರು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
Also read: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ: ಬೆಂಗಳೂರಿನ ಅಪೂರ್ವ ಟಂಡನ್ ಟಾಪರ್
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post