ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸಿದ್ಧರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ 32 ಹತ್ಯೆಗಳಾಗಿವೆ. ಮುಖ್ಯಮಂತ್ರಿ ಮತ್ತು ಗೃಹಮಂತ್ರಿಗಳ ರಾಜೀನಾಮೆ ಕೇಳುವ ನೈತಿಕತೆ ಸಿದ್ಧರಾಮಯ್ಯ ಅವರಿಗಿಲ್ಲ ಎಂದು ಶಾಸಕ ಈಶ್ವರಪ್ಪ MLA Eshwarappa ಆಕ್ರೋಶ ವ್ಯಕ್ತಪಡಿಸಿದರು.
ಸಂಘ ಪರಿವಾರದ ಬಿಕ್ಕಟ್ಟು ಗಲಭೆಗೆ ಕಾರಣ ಎಂದು ಸಿದ್ಧರಾಮಯ್ಯ ಹೇಳಿಕೆ ನೀಡಿರುವ ಬಗ್ಗೆ ನಗರದಲ್ಲಿ ಇಂದು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸ್ವಯಂಸೇವಕರು, ಆರ್‌ಎಸ್‌ಎಸ್ ಬಗ್ಗೆ ಮಾತನಾಡುವ ಯೋಗ್ಯತೆ ಸಿದ್ಧರಾಮಯ್ಯ ಅವರಿಗಿಲ್ಲ. ಆರ್‌ಎಸ್‌ಎಸ್ ಬಗ್ಗೆ ಎಬಿಸಿಡಿಯೂ ಗೊತ್ತಿಲ್ಲದ ಅವರು, ಆರ್‌ಎಸ್‌ಎಸ್ ಸ್ವಯಂ ಸೇವಕರ ಪಾದದ ಧೂಳಿಗೂ ಸರಿಸಮಾನರಲ್ಲ ಎಂದು ಲೇವಡಿ ಮಾಡಿದರು.
ಆರ್‌ಎಸ್‌ಎಸ್ ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಷ್ಟ್ರಭಕ್ತ ಸಂಸ್ಥೆ ಎಂದು ಗುರುತಿಸಿಕೊಂಡಿದೆ. ಸರ್ಜಿಕಲ್ ಸ್ಟ್ರೈಕ್ ಮಾಡುವ ಮೂಲಕ ಪಾಕಿಸ್ತಾನವನ್ನು ಹಿಮ್ಮೆಟ್ಟಿಸಲು ಮುಂದಾದ, ವಿಶ್ವವೇ ಮೆಚ್ಚುವ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಷಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಯೋಗಿ ಅವರು ಸಂಘ ಪರಿವಾರದಿಂದ ಬಂದವರು. ಇಂತಹ ಸಂಸ್ಥೆ ಬಗ್ಗೆ ಮೊದಲು ಸಿದ್ಧರಾಮಯ್ಯ ತಿಳಿದುಕೊಳ್ಳಲಿ. ರಾಜ್ಯಕ್ಕೆ ಇಂತಹ ಕೆಟ್ಟ ಮುಖ್ಯಮಂತ್ರಿ ನೀಡಿದೆವಲ್ಲಾ ಎಂದು ಬೇಸರ ವ್ಯಕ್ತಪಡಿಸಿದರು.
ಆರ್‌ಎಸ್‌ಎಸ್ ದೇಶದ ಆಶಾಕಿರಣ, ರಾಷ್ಟ್ರದ್ರೋಹಿ ಎಂದು ಕರೆಯುತ್ತಿರಾ? ಒಂದೆರೆಡು ದಿನ ನೀವು ಕೂಡ ಆರ್‌ಎಸ್‌ಎಸ್ ಗೆ ಬನ್ನಿ. ಆರ್‌ಎಸ್‌ಎಸ್ ಬಗ್ಗೆ ಗಂಧಗಾಳಿ ಗೊತ್ತಿಲ್ಲದ ನೀವು ಇಂತಹ ಮಾತು ಏಕೆ ಆಡುತ್ತೀರಾ? ಬೇಕಾದರೆ ಸಿದ್ದರಾಮಯ್ಯರನ್ನು ಆರ್‌ಎಸ್‌ಎಸ್ ಶಾಖೆಗೆ ಕರೆದುಕೊಂಡು ಹೋಗುತ್ತೇನೆ. ಮೊದಲು ಇವರು ಆರ್‌ಎಸ್‌ಎಸ್ ಮತ್ತು ದೇಶದ ಜನರ ಕ್ಷಮೆ ಕೇಳಲಿ ಎಂದು ಒತ್ತಾಯಿಸಿದರು.
ಕಾಂಗ್ರೆಸ್ ನವರು ಬಳಸುವ ಪದಗಳು ಅವರ ಮಾತು ಕೇಳಿದರೆ ಒಂದಿಡೀ ದಿನ ಪತ್ರಿಕಾಗೋಷ್ಠಿ ನಡೆಸಬೇಕಾಗುತ್ತದೆ. ಕಾಂಗ್ರೆಸ್ ನವರು ಮಾತುಗಳು ಹಾಗೆ ಮಾಡುತ್ತಿದೆ. ಹೇಳಿಕೆ ನೀಡುವಾಗ ಕಾಂಗ್ರೆಸ್‌ನವರು ಯೋಚನೆ ಮಾಡಿ ಮಾತನಾಡಬೇಕು ಎಂದು ಸಲಹೆ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಸೂಡ ಅಧ್ಯಕ್ಷ ನಾಗರಾಜ್, ಪ್ರಮುಖರಾದ ಕೆ.ವಿ. ಅಣ್ಣಪ್ಪ, ವಿನ್ಸೆಂಟ್ ರೋಡ್ರಿಗ್ರಸ್ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post