ಕಲ್ಪ ಮೀಡಿಯಾ ಹೌಸ್ | ದಕ್ಷಿಣ ಕನ್ನಡ |
ಮುಂದಿನ ಎರಡು ದಿನಗಳ ಕಾಲ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದ್ದು, ಭಕ್ತರು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಹೇಳಿದ್ದಾರೆ.
ಶ್ರೀಕ್ಷೇತ್ರ ಸುಬ್ರಹ್ಮಣ್ಯ Shri Kshethra Subramanya ಸುತ್ತಮುತ್ತ ವ್ಯಾಪಕ ಮಳೆಯಾದ ಹಿನ್ನೆಲೆ ದರ್ಪಣತೀರ್ಥ ನದಿಯು ತುಂಬಿ ಹರಿಯುತ್ತಿದ್ದು, ಆದಿ ಸುಬ್ರಹ್ಮಣ್ಯ ದೇವಸ್ಥಾನ ಜಲಾವೃತವಾಗಿರುವುದರಿಂದ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.

Also read: ಶಿಕಾರಿಪುರ: ಒಬ್ಬ ಕಳ್ಳನ ಬಂಧನ, ಒಂಬತ್ತು ಬೈಕ್ ವಶ
ರಕ್ಷಣಾ ಕಾರ್ಯಾಚರಣೆಗಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ರಾಜ್ಯ ವಿಪತ್ತು ಮೇಲ್ವಿಚಾರಣಾ ಪಡೆ(ಎಸ್‌ಡಿಆರ್‌ಎಫ್)ಗಳನ್ನು ಈಗಾಗಲೇ ಸುಬ್ರಹ್ಮಣ್ಯಕ್ಕೆ ಕಳುಹಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ೦ ಸುನೀಲ್ ಕುಮಾರ್ ಹೇಳಿದ್ದಾರೆ.










Discussion about this post