ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಸಂಸದ ಬಿ. ವೈ. ರಾಘವೇಂದ್ರ MP B Y Raghavendra ಅವರು ಕೇಂದ್ರ ನಾಗರಿಕ ವಿಮಾನಯಾನ ಹಾಗೂ ಉಕ್ಕು ಖಾತೆಯ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ Central Minister Jyotiradhithya Scindia ಅವರನ್ನು ಭೇಟಿ ಮಾಡಿ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಿದರು.
ಶಿವಮೊಗ್ಗ ಏರ್ಪೋರ್ಟ್ ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಂಪೂರ್ಣ ವಿವರಗಳನ್ನು ನೀಡಿದರು. ಹಾಗೂ ಬಾಕಿ ಉಳಿದಿರುವ ಕಾಮಗಾರಿಗಳ ಬಗ್ಗೆ ಮಾನ್ಯ ಸಚಿವರೊಂದಿಗೆ ಚರ್ಚಿಸಿ ಸೂಕ್ತ ಸಹಕಾರ ನೀಡಲು ಮನವಿ ಮಾಡಿದರು.
ಭದ್ರಾವತಿಯಲ್ಲಿರುವ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಸ್ಥಾವರಕ್ಕೆ (VISL). ಅಗತ್ಯ ಬಂಡವಾಳವನ್ನು ಹೂಡಿ ಪುನರುಜ್ಜೀವನಗೊಳಿಸಲು ಸೂಕ್ತ ಕ್ರಮಗಳನ್ನು ಕೈಕೊಳ್ಳಲು ವಿನಂತಿಸಿದರು.
ಈ ಸಂದರ್ಭದಲ್ಲಿ ವಿಐಎಸ್‌ಎಲ್ ನಿವೃತ್ತ ಕಾರ್ಮಿಕರ ಸಂಘದ ಅಧ್ಯಕ್ಷ ರಾಮಲಿಂಗಯ್ಯ ಹಾಗೂ ಗೌರವಾಧ್ಯಕ್ಷ ನಾಗಭೂಷಣ್ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post