ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಅವರಿಗೆ ಕೊರೋನಾ Corona ಪಾಟಿಸಿವ್ ಬಂದಿದ್ದು, ಈ ಹಿನ್ನೆಲೆಯಲ್ಲಿ ಅವರ ದೆಹಲಿ ಪ್ರವಾಸ ರದ್ದುಗೊಂಡಿದೆ.
ನವದೆಹಲಿಯಲ್ಲಿ ಎಲ್ಲ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿಯವರು ನಡೆಸಲಿರುವ ಸಭೆಯಲ್ಲಿ ಬೊಮ್ಮಾಯಿಯವರು ಪಾಲ್ಗೊಳ್ಳಬೇಕಿತ್ತು. ಆದರೆ, ಕೊರೋನಾ ಸೋಂಕು ಹಿನ್ನೆಲೆಯಲ್ಲಿ ಅವರು ದೆಹಲಿ ಪ್ರವಾಸವನ್ನು ರದ್ದು ಮಾಡಿದ್ದಾರೆ.
ಆರೋಗ್ಯ ವಿಚಾರಿಸಿದ ಗಣ್ಯರು:
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಆರೋಗ್ಯವನ್ನು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ B S Yadiyurappa ವಿಚಾರಿಸಿದ್ದಾರೆ.
ಅಲ್ಲದೇ, ಸಚಿವರಾದ ಡಾ. ಅಶ್ವತ್ಥ್ ನಾರಾಯಣ, ಹಾಲಪ್ಪ ಆಚಾರ್, ಪ್ರಭು ಚೌಹಾಣ್, ಬಿ.ಸಿ. ನಾಗೇಶ್ ದೂರವಾಣಿ ಮೂಲಕ ಆರೋಗ್ಯ ವಿಚಾರಿಸಿದರು.
Also read: ಹೆಬ್ಬಾಳೆ ಸೇತುವೆ ಮುಳುಗಡೆ: ಹೊರನಾಡು-ಕಳಸ ಸಂಪರ್ಕಕ್ಕೆ ಅಡ್ಡಿ
ಸದ್ಯ ಮುಖ್ಯಮಂತ್ರಿಗಳು ತಮ್ಮ ಆರ್’ಟಿ ನಗರದ ನಿವಾಸದಲ್ಲಿ ವಿಶ್ರಾಂತಿಯಲ್ಲಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post