ಕಲ್ಪ ಮೀಡಿಯಾ ಹೌಸ್ | ಕೊಡಗು |
ಜಿಲ್ಲೆಯಲ್ಲಿ ರಕ್ಕಸ ಮಳೆಯ ಅಬ್ಬರ ಕ್ಷಣದಿಂದ ಕ್ಷಣಕ್ಕೆ ಹೆಚ್ಚಾಗುತ್ತಿದ್ದು, ಪರಿಣಾಮವಾಗಿ ಬೆಟ್ಟಗಳೇ ಕೊಚ್ಚಿ ಹೋಗುತ್ತಿದ್ದು, ರಸ್ತೆಗಳು ಕುಸಿದು, ಎಲ್ಲೆಲ್ಲೂ ನೀರಿನ ರಭಸ ಆರ್ಭಟಿಸುತ್ತಿದೆ.
ಕೊಡಗು ಜಿಲ್ಲಾ ಗಡಿಭಾಗದಲ್ಲಿ ಮಳೆ ಆರ್ಭಟಿಸುತ್ತಿದ್ದು, ಪರಿಣಾಮವಾಗಿ ದಬ್ಬಡ್ಕದಲ್ಲಿ ಬೆಟ್ಟ ಭಾರೀ ಪ್ರಮಾಣದಲ್ಲಿ ಕುಸಿದಿದೆ. ನಾಲ್ಕು ಕಾಲು ಬೆಟ್ಟ ಕಿಲೋ ಮೀಟರ್’ಗಟ್ಟಲೇ ಜರುಗಿದ್ದು, ನೀರಿನ ಆರ್ಭಟಕ್ಕೆ ಜನರು ಬೆಚ್ಚಿ ಬಿದ್ದಿದ್ದಾರೆ.
ಇನ್ನು, ಗಡಿಭಾಗದ ಕುಟ್ಟು ಹಾಗೂ ವಯನಾಡ್ ರಸ್ತೆ ಬೆಟ್ಟ ಕುಸಿದು ಬೃಹತ್ ಗಾತ್ರದ ಕಲ್ಲು ಹಾಗೂ ಮರದ ಅವಶೇಷಗಳು ರಸ್ತೆ ಬಿದ್ದು, ಸಂಪರ್ಕಕ್ಕೆ ಅಡ್ಡಿಯಾಗಿದೆ. ಅದೇ ರೀತಿ, ಕರಿಕೆ ರಸ್ತೆಯಲ್ಲಿ ಭಾರೀ ಪ್ರಮಾಣದಲ್ಲಿ ನೀರು ಹರಿಯುತ್ತಿದ್ದು, ಸಂಚಾರಕ್ಕೆ ತೊಂದರೆಯಾಗಿದೆ.
ಜಿಲ್ಲೆಯಲ್ಲಿ ಎಷ್ಟು ಮಳೆಯಾಗಿದೆ? ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ?
ಕೊಡಗು ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ ಮಳೆ 74.68 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 34.68 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 2256.46 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1824.65 ಮಿ.ಮೀ ಮಳೆಯಾಗಿತ್ತು.
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 95.93 ಮಿ.ಮೀ. ಕಳೆದ ವರ್ಷ ಇದೇ ದಿನ 51.80 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 3296.49 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2495.84 ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 54.32 ಮಿ.ಮೀ. ಕಳೆದ ವರ್ಷ ಇದೇ ದಿನ 17.98 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1708.60 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1480.66 ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 73.80 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 34.27 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1764.29 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1497.44 ಮಿ.ಮೀ. ಮಳೆಯಾಗಿತ್ತು.
Also read: ದೌರ್ಜನ್ಯ ತಡೆಯಲು ವಿದ್ಯಾರ್ಥಿನಿಯರು ಸ್ವಯಂ ರಕ್ಷಣೆಗೆ ಸಿದ್ದರಾಗಿ: ಅನ್ನಪೂರ್ಣ ಕರೆ
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 96, ನಾಪೋಕ್ಲು 110.20, ಸಂಪಾಜೆ 47.50, ಭಾಗಮಂಡಲ 130, ವಿರಾಜಪೇಟೆ ಕಸಬಾ 49.80, ಹುದಿಕೇರಿ 90.20, ಶ್ರೀಮಂಗಲ 67.40, ಪೆÇನ್ನಂಪೇಟೆ 45, ಅಮ್ಮತಿ 45, ಬಾಳೆಲೆ 28.50, ಸೋಮವಾರಪೇಟೆ ಕಸಬಾ 91.80, ಶನಿವಾರಸಂತೆ 37.40, ಶಾಂತಳ್ಳಿ 217, ಕೊಡ್ಲಿಪೇಟೆ 47.40, ಕುಶಾಲನಗರ 18, ಸುಂಟಿಕೊಪ್ಪ 31.20 ಮಿ.ಮೀ. ಮಳೆಯಾಗಿದೆ.
ಹಾರಂಗಿ ಜಲಾಶಯದ ನೀರಿನ ಮಟ್ಟ (06-08-2022) ವರದಿ
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2855 ಅಡಿಗಳು. ಕಳೆದ ವರ್ಷ ಇದೇ ದಿನ 2855.12 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 14.60 ಮಿ.ಮೀ., ಕಳೆದ ವರ್ಷ ಇದೇ ದಿನ 15.40 ಮಿ.ಮೀ., ಇಂದಿನ ನೀರಿನ ಒಳಹರಿವು 7,186 ಕ್ಯುಸೆಕ್, ಕಳೆದ ವರ್ಷ ಇದೇ ದಿನ 7487 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 12,069 ಕ್ಯುಸೆಕ್. ನಾಲೆಗೆ 100 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 9333 ಕ್ಯುಸೆಕ್. ನಾಲೆಗೆ 350 ಕ್ಯುಸೆಕ್.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post