ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಹರ್ ಘರ್ ತಿರಂಗ್ ಅಭಿಯಾನದ ಅಡಿಯಲ್ಲಿ ಆಗಸ್ಟ್ 13ರಿಂದ 15ರವರೆಗೆ ಜಿಲ್ಲೆಯ ಎಲ್ಲಾ ಮನೆ, ಸರ್ಕಾರಿ ಹಾಗೂ ಸರ್ಕಾರೇತರ ಸಂಘ ಸಂಸ್ಥೆಗಳ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಹಾರಿಸಲು ಸಿದ್ಧತೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ತಿಳಿಸಿದರು.
ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಹರ್ ಘರ್ ತಿರಂಗ ಅಭಿಯಾನವನ್ನು ಯಶಸ್ವಿಯಾಗಿ ಆಯೋಜಿಸಲು ಕೈಗೊಂಡಿರುವ ಕ್ರಮಗಳ ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಅಭಿಯಾನವನ್ನು ಯಶಸ್ವಿಯಾಗಿ ನೆರವೇರಿಸಲು ಇಬ್ಬರು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಹಾಗೂ ಗ್ರಾಮ ಪಂಚಾಯತ್ ಮಟ್ಟದಲ್ಲಿ ವ್ಯವಸ್ಥಿತವಾಗಿ ಪ್ರತಿಯೊಂದು ಮನೆಯಲ್ಲೂ ತ್ರಿವರ್ಣ ಧ್ವಜವನ್ನು ಹಾರಿಸಲು ಪ್ರೇರಣೆ ನೀಡುವ ಕಾರ್ಯ ಮಾಡಲಾಗಿದೆ.

Also read: ಲಿಂಗನಮಕ್ಕಿ ಡ್ಯಾಂ ಭರ್ತಿಗೆ 18 ಅಡಿ ಬಾಕಿ: ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ನದಿ ಪಾತ್ರದ ಜನರಿಗೆ ಸೂಚನೆ
ಇದಲ್ಲದೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ನಗರ ಸ್ಥಳೀಯ ಸಂಸ್ಥೆಗಳಿಗೆ ಒಟ್ಟು 80ಸಾವಿರ ತ್ರಿವರ್ಣ ಧ್ವಜಗಳನ್ನು ಪೂರೈಕೆ ಮಾಡಲಾಗಿದೆ. ಅಭಿಯಾನದ ಯಶಸ್ವಿಗೆ ಜಿಲ್ಲೆಯ ಎಲ್ಲಾ 11 ನಗರ ಸ್ಥಳೀಯ ಸಂಸ್ಥೆಗಳು ಸಭೆಗಳನ್ನು ನಡೆಸಿ ಪೂರ್ವ ಸಿದ್ಧತೆಯನ್ನು ಮಾಡಿಕೊಂಡಿವೆ. ಜನಪ್ರತಿನಿಧಿಗಳು, ಸ್ವ ಸಹಾಯ ಸಂಘಗಳು, ವಿವಿಧ ಸಂಘ ಸಂಸ್ಥೆಗಳು ಸಹ ಈ ಕಾರ್ಯದಲ್ಲಿ ಕೈಜೋಡಿಸಿವೆ. ತ್ರಿವರ್ಣ ಧ್ವಜಕ್ಕೆ ತಲಾ 22ರೂಪಾಯಿ ದರ ನಿಗದಿಪಡಿಸಲಾಗಿದೆ. ಸಾರ್ವಜನಿಕರು ಸ್ಥಳೀಯ ಸಂಸ್ಥೆಗಳಿಂದ ಧ್ವಜವನ್ನು ಖರೀದಿಸಿ ಸ್ವಯಂ ಪ್ರೇರಣೆಯಿಂದ ತಮ್ಮ ಮನೆಗಳ ಮೇಲೆ ಪ್ರದರ್ಶಿಸಲು ಕೋರಲಾಗಿದೆ.

ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಹೊನ್ನಳ್ಳಿ, ಯೋಜನಾ ನಿರ್ದೇಶಕ ಕರಿಭೀಮಣ್ಣ ಮೂಕಪ್ಪನವರ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಉಮೇಶ್ ಉಪಸ್ಥಿತರಿದ್ದರು.









Discussion about this post