ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಈಗಾಗಲೇ ನಿರಂತರ ಮಳೆಯಿಂದ ತತ್ತರಿಸಿರುವ ಆರು ಜಿಲ್ಲೆಗಳಲ್ಲಿ ನಾಳೆ ಆರೆಂಜ್ ಹಾಗೂ ಆಗಸ್ಟ್ 10-11ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಈ ಕುರಿತಂತೆ ಹವಾಮಾನ ಇಲಾಖೆ ಮಾಹಿತಿ ಪ್ರಕಟಿಸಿದ್ದು, ಇದರಂತೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಆ.9ರ ನಾಳೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಉಳಿದಂತೆ, ನಾಳೆ ಬೀದರ್, ಗುಲ್ಬರ್ಗಾ, ಬೆಳಗಾಂ, ಹಾಸನ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಇನ್ನು, ಆಗಸ್ಟ್ 10 ಹಾಗೂ 11ರಂದು ಬೆಳಗಾಂ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
Also read: ಅಜಾದ್ ಕಾ ಅಮೃತ್ ಮಹೋತ್ಸವ: ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ವತಿಯಿಂದ ವಿಶೇಷ ಸ್ಪರ್ಧೆಗಳು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















