ಕಲ್ಪ ಮೀಡಿಯಾ ಹೌಸ್ | ಮಂಡ್ಯ |
ಕೆ.ಆರ್. ಪೇಟೆ ತಾಲ್ಲೂಕಿನಲ್ಲಿ ಮಳೆಯಿಂದ ಹೆಚ್ಚು ಹಾನಿಯಾಗಿದೆ. ಮಳೆಹಾನಿಗೆ ಒಳಗಾದ ಪ್ರದೇಶಗಳಿಗೆ ಅಧಿಕಾರಿಗಳು ಭೇಟಿ ನೀಡಿ ಸರ್ಕಾರಕ್ಕೆ ನಿಖರ ಮಾಹಿತಿ ನೀಡಬೇಕು ಎಂದು ರೇಷ್ಮೆ, ಯುವಸಬಲೀಕರಣ ಮತ್ತು ಕ್ರೀಡಾ ಸಚಿವರಾದ ಡಾ.ಕೆ.ಸಿ. ನಾರಾಯಣ ಗೌಡ Minister Narayana Gowda ಅವರು ತಿಳಿಸಿದರು.
ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಕೆ.ಆರ್ ಪೇಟೆ ತಾಲ್ಲೂಕಿನಲ್ಲಿ ಉಂಟಾದ ಮಳೆಹಾನಿ ಕುರಿತು ನಡೆದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರೈತರು, ಬಡ ಜನರು, ಗ್ರಾಮೀಣ ಭಾಗದ ಜನರು ಭಾರೀ ಮಳೆಯಿಂದಾಗಿ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಸರಿಯಾದ ಮಾಹಿತಿಯನ್ನು ಸರಿಯಾದ ಸಮಯಕ್ಕೆ ಒದಗಿಸದಿದ್ದಾರೆ ಸರ್ಕಾರದಿಂದ ಪರಿಹಾರ ದೊರಕುವುದಿಲ್ಲ ಇದನ್ನು ಅರ್ಥಮಾಡಿಕೊಂಡು ಜಿಲ್ಲಾಧಿಕಾರಿಗಳು ನಿಗದಿಪಡಿಸಿರುವ ಅವಧಿಯಲ್ಲಿ ಪರಿಶೀಲನೆ ನಡೆಸಿ ಮಾಹಿತಿ ಒದಗಿಸಿ ಎಂದರು.
Also read: ಹರ್ ಘರ್ ತಿರಂಗಾ ಅಭಿಯಾನಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್. ಲತಾ ಚಾಲನೆ
ಕೆ.ಆರ್.ಪೇಟೆ ತಾಲ್ಲೂಕಿನ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರುವಂತೆ ಆದೇಶ ಹೊರಡಿಸುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.
ಕೆರೆಗಳು ನೀರು ತುಂಬಿ ಕೋಡಿ ಒಡೆದಿದ್ದು ಅವುಗಳ ತುರ್ತು ಕಾಮಗಾರಿಗಳನ್ನು ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೆ.ಆರ್.ಪೇಟೆ ತಾಲ್ಲೂಕಿನಲ್ಲಿ ಮಳೆಯಿಂದ ಅನೇಕ ಮನೆಗಳು ಸಂಪೂರ್ಣ ಹಾನಿಯಾಗಿದೆ. ಜಾನುವಾರುಗಳು, ಕೃಷಿ ಬೆಳೆ, ರಸ್ತೆಗಳು,ಸೇತುವೆ, ಶಾಲೆಗಳು, ವಿದ್ಯುತ್ ಕಂಬಗಳು, ಕೆರೆಗಳು ಹೆಚ್ಚು ಹಾನಿಯಾಗಿರುವುದು ಇವುಗಳಿಗೆ ಸೂಕ್ತ ಪರಿಹಾರ ನೀಡಲು ಕ್ರಮವಹಿಸಿ ಎಂದು ಹೇಳಿದರು.
ಜಿಲ್ಲಾಧಿಕಾರಿ ಎಸ್.ಅಶ್ವತಿ ಅವರು ಮಾತನಾಡಿ ನಾಳೆ ಒಳಗಾಗಿ ಮಳೆಹಾನಿ ಕುರಿತಂತೆ ವರದಿಯನ್ನು ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು.
ಸರ್ಕಾರಕ್ಕೆ ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕಿದೆ. ಜನರು ಮಳೆ ಹಾನಿ ಪರಿಹಾರದಿಂದ ವಂಚಿತರಾದರೆ ಪರಿಶೀಲನೆ ನಡೆಸಿ ಸಂಬಂಧಿಸಿದ ಅಧಿಕಾರಿಗಳ ಮೇಲೆ ಕ್ರಮ ವಹಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು, ಜಿ.ಪಂ.ಸಿಇಒ ಶಾಂತ ಎಂ. ಹುಲ್ಮನಿ, ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಪಾಂಡವಪುರ ಉಪವಿಭಾಗಾಧಿಕಾರಿ ಶಿವಾನಂದಮೂರ್ತಿ,ಉಪವಿಭಾಗಾಧಿಕಾರಿ ಆರ್.ಐಶ್ವರ್ಯ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















