ಕಲ್ಪ ಮೀಡಿಯಾ ಹೌಸ್ | ಹೊಸಪೇಟೆ(ವಿಜಯನಗರ) |
ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ತಿಮ್ಮಲಾಪುರದ ಮೊರಾರ್ಜಿ ದೇಸಾಯಿ ವಿಜ್ಞಾನ ಪಧವಿ ಪೂರ್ವ ಕಾಲೇಜಿನ 13 ವಿದ್ಯಾರ್ಥಿಗಳು ಜೆಇಇ ಮುಖ್ಯ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ತಿಮ್ಮಲಾಪುರದ ಮೊರಾರ್ಜಿ ದೇಸಾಯಿ ವಿಜ್ಞಾನ ಪಧವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಅಹ್ಮದ್‍ಪಟೇಲ್ ಮುದ್ದೇಬಿಹಾಳ ಅವರು ತಿಳಿಸಿದ್ದಾರೆ.
ಉತ್ತೀರ್ಣರಾದ ವಿದ್ಯಾರ್ಥಿಗಳ ವಿವರ:
ಬೀಮೇಶ್ ಹೆಚ್, ಕೆಂಚನಾಯಕರ ಶ್ರೀನಿವಾಸ್, ಜೆ.ಸಿ.ಸಹನ, ಆಶೋಕ ಹೆಚ್, ಕುಬೇರ್ ಬಿ, ಅಪ್ಪು ಎ.ಎನ್, ಶಿಲ್ಪ ವೈ, ಅಭಿಷೇಕ್ ಜಿ.ಎಸ್, ಎಸ್.ಚಂದ್ರಶೇಖರ, ಕಿರಣ್, ರಾಹುಲ್ ಬಿ, ಚೈತ್ರ ಹಾಗೂ ಉದಯ್ ಇವರುಗಳು ಜೆಇಇ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.
Also read: ಶೋಕಿಗಾಗಿ ಬೈಕ್‌ಗಳನ್ನು ಕದಿಯುತ್ತಿದ್ದ ಬಿ.ಟೆಕ್ ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ!
ವಿದ್ಯಾರ್ಥಿಗಳ ಈ ಸಾಧನೆಗೆ ಸಂತಸ ವ್ಯಕ್ತಪಡಿಸಿರುವ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ಬೋಧಕೇತರ ಸಿಬ್ಬಂದಿ,ಇದಕ್ಕೆ ಕಾರಣರಾದ ಉಪನ್ಯಾಸಕರು ಮತ್ತು ಬೋಧಕೇತರ ಸಿಬ್ಬಂದಿಗೆ ಪ್ರಾಂಶುಪಲರು ಅಭಿನಂದನೆ ಸಲ್ಲಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















