ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಭಾರತದ 75ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ನಗರದ ದುರ್ಗಿಗುಡಿಯ ಸರ್ಕಾರಿ ಶಾಲಾ ಮಕ್ಕಳು ಸ್ವಾತಂತ್ಯೋತ್ಸವದ ಅಮೃತ ಮಹೋತ್ಸವದ ಪ್ರಯುಕ್ತ ಇಂದು ಬೃಹತ್ ಜಾಥಾ ನಡೆಸಿದರು.
ಸುಭಾಷ್ ಚಂದ್ರ ಬೋಸ್, ಬಾಲ ಗಂಗಾಧರ ತಿಲಕ್, ಮಹಾತ್ಮ ಗಾಂಧಿ, ಕಿತ್ತೂರು ರಾಣಿ ಚೆನ್ನಮ್ಮ, ಒನಕೆ ಓಬವ್ವ, ಬಾಬಾಸಾಹೇಬ್ ಅಂಬೇಡ್ಕರ್, ಝಾನ್ಸಿ ರಾಣಿ ಲಕ್ಷ್ಮೀಬಾಯಿ, ವೀರ ಸಾವರ್ಕರ್ ರಾದಿಯಾಗಿ ಸ್ವಾತಂತ್ರ್ಯ ಹೋರಾಟಗಾರರ ವಿವಿಧ ವೇಷಭೂಷಣಗಳನ್ನು ಚಿಣ್ಣರು ಧರಿಸಿ ‘ಭಾರತ್ ಮಾತಾ ಕಿ ಜೈ’ ಘೋಷಣೆಗಳನ್ನು ಕೂಗುತ್ತಾ ರಸ್ತೆಗಳಲ್ಲಿ ಸಂಚರಿಸಿದ್ದು ನೋಡುಗರ ಕಣ್ಮನ ಸೆಳೆಯಿತು.
ಶಾಲಾ ಶಿಕ್ಷಕರು, ಮುಖ್ಯೋಪಾಧ್ಯಾಯರು ಹಾಗೂ ಎಸ್.ಡಿ.ಎಂ.ಸಿ ಸದಸ್ಯರು ಪಾಲ್ಗೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















