ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದಲ್ಲಿ ಅಹಿತಕರ ಘಟನೆ ಹಿನ್ನೆಲೆಯಲ್ಲಿ ಶಿವಮೊಗ್ಗ ಹಾಗೂ ಭದ್ರಾವತಿ ನಗರ ಪ್ರದೇಶದ ಶಾಲಾ ಕಾಲೇಜುಗಳಿಗೆ ಆ.16ರ ನಾಳೆ ರಜೆ ಘೋಷಣೆ ಮಾಡಲಾಗಿದೆ.
ಈ ಕುರಿತಂತೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದು, ನಗರದಲ್ಲಿ ಸಂಭವಿಸಿದ ಅಹಿತಕರ ಘಟನೆ ಹಿನ್ನೆಲೆಯಲ್ಲಿ ಶಿವಮೊಗ್ಗ ಹಾಗೂ ಭದ್ರಾವತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಹೀಗಾಗಿ, ಆ.16ರ ನಾಳೆ ಎರಡೂ ನಗರ ವ್ಯಾಪ್ತಿಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















