No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
  • Advertise With Us
  • Grievances
  • About Us
  • Contact Us
Wednesday, July 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಮುದ್ರಣ ಮಾಧ್ಯಮದ ಘನತೆ ಉಳಿಸಲು ಕಲ್ಲೆ ಶಿವೋತ್ತಮ ರಾವ್ ಕರೆ

ಕೆಯುಡಬ್ಲ್ಯೂಜೆ ಮನೆಯಂಗಳದಲ್ಲಿ ಗೌರವ ಕಾರ್ಯಕ್ರಮಕ್ಕೆ ಚಾಲನೆ

kalpa News by kalpa News
August 16, 2022
in ಬೆಂಗಳೂರು ನಗರ
0
ಮುದ್ರಣ ಮಾಧ್ಯಮದ ಘನತೆ ಉಳಿಸಲು ಕಲ್ಲೆ ಶಿವೋತ್ತಮ ರಾವ್ ಕರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು |

ಮುದ್ರಣ ಮಾಧ್ಯಮ ಅತ್ಯಂತ ಶ್ರೇಷ್ಠವಾದದ್ದು. ಅದರ ಮೌಲ್ಯ ಕುಸಿಯದಂತೆ ನೋಡಿಕೊಳ್ಳುವ ಹೊಣೆ ಇಂದಿನ ಪೀಳಿಗೆಯ ಮೇಲಿದೆ ಎಂದು ಹಿರಿಯ ಪತ್ರಕರ್ತರೂ, ‘ಜನಪ್ರಗತಿ’ಯ ಸಂಪಾದಕರಾಗಿದ್ದ ಕಲ್ಲೆ ಶಿವೋತ್ತಮ ರಾವ್ ಅವರು ಅಭಿಪ್ರಾಯಪಟ್ಟರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಸ್ವಾತಂತ್ರ್ಯದ ಅಮೃತೋತ್ಸವದ ಅಂಗವಾಗಿ ಪತ್ರಿಕೋದ್ಯಮದ ಹಿರಿಯರಿಗೆ ಅವರ ಮನೆಯ ಅಂಗಳದಲ್ಲೇ ಗೌರವಿಸುವ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಈ ಸರಣಿಯ ಮೊದಲ ಕಾರ್ಯಕ್ರಮವಾಗಿ ಕಲ್ಲೆ ಶಿವೋತ್ತಮ ರಾವ್ ಅವರನ್ನು ಬೆಂಗಳೂರಿನ ಅವರ ಯಲಹಂಕ ನಿವಾಸದಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು.
ಮುದ್ರಿತವಾದದ್ದು ಒಂದು ದಾಖಲೆಯಿದ್ದಂತೆ. ಹಾಗಾಗಿ ಓದುಗರಿಗೆ ಅದರ ಮೇಲೆ ನಂಬಿಕೆ ಹೆಚ್ಚು. ಆ ನಂಬಿಕೆಯನ್ನು ಉಳಿಸಿಕೊಳ್ಳಲು ಇಂದಿನ ಪತ್ರಿಕೋದ್ಯಮ ಶ್ರಮಿಸಬೇಕಾಗಿದೆ. ನಾನು ನನ್ನ ಇಡೀ ಬದುಕಿನಲ್ಲಿ ನುಡಿದಂತೆ ನಡೆದಿದ್ದೇನೆ. ದಲಿತರು, ಹಿಂದುಳಿದವರಿಗೆ, ದುರ್ಬಲರಿಗೆ ದನಿ ನೀಡಲು ಶ್ರಮಿಸಿದ್ದೇನೆ. ಇದು ನನಗೆ ಧನ್ಯತೆಯನ್ನು ನೀಡಿದೆ. ಬದುಕು ಸಿದ್ಧಾಂತ ಎರಡನ್ನೂ ಒಟ್ಟಿಗೆ ಕೊಂಡೊಯ್ದಿದ್ದೇನೆ ಎಂಬ ಹೆಮ್ಮೆ ಇದೆ ಎಂದರು.

ಲೋಹಿಯಾ, ಗೋಪಾಲಗೌಡ, ದೇವರಾಜ ಅರಸು, ಎಸ್.ಎಂ.ಕೃಷ್ಣ ಅವರ ಜೊತೆಗೆ ಒಡನಾಡಿದ ನನಗೆ ಪತ್ರಿಕೋದ್ಯಮ ಎನ್ನುವುದು ಜನ ಸಮುದಾಯಕ್ಕೆ ಸಮಾನತೆಯನ್ನು ತಂದುಕೊಡುವ ಒಂದು ಸೇತುವೆಯಾಗಿತ್ತು. ಹಾಗಾಗಿ ನನ್ನ ಪತ್ರಿಕೆಯ ಮೂಲಕ ಅದನ್ನು ಮಾಡಲು ಶ್ರಮಿಸಿದ್ದೇನೆ ಎಂದರು.
ಇಷ್ಟೆಲ್ಲಾ ಮಾಡಿದ ನನ್ನನ್ನು ಇಂದಿನ ಪೀಳಿಗೆ ನೆನಪಿಟ್ಟುಕೊಂಡಿಲ್ಲವೇನೋ ಎಂದುಕೊಳ್ಳುತ್ತಿರುವಾಗ ಕಾರ್ಯ ನಿರತ ಪತ್ರಕರ್ತರ ಸಂಘ ಮನೆಗೇ ಬಂದು ನನಗೆ ಗೌರವಿಸಿದ್ದು ನನಗೆ ಮನದುಂಬಿ ಬಂದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

Also read: ಸ್ವಾತಂತ್ರ ಹೋರಾಟಗಾರರ ಆದರ್ಶವನ್ನು ಮೈಗೂಡಿಸಿಕೊಳ್ಳಿ: ತಹಶೀಲ್ದಾರ್ ಶೋಭಲಕ್ಷ್ಮಿ

ರಾಷ್ಟಪತಿ ಹುದ್ದೆಗೆ ಒಬ್ಬ ಹೆಣ್ಣು ಮಗಳು ದ್ರೌಪದಿ ಮುರ್ಮು ಅವರು ಆಯ್ಕೆಯಾಗಿರುವ ಕಾರಣ, ರಾಷ್ಟ್ರಪತಿ ಬದಲಿಗೆ ರಾಷ್ಟ್ರಾಧ್ಯಕ್ಷೆ ಎಂದು ಸಂಬೋದಿಸುವುದು ಸೂಕ್ತ ಎಂದು ಹೇಳಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಮಾತನಾಡಿ, 1932ರಲ್ಲಿ ಡಿವಿಜಿ ಅವರು ಹುಟ್ಟುಹಾಕಿದ ಪತ್ರಕರ್ತರ ಸಂಘ ಮುನ್ನಡೆಯಲು ಅನೇಕ ಹಿರಿಯರು ಕಾರಣರಾಗಿದ್ದಾರೆ. ಹಾಗೆಯೇ ನಮ್ಮ ಪತ್ರಿಕೋದ್ಯಮಕ್ಕೆ ಘನತೆಯನ್ನು ತಂದುಕೊಟ್ಟ ಮಹತ್ವದ ಹಿರಿಯರಿದ್ದಾರೆ. ಅಂತಹವರಲ್ಲಿ ಕಲ್ಲೆ ಶಿವೋತ್ತಮ ರಾವ್ ಅವರು ಮುಖ್ಯರು. ಹಾಗಾಗಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ನಮ್ಮ ಹಿರಿಯರನ್ನು ಭೇಟಿ ಮಾಡುವ, ಅವರ ಅನುಭವಗಳಿಗೆ ಕಿವಿಯಾಗಲು ಅದನ್ನು ಇಂದಿನ ಪತ್ರಿಕೋದ್ಯಮದಲ್ಲಿ ಅಳವಡಿಸಿಕೊಳ್ಳಲು ‘ಮನೆಯಂಗಳದಲ್ಲಿ ಮನದುಂಬಿ ಗೌರವ’ ಎನ್ನುವ ಈ ಯೋಜನೆ ರೂಪಿಸಲಾಯಿತು ಎಂದರು.
ಕಲ್ಲೆ ಶಿವೋತ್ತಮ ರಾವ್ ಅವರ ಮಗಳು ಅನಿತಾ ಪ್ರಿಯಕಾರಿಣಿ ಕಲ್ಲೆ ಅವರು ಮಾತನಾಡಿ, ಅಪ್ಪ ಪತ್ರಿಕೋದ್ಯಮದಲ್ಲಿ ತೀವ್ರವಾಗಿ ತೊಡಗಿಸಿಕೊಂಡಿದ್ದಾಗ ನಮ್ಮ ಕುಟುಂಬ ಅವರಿಗೆ ಬೆನ್ನೆಲುಬಾಗಿ ನಿಂತಿದ್ದನ್ನು ಸ್ಮರಿಸಿದರು. ಅವರ ತತ್ವ ಆದರ್ಶಗಳನ್ನು ಮನೆಯೊಳಗೂ ಜಾರಿಯಲ್ಲಿಟ್ಟಿದ್ದರು. ಅದು ನಮಗೆ ದಾರಿದೀಪವಾಯಿತು ಎಂದರು.

ಹಿರಿಯ ಪತ್ರಕರ್ತರಾದ ಜಿ ಎನ್ ಮೋಹನ್, ಕಂಕ ಮೂರ್ತಿ, ಪುತ್ರ ಅಜಿತ್ ಅಶುತೋಷ್ ಕಲ್ಲೆ ಈ ಸಂದರ್ಭದಲ್ಲಿ ಮಾತನಾಡಿದರು. ಸಂಘದ ಪ್ರಧಾನ ಕಾರ್ಯದರ್ಶಿ ಜಿ ಸಿ ಲೋಕೇಶ ಸ್ವಾಗತಿಸಿದರು. ಬೆಂಗಳೂರು ನಗರ ಘಟಕದ ಸೋಮಶೇಖರ್ ಗಾಂಧಿ, ಕೆ.ವಿ.ಪರಮೇಶ್, ದೇವರಾಜ್‌ ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸ್ವಾತಂತ್ರ ಹೋರಾಟಗಾರರ ಆದರ್ಶವನ್ನು ಮೈಗೂಡಿಸಿಕೊಳ್ಳಿ: ತಹಶೀಲ್ದಾರ್ ಶೋಭಲಕ್ಷ್ಮಿ

Next Post

ನಮ್ಮ ಹೆಮ್ಮೆ: ವಿಜಯನಗರದಲ್ಲಿ ಅನಾವರಣಗೊಂಡು ರಾರಾಜಿಸುತ್ತಿದೆ ದೇಶದ ಅತಿ ಎತ್ತರದ ರಾಷ್ಟ್ರ ಧ್ವಜ

kalpa News

kalpa News

Next Post
ನಮ್ಮ ಹೆಮ್ಮೆ: ವಿಜಯನಗರದಲ್ಲಿ ಅನಾವರಣಗೊಂಡು ರಾರಾಜಿಸುತ್ತಿದೆ ದೇಶದ ಅತಿ ಎತ್ತರದ ರಾಷ್ಟ್ರ ಧ್ವಜ

ನಮ್ಮ ಹೆಮ್ಮೆ: ವಿಜಯನಗರದಲ್ಲಿ ಅನಾವರಣಗೊಂಡು ರಾರಾಜಿಸುತ್ತಿದೆ ದೇಶದ ಅತಿ ಎತ್ತರದ ರಾಷ್ಟ್ರ ಧ್ವಜ

Leave a Reply Cancel reply

Your email address will not be published. Required fields are marked *

No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL