ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವೀರ ಸಾವರ್ಕರ್ ಫ್ಲೆಕ್ಸ್ ತೆರವು ವಿಚಾರದಲ್ಲಿ ಉಂಟಾದ ಗಲಭೆಯಲ್ಲಿ ದುಷ್ಕರ್ಮಿಗಳಿಂದ ಚೂರಿ ಇರಿತಕ್ಕೆ ಒಳಗಾದ ಪ್ರೇಮ್ ಸಿಂಗ್ ಅವರ ಆರೋಗ್ಯವನ್ನು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ B L Santhosh ಅವರು ವಿಚಾರಿಸಿದರು.
ಇಂದು ಮುಂಜಾನೆ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿದ ಅವರು ಚಿಕಿತ್ಸೆ ಪಡೆಯುತ್ತಿರುವ ಪ್ರೇಮ್ ಸಿಂಗ್ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಆನಂತರ ಸಿಮ್ಸ್ ಮುಖ್ಯಸ್ಥ ಡಾ. ಶ್ರೀಧರ್ ಹಾಗೂ ಇತರ ವೈದ್ಯರಿಂದ ಪ್ರೇಮ್ ಸಿಂಗ್ ಅವರ ಆರೋಗ್ಯದ ಕುರಿತಾಗಿ ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ಮಾಜಿ ಸಚಿವ, ಶಾಸಕ ಕೆ.ಎಸ್. ಈಶ್ವರಪ್ಪ, K S Eshwarappa ಸಂಸದ ಬಿ.ವೈ. ರಾಘವೇಂದ್ರ, M P Raghavendra ಕೆ.ಈ. ಕಾಂತೇಶ್, K E Kantesh ಪ್ರಮುಖರಾದ ಎಸ್. ದತ್ತಾತ್ರಿ, ಬಿ.ಎಸ್. ಚನ್ನಬಸಪ್ಪ ಸೇರಿದಂತೆ ಹಲವರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post