ಕಲ್ಪ ಮೀಡಿಯಾ ಹೌಸ್ | ಮೈಸೂರು |
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ Siddramaiah ನಾಟಿ ಕೋಳಿ ಊಟ ಮಾಡಿ ದಸರಾ ಅಂಬಾರಿಗೆ ಪುಷ್ಪಾರ್ಚನೆ ಮಾಡಿದ್ದರ ಪರಿಣಾಮವೇ ಮತ್ತೇ ಅಂಬಾರಿಗೆ ಪುಷ್ಟಾರ್ಚನೆ ಮಾಡುವ ಅವಕಾಶ ಅವರಿಗೆ ಸಿಗಲಿಲ್ಲ ಎಂದು ಸಂಸದ ಪ್ರತಾಪ್ ಸಿಂಹ MP Pratahp Simha ಆರೋಪ ಮಾಡಿದ್ದಾರೆ.
ಮಾಂಸ ತಿಂದು ದೇವಸ್ಥಾನಕ್ಕೆ ಹೋದರೆ ತಪ್ಪೇನು ಎಂಬ ಸಿದ್ದರಾಮಯ್ಯ ಹೇಳಿಕೆ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, 2017ರ ದಸರಾ ಜಂಬೂ ಸವಾರಿ ದಿನ ಲಲಿತ್ ಮಹಲ್ ಪ್ಯಾಲೇಸ್‌ನಲ್ಲಿ ಸಿದ್ದರಾಮಯ್ಯ ನಾಟಿ ಕೋಳಿ ತಿಂದು ನಂತರ ಅಂಬಾರಿಗೆ ಪುಷ್ಪಾರ್ಚನೆ ಮಾಡಿದ್ದರು. ಇದಕ್ಕೆ ನಾನೇ ಸಾಕ್ಷಿ ಎಂದು ತಿಳಿಸಿದ್ದಾರೆ.
ಸಿದ್ದರಾಮಯ್ಯ ಅವರೇ ಮಾಂಸ ತಿಂದು ಚಾಮುಂಡಿ ತಾಯಿ ದರ್ಶನ ಮಾಡುವಂತೆ ನಿಮ್ಮ ಶ್ರೀಮತಿಯವರ ಬಳಿ ಹೇಳಿದರೆ, ಅವರು ಹೋಗುತ್ತಾರಾ ಅಂತಾ ಕೇಳಿ. ನಿಮ್ಮ ಅಭಿಪ್ರಾಯಕ್ಕೆ ನಿಮ್ಮ ಶ್ರೀಮತಿಯವರ ಸಹಮತ ಇದೆಯಾ ಎಂದು ಕೇಳಿ ಎಂದಿದ್ದಾರೆ.
Also read: ಅನೇಕ ಜನಪರ ಕಾರ್ಯಗಳನ್ನು ಜಾರಿಗೆ ತಂದವರು ಡಿ. ದೇವರಾಜ ಅರಸು: ಚಳ್ಳಕೆರೆ ಶಾಸಕ ರಘುಮೂರ್ತಿ
ಸಿದ್ದರಾಮನ ಹುಂಡಿಯಲ್ಲಿ ಸಿದ್ದರಾಮೇಶ್ವರ ಜಾತ್ರೆ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ಸಿಹಿ ಊಟ ಮಾಡಿಸಿದ್ದು ಯಾಕೆ? ಮಾಂಸದ ಊಟ ಯಾಕೆ ಮಾಡಿಸಲಿಲ್ಲ ಎಂದು ಸಂಸದ ಪ್ರತಾಪ್‌ಸಿಂಹ ಪ್ರಶ್ನಿಸಿದ್ದಾರೆ.
ಜಮೀರ್ ಖಾನ್ ಗೆ ನೀವು ಹಂದಿ ಮಾಂಸ ತಿನ್ನಬಾರದು ಅಂತಾ ದೇವರು ಹೇಳಿಲ್ಲ ಎಂದು ಹೇಳಿ ನೋಡೋಣಾ ಎಂದು ಸವಾಲು ಎಸೆದಿರುವ ಅವರು, ಸಿದ್ದರಾಮಯ್ಯ ಅವರು ಅಂದು ವೀರಶೈವ – ಲಿಂಗಾಯತ ಧರ್ಮ ಒಡೆದರು. ಇಂದು ಮಾಂಸ ತಿಂದು ಬಸವೇಶ್ವರ ದೇವಸ್ಥಾನಕ್ಕೆ ಹೋಗಿ ಬಸವ ಅನುಯಾಯಿಗಳ ನಂಬಿಕೆ ಒಡೆದಿದ್ದಾರೆ ಎಂದು ವಾಗ್ಧಾಳಿ ನಡೆಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post