ಕಲ್ಪ ಮೀಡಿಯಾ ಹೌಸ್ | ಮೈಸೂರು |
ಸಾವರ್ಕರ್ ವಿಚಾರದಲ್ಲಿ ವಿರೋಧಿ ಹೇಳಿಕೆ ನೀಡಿರುವ ಮಾಜಿ ಸಿಎಂ ಸಿದ್ದರಾಮಯ್ಯಗೆ Siddaramaiah ಅವರ ತವರು ಜಿಲ್ಲೆಯಲ್ಲೇ ಟಕ್ಕರ್ ನೀಡಲು ಮುಂದಾಗಿರುವ ಬಿಜೆಪಿ, ಸಾವರ್ಕರ್ ರಥಯಾತ್ರೆಗೆ Savarkar Rathayathre ಅಲ್ಲಿಯೇ ಚಾಲನೆ ನೀಡಿದ್ದು, ಇದಕ್ಕೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ B S Yadiyurappa ಎಂಟ್ರಿ ಕೊಟ್ಟಿದ್ದಾರೆ.
ಬಿಜೆಪಿ ಹಮ್ಮಿಕೊಂಡಿರುವ ಸಾವರ್ಕರ್ ರಥಯಾತ್ರೆಗೆ ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರಿನಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಚಾಲನೆ ನೀಡಿದ್ದಾರೆ.
ಇಂದು ಮುಂಜಾನೆ ಮೈಸೂರಿಗೆ ಆಗಮಿಸಿದ ವೇಳೆ ಯಡಿಯೂರಪ್ಪ ಅವರಿಗೆ ಮೈಸೂರು ಪೇಟ ತೊಡಿಸಿ ಸಂಸದ ಪ್ರತಾಪ್ ಸಿಂಹ ಸ್ವಾಗತಿಸಿದರು. ಈ ವೇಳೆ ಮಾತನಾಡಿದ ಬಿಎಸ್’ವೈ, ಸಾವರ್ಕರ್ ರಥಯಾತ್ರೆ ಮೂಲಕ ಅವರ ವಿಚಾರಧಾರೆಗಳನ್ನು ಜನರಿಗೆ ತಿಳಿಸಿ, ಜಾಗೃತಿ ಹಾಗೂ ದೇಶಭಕ್ತಿ ಮೂಡಿಸುವ ಉದ್ದೇಶವನ್ನು ಹೊಂದಲಾಗಿದೆ ಎಂದರು.
Also read: ಎಸಿಬಿ ರದ್ಧು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ರಾಜ್ಯ ಸರ್ಕಾರ
ರಥಯಾತ್ರೆಗೆ ಈಗಾಗಲೇ ಅಭೂತಪೂರ್ವ ಪ್ರಶಂಸೆ ವ್ಯಕ್ತವಾಗಿದ್ದು, ಪ್ರತಿಯೊಬ್ಬರೂ ಇದಕ್ಕೆ ಸಹಕಾರ ನೀಡಬೇಕು ಎಂದರೆ ಮನವಿ ಮಾಡಿದರು.
ಸಿದ್ಧರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಬಿಎಸ್’ವೈ, ಸಿದ್ಧರಾಮಯ್ಯ ಓರ್ವ ಮಾಜಿ ಮುಖ್ಯಮಂತ್ರಿಯಾಗಿದ್ದು, ಅವರ ಅನುಭವ ಹಾಗೂ ಘನತೆಗೆ ತಕ್ಕಂತೆ ನಡೆದುಕೊಳ್ಳಬೇಕು. ಇವರ ಸ್ವಾರ್ಥಕ್ಕೆ ಹಠ ಮಾಡಿ ಕೊಡಗಿಗೆ ಹೋಗಿ ಪ್ರತಿಭಟನೆ ನಡೆಸಿದರೆ ಗೊಂದಲವುಂಟಾಗಿ ಅಲ್ಲಿನ ಜನರಿಗೆ ತೊಂದರೆಯಾಗುತ್ತದೆ. ಅವರ ಹಠ ಬಿಟ್ಟು ಗೌರವಯುವಾಗಿ ನಡೆದುಕೊಳ್ಳಬೇಕು ಎಂದರು.
ಅನುಭವಸ್ಥ ನಾಯಕರಾಗಿ ಸಿದ್ಧರಾಮಯ್ಯ ಈ ರೀತಿಯ ಹೇಳಿಕೆ ನೀಡುವುದು, ಈ ರೀತಿ ಬೇಜವಾಬ್ದಾರಿಯಿಂದ ನಡೆದುಕೊಂಡರೆ ಅವರಿಗೆ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post