No Result
View All Result
Record Budget: Chief Minister Must Fulfill Hometown Demands, Urges Dr. Shushrutha Gowda
English Articles

Record Budget: Chief Minister Must Fulfill Hometown Demands, Urges Dr. Shushrutha Gowda

by ಕಲ್ಪ ನ್ಯೂಸ್
March 2, 2026
0

Kalpa Media House  |  Mysuru | BJP leader and noted neurologist Dr. Shushrutha Gowda has urged Chief Minister Siddaramaiah to...

Read moreDetails
Hotel Management Students Participate in Tree Census

Hotel Management Students Participate in Tree Census

March 2, 2026
Minister Somanna Inspects & Inaugurates Road Under Bridges in Tumkur District eliminating level Crossing gates

Minister Somanna Inspects & Inaugurates Road Under Bridges in Tumkur District eliminating level Crossing gates

February 26, 2026
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
  • Advertise With Us
  • Grievances
  • About Us
  • Contact Us
Tuesday, March 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಶಿವಮೊಗ್ಗ: ಮಹಿಳೆಯರೇ ನಿರ್ಮಿಸಿದ ಕೆರೆ, ಊರಿಗಾಯಿತು ಆಸರೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 23, 2022
in Special Articles
0
ಶಿವಮೊಗ್ಗ: ಮಹಿಳೆಯರೇ ನಿರ್ಮಿಸಿದ ಕೆರೆ, ಊರಿಗಾಯಿತು ಆಸರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ವಿಶೇಷ ಲೇಖನ  |

ಭಾರತವು ಹಳ್ಳಿಗಳಿಂದ ಕೂಡಿದ ದೇಶವಾಗಿದ್ದು, ಇಲ್ಲಿಯ ಬಹುಪಾಲು ಜನರು ತಮ್ಮ ಜೀವನೋಪಾಯಕ್ಕೆ ಕೃಷಿ ಮತ್ತು ಕೂಲಿಯನ್ನೆ ನಂಬಿ ಬದುಕು ನಡೆಸುತ್ತಿದ್ದಾರೆ. ಭಾರತ ಸರ್ಕಾರವು ಗ್ರಾಮೀಣ ಭಾಗದ ಜನರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು ಈ ಯೋಜನೆಗಳ ಲಾಭ ಪಡೆದು ಇಂದು ಗ್ರಾಮೀಣ ಭಾಗದಲ್ಲಿ ಹಲವಾರು ಕಾಮಗಾರಿಗಳು ಯಶಸ್ವಿಯಾಗಿವೆ.
ಹೀಗೆಯೆ ಮಹಾತ್ಮ ಗಾಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅನುಕೂಲ ಪಡೆದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಖಂಡಿಕಾ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬರುವ ಕುಗ್ವೆ ಗ್ರಾಮದ ಜನರು ತಮ್ಮ ಊರಿನಲ್ಲಿ ಲಭ್ಯವಿರುವ ಸರ್ಕಾರಿ ಖಾಲಿ ಜಾಗದಲ್ಲಿ ಕೆರೆಯನ್ನು ನಿರ್ಮಿಸಿದ್ದಾರೆ.

ಕುಗ್ವೆ ಗ್ರಾಮದ ಹೊಸ ಕೆರೆ ಕಾಮಗಾರಿಯ ವಿಶೇಷವೆಂದರೆ ಕೆರೆ ನಿರ್ಮಾಣದಲ್ಲಿ ಗ್ರಾಮದ ಮಹಿಳೆಯರೇ ಹೆಚ್ಚಾಗಿ ಕಾರ್ಯ ನಿರ್ವಹಿಸಿರುವುದು.

ಖಂಡಿಕಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಗ್ವೆ ಗ್ರಾಮವು ಸಾಗರ ಪಟ್ಟಣ ಪ್ರದೇಶಕ್ಕೆ ಹೊಂದಿಕೊಂಡಂತೆ ಇದೆ. ಗ್ರಾಮದಲ್ಲಿ 189 ಕುಟುಂಬಗಳು ವಾಸವಾಗಿದ್ದು ಇಲ್ಲಿನ ಬಹುಪಾಲು ಜನರು ಕೃಷಿಯನ್ನೇ ಅವಲಂಬಿಸಿದ್ದಾರೆ.
ಕಾಮಗಾರಿಯ ಅನುಷ್ಠಾನ:
ಕುಗ್ವೆ ಗ್ರಾಮದಲ್ಲಿನ ನೂರಾರು ಮಹಿಳಾ ಕೂಲಿ ಕಾರ್ಮಿಕರು ಉದ್ಯೋಗ ನೀಡುವಂತೆ ಖಂಡಿಕಾ ಗ್ರಾಮ ಪಂಚಾಯ್ತಿಗೆ ಅರ್ಜಿ ಸಲ್ಲಿಸಿದಾಗ, ಇದರ ಬಗ್ಗೆ ಗಮನ ಹರಿಸಿದ ಗ್ರಾಮ ಪಂಚಾಯ್ತಿಯು, ಗ್ರಾಮದಲ್ಲಿನ 150 ರಿಂದ 180 ಜನರಿಗೆ ಏಕ ಕಾಲದಲ್ಲಿ ಕೂಲಿ ಕೆಲಸ ನೀಡಲು ಕುಗ್ವೆ ಗ್ರಾಮದ ಸರ್ವೆ ನಂ. 22 ರಲ್ಲಿನ 3 ಎಕರೆ ಸರ್ಕಾರಿ ಖಾಲಿ ಜಾಗದಲ್ಲಿ ಕೆರೆ ನಿರ್ಮಿಸಲು ಗ್ರಾಮ ಸಭೆಯಲ್ಲಿ ಅನುಮೋದನೆ ಪಡೆಯಿತು. ನಂತರ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಮಾರ್ಗಸೂಚಿಯನ್ವಯ ಕಾಮಗಾರಿಯನ್ನು ಅನುಷ್ಠಾನಗೊಳಿಸಲಾಯಿತು.

ಇಲ್ಲಿಯವರೆಗೆ ಖಂಡಿಕಾ ಗ್ರಾಮ ಪಂಚಾಯ್ತಿಯ ವ್ಯಾಪ್ತಿಯಲ್ಲಿ ಇರುವ ಕೆರೆಗಳಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿಯಲ್ಲಿ ಕೇವಲ ಹೂಳೆತ್ತುವ ಕಾಮಗಾರಿ ಮಾತ್ರ ಅನುಷ್ಠಾನಗೊಳ್ಳುತ್ತಿತ್ತು, ಆದರೆ ಹೊಸ ಪ್ರಯೋಗವೆಂಬಂತೆ ಹೊಸದಾಗಿ ಕೆರೆ ನಿರ್ಮಿಸಲು ಮುಂದಾದ ಗ್ರಾಮ ಪಂಚಾಯತ್ ಆಡಳಿತ, ಗ್ರಾ. ಪ. ಸದಸ್ಯರು, ಪಿ.ಡಿ.ಒ. ಮತ್ತು ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ನೂತನವಾಗಿ ನಿರ್ಮಾಣವಾಗುವ ಕೆರೆಯ ಒಳ ಮತ್ತು ಹೊರ ಹರಿವುಗಳ ಬಗ್ಗೆ ಪೂರ್ಣ ಪರಿಶೀಲನೆ ನಡೆಸಿ ರೈತರಿಗೆ ಮತ್ತು ಸಾರ್ವಜನಿಕರಿಗರಿಗೆ ಹಾಗೂ ಪ್ರಾಣಿ ಪಕ್ಷಿಗಳಿಗೆ ಅನುಕೂಲವಾಗುವ ಪ್ರದೇಶದಲ್ಲಿ ಕೆರೆ ನಿರ್ಮಿಸಲು ನಿರ್ಧರಿಸಿತು.
ಮಹಿಳೆಯರಿಂದಲೇ ಕೆರೆ ನಿರ್ಮಾಣ:
ಅಂದಾಜು ಮೊತ್ತ ರೂ.10 ಲಕ್ಷಗಳಲ್ಲಿ ಮಹಿಳೆಯರೇ ಮುಂದಾಳತ್ವ ವಹಿಸಿ ಕರೆ ನಿರ್ಮಿಸಿರುವುದ ಈ ಕೆರೆ ವಿಶೇಷ. ಒಟ್ಟು 146 ಜನ ಕೂಲಿ ಕಾರ್ಮಿಕರಲ್ಲಿ 134 ಜನ ಮಹಿಳೆಯರೇ ಭಾಗವಹಿಸಿದ್ದಾರೆ. ಕೆರೆ ನಿರ್ಮಾಣ ಕಾಮಗಾರಿಯಲ್ಲಿ ಒಟ್ಟು 2997 ಮಾನವ ದಿನಗಳು ಸೃಜನೆಯಾಗಿದ್ದು ನಿಗದಿತ ಸಮಯದೊಳಗೆ ಕೂಲಿ ಪಾವತಿಯಾಗಿದೆ. ಸದರಿ ಕಾಮಗಾರಿಯಲ್ಲಿ ಒಟ್ಟು 8 ಜನ ಮಹಿಳಾ ಮೇಟ್‍ಗಳು ಕೆಲಸ ನಿರ್ವಹಿಸಿದ್ದು, ಮೇಟ್‍ಗಳು ಗ್ರಾಮದ ಮಹಿಳೆಯರಿಗೆ ನರೇಗಾ ಯೋಜನೆಯಡಿ ದೊರೆಯುವ ಕೂಲಿ ಹಾಗೂ ಅವರ ಕೆಲಸದ ಕುರಿತು ಸರಿಯಾದ ಮಾಹಿತಿ ನೀಡಿ ತಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿದ್ದಾರೆ.

Also read: ಶಿವಮೊಗ್ಗ ಪಾಲಿಕೆ ಆಡಳಿತ ಪಕ್ಷದ ನಾಯಕರ ಕಚೇರಿಯಲ್ಲಿ ವೀರ ಸಾವರ್ಕರ್ ಫೋಟೋ ಅನಾವರಣ

ಕಾಮಗಾರಿಯ ಉಪಯೋಗ:
ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ನಿರ್ಮಾಣಗೊಂಡ ಹೊಸ ಕೆರೆ ಕಾಮಗಾರಿಯಿಂದಾಗಿ ಕುಗ್ವೆ ಗ್ರಾಮದ ಮಹಿಳಾ ಕೂಲಿ ಕಾರ್ಮಿಕರಿಗೆ ಉದ್ಯೋಗದ ಜೊತೆಗೆ, ಕೆರೆಯ ಸುತ್ತ ಮುತ್ತಲಿನ ಕೊಳವೆ ಬಾವಿ ಹಾಗೂ ಸಾರ್ವಜನಿಕ ಬಾವಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಇದರಿಂದಾಗಿ ರೈತರಿಗೆ ಬೇಸಿಗೆಯಲ್ಲೂ ಭತ್ತ ಬೆಳೆಯಲು ಅನೂಕೂಲವಾಗಿದೆ. ಇದರ ಜೊತೆಗೆ ಪ್ರಾಣಿ ಪಕ್ಷಿಗಳು ಹಾಗೂ ಗ್ರಾಮದ ಸುಮಾರು 50 ಕುಟುಂಬಗಳ ಜಾನುವಾರುಗಳಿಗೂ ಅನುಕೂಲವಾಗಿರುವುದು ಸಾರ್ವಜನಿಕರಲ್ಲಿ ಸಂತಸ ಮೂಡಿಸಿದೆ.

ಹೊಸ ಕೆರೆ ನಿರ್ಮಾಣದಲ್ಲಿ ನಾವುಗಳು ಶ್ರಮವಹಿಸಿ ಭಾಗವಹಿಸಿದ್ದೆವು, ಜೊತೆಗೆ ಗ್ರಾಮದ ಮಹಿಳೆಯರಿಂದಲೇ ಕೆರೆ ನಿರ್ಮಾಣವಾಗಿರುವುದು ಸಂತಸದ ವಿಷಯವಾಗಿದೆ.
– ನಾರಾಯಣಪ್ಪ ಗ್ರಾ. ಪಂ. ಸದಸ್ಯರು

ಮಹಾತ್ಮ ಗಾಧಿ ನರೇಗಾ ಯೋಜನೆಯನ್ನು ಬಳಸಿಕೊಂಡು ಖಂಡಿಕಾ ಗ್ರಾಮ ಪಂಚಾಯ್ತಿ ಉತ್ತಮ ಕೆಲಸಕ್ಕೆ ಕೈ ಹಾಕಿದೆ. ಪ್ರತಿಯೊಬ್ಬರಿಗೂ ಅಗತ್ಯವಾದ ನೀರನ್ನು ಉಳಿಸಲು ಮತ್ತು ಸಂರಕ್ಷಿಸಲು ಪ್ರಯತ್ನ ಮಾಡಿ ಅದರಲ್ಲಿ ಯಶಸ್ವಿಯಾಗಿದೆ.
– ಮಹಾಲೇಶ್ವರನಾಯ್ಕ, ಗ್ರಾಮಸ್ಥರು.

ನಗರೀಕರಣ ಆದಂತೆಲ್ಲ್ಲಾ ಸಾರ್ವಜನಿಕ ಪ್ರದೇಶಗಳ ಸುತ್ತಮುತ್ತಲಿನ ನೀರಿನ ಮೂಲವಾದ ಕೆರೆಗಳು ಒತ್ತುವರಿಯಾಗಿ ನಶಿಸುತ್ತಿವೆ. ಇಂತಹ ಸಂದರ್ಭದಲ್ಲಿ ಕೆರೆಗಳನ್ನು ನಿರ್ಮಿಸುವುದು ಮತ್ತು ಇರುವ ಕೆರೆಗಳನ್ನು ಪುನರುಜ್ಜೀವನಗೋಳಿಸಿ, ಮುಂದಿನ ಪೀಳಿಗೆಗೆ ನೀರನ್ನು ಸಂರಕ್ಷಿಸಿಡುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ಜೀವಜಲದ ಮೂಲಗಳು ಕಣ್ಮರೆಯಾಗುತ್ತಿರುವ ಈ ಸಮಯದಲ್ಲಿ ಮಾದರಿಯೆಂಬಂತೆ ಖಂಡಿಕಾ ಗ್ರಾಮ ಪಂಚಾಯ್ತಿ ಹಾಗು ಕುಗ್ವೆ ಗ್ರಾಮದ ಮಹಿಳೆಯರು ಸರ್ಕಾರದ ಯೋಜನೆಯ ಸದುಪಯೋಗ ಪಡೆದುಕೊಂಡು ಹೊಸ ಕೆರೆಯನ್ನು ನಿರ್ಮಿಸಿ ಇತರರಿಗೂ ಪ್ರೇರಣೆಯಾಗಿದ್ದಾರೆ.
ವರದಿ: ರಿಥೇಶ ನಾಯ್ಕ್, ಅಪ್ರೆಂಟೀಸ್, ವಾರ್ತಾ ಇಲಾಖೆ ಶಿವಮೊಗ್ಗ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿವಿಶೇಷ ಲೇಖನಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ಶಿವಮೊಗ್ಗ ಪಾಲಿಕೆ ಆಡಳಿತ ಪಕ್ಷದ ನಾಯಕರ ಕಚೇರಿಯಲ್ಲಿ ವೀರ ಸಾವರ್ಕರ್ ಫೋಟೋ ಅನಾವರಣ

Next Post

ವೀರಶೈವ-ಲಿಂಗಾಯತ ಸಮುದಾಯದ ಏಳಿಗೆಗಾಗಿ ನಿರಂತರ ಪ್ರಯತ್ನ: ಎಸ್. ಎಸ್. ಜ್ಯೋತಿಪ್ರಕಾಶ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ವೀರಶೈವ-ಲಿಂಗಾಯತ ಸಮುದಾಯದ ಏಳಿಗೆಗಾಗಿ ನಿರಂತರ ಪ್ರಯತ್ನ: ಎಸ್. ಎಸ್. ಜ್ಯೋತಿಪ್ರಕಾಶ್

ವೀರಶೈವ-ಲಿಂಗಾಯತ ಸಮುದಾಯದ ಏಳಿಗೆಗಾಗಿ ನಿರಂತರ ಪ್ರಯತ್ನ: ಎಸ್. ಎಸ್. ಜ್ಯೋತಿಪ್ರಕಾಶ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ತಮ್ಮ ಕಚೇರಿ ಸಿಬ್ಬಂದಿಯಿಂದಲೇ 1 ಲಕ್ಷ ರೂ. ಲಂಚ | ಭದ್ರಾವತಿ ಬಿಇಒ, ಮಧ್ಯವರ್ತಿ ಜೊತೆಗೆ ಲೋಕಾಯುಕ್ತ ಬಲೆಗೆ

ತಮ್ಮ ಕಚೇರಿ ಸಿಬ್ಬಂದಿಯಿಂದಲೇ 1 ಲಕ್ಷ ರೂ. ಲಂಚ | ಭದ್ರಾವತಿ ಬಿಇಒ, ಮಧ್ಯವರ್ತಿ ಜೊತೆಗೆ ಲೋಕಾಯುಕ್ತ ಬಲೆಗೆ

March 3, 2026
ಹದಿಹರೆಯದ ಉದ್ವೇಗಗಳಿಗೆ ಒಳಗಾಗದೆ ಅಧ್ಯಯನದತ್ತ ಗಮನಹರಿಸಿ: ವಿದ್ಯಾರ್ಥಿನಿಯರಿಗೆ ನಡಹಳ್ಳಿ ವಸಂತ್ ಸಲಹೆ

ಹದಿಹರೆಯದ ಉದ್ವೇಗಗಳಿಗೆ ಒಳಗಾಗದೆ ಅಧ್ಯಯನದತ್ತ ಗಮನಹರಿಸಿ: ವಿದ್ಯಾರ್ಥಿನಿಯರಿಗೆ ನಡಹಳ್ಳಿ ವಸಂತ್ ಸಲಹೆ

March 3, 2026
Record Budget: Chief Minister Must Fulfill Hometown Demands, Urges Dr. Shushrutha Gowda

Record Budget: Chief Minister Must Fulfill Hometown Demands, Urges Dr. Shushrutha Gowda

March 2, 2026
ಸಿಎಂ ಸಿದ್ಧರಾಮಯ್ಯ ದಾಖಲೆಯ ಬಜೆಟ್ | ತವರು ಜಿಲ್ಲೆಯ ಬೇಡಿಕೆ ಈಡೇರಿಸಲಿ: ಡಾ. ಸುಶ್ರುತಗೌಡ ಆಗ್ರಹ

ಸಿಎಂ ಸಿದ್ಧರಾಮಯ್ಯ ದಾಖಲೆಯ ಬಜೆಟ್ | ತವರು ಜಿಲ್ಲೆಯ ಬೇಡಿಕೆ ಈಡೇರಿಸಲಿ: ಡಾ. ಸುಶ್ರುತಗೌಡ ಆಗ್ರಹ

March 2, 2026
ಮಧ್ಯಪ್ರಾಚ್ಯದ ಉದ್ವಿಗ್ನತೆ | ಭಾರತದಲ್ಲಿ ಹಿಂಸಾಚಾರದ ಸಾಧ್ಯತೆ | ಎಲ್ಲ ರಾಜ್ಯಗಳಿಗೆ ಕೇಂದ್ರ ಎಚ್ಚರಿಕೆ ಪತ್ರ

ಮಧ್ಯಪ್ರಾಚ್ಯದ ಉದ್ವಿಗ್ನತೆ | ಭಾರತದಲ್ಲಿ ಹಿಂಸಾಚಾರದ ಸಾಧ್ಯತೆ | ಎಲ್ಲ ರಾಜ್ಯಗಳಿಗೆ ಕೇಂದ್ರ ಎಚ್ಚರಿಕೆ ಪತ್ರ

March 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL