ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಡಿ.ವಿ.ಎಸ್. ಪಾಲಿಟೆಕ್ನಿಕ್ (ಅನುದಾನಿತ)ನಲ್ಲಿ ಐಟಿಐ/ದ್ವಿತೀಯ ಪಿಯುಸಿ (ವಿಜ್ಞಾನ) ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳಿಂದ 2ನೇ ವರ್ಷದ/3ನೇ ಸೆಮಿಸ್ಟರ್ ಡಿಪ್ಲೋಮಾ ಕೋರ್ಸುಗಳಿಗೆ ಲ್ಯಾಟರಲ್ ಎಂಟ್ರಿ ಸ್ಕೀಂ ಮುಖಾಂತರ ಸಿವಿಲ್, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್ ಹಾಗೂ ಕಂಪ್ಯೂಟರ್ ಸೈನ್ಸ್ ವಿಭಾಗಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ನಿಗಧಿತ ನಮೂನೆ ಅರ್ಜಿಯನ್ನು ಕಾಲೇಜಿನ ಕಚೇರಿಯಿಂದ ಪಡೆದುಕೊಂಡು ಭರ್ತಿಮಾಡಿ ದಿ:30/08/2022ರೊಳಗಾಗಿ ಸಲ್ಲಿಸುವುದು. ದಿನಾಂಕ 01/09/2022 ರಂದು ಪ್ರಕಟಣೆಯಾಗುವ ಮೆರಿಟ್ ಆಧಾರಿತ ಪಟ್ಟಿಯ ಅನುಸಾರ ಮೂಲ ದಾಖಲೆಗಳೊಂದಿಗೆ ದಿ: 02/09/2022 ರಿಂದ ದಿ: 05/09/2022 ರೊಳಗೆ ಪ್ರವೇಶಾತಿಯನ್ನು ಪಡೆಯಬಹುದಾಗಿದೆ ಎಂದು ಡಿ.ವಿ.ಎಸ್. ಪಾಲಿಟೆಕ್ನಿಕ್ ಪ್ರಕಟಣೆ ತಿಳಿಸಿದೆ.
Also read: ಮಡಿಕೇರಿ: ಆ.25ರಂದು ವಿದ್ಯುತ್ ವ್ಯತ್ಯಯ

ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-224729 ನ್ನು ಸಂಪರ್ಕಿಸುವುದು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















