ಕಲ್ಪ ಮೀಡಿಯಾ ಹೌಸ್ | ಸೊರಬ |
ಪತ್ರಕರ್ತಕರ ಕ್ಷೇಮಾಭಿವೃದ್ಧಿಗೆ ಅವಿರತ ಶ್ರಮಿಸುವ ಜೊತೆಗೆ ರಾಜ್ಯ ಸರ್ಕಾರದ ಮಾನ್ಯತೆ ಹೊಂದಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಅಧಿಕೃತ ಸಂಘಟನೆಯಾಗಿದೆ ಎಂದು ಸಂಘಟನೆಯ ತಾಲೂಕು ಶಾಖೆ ಅಧ್ಯಕ್ಷ ಜೆ.ಎಸ್. ನಾಗರಾಜ್ ಜೈನ್ ಹೇಳಿದರು.
ಪಟ್ಟಣದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಪತ್ರಿಕಾ ಭವನದಲ್ಲಿ ಕರೆದಿದ್ದ ಸದಸ್ಯರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತಾಲೂಕಿನಲ್ಲಿ ಕಾರ್ಯನಿರತ ಪತ್ರಕರ್ತರ ಹೆಸರಿನಲ್ಲಿ ಪರ್ಯಾಯ ಸಂಘಟನೆ ಅಸ್ತಿತ್ವಕ್ಕೆ ಬಂದಿರುವುದು ಗಮನಕ್ಕೆ ಬಂದಿರುತ್ತದೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವ ಹೊಂದಿದ್ದು, ಕೆಲವರು ಸಂಘ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದು, ಅಂತವರನ್ನು ಕೂಡಲೇ ಸದಸ್ಯತ್ವದಿಂದ ವಜಾಗೊಳಿಸಲು ಸರ್ವ ಸದಸ್ಯರ ಒಮ್ಮತದ ಮೇರೆಗೆ ಜಿಲ್ಲಾ ಸಂಘಕ್ಕೆ ಶಿಫಾರಸು ಮಾಡಲಾಗುವುದು ಎಂದರು.
ಸಭೆಯಲ್ಲಿ ಜಿಲ್ಲಾ ಸಮಿತಿಗೆ ಹಿರಿಯ ಪತ್ರಕರ್ತರಾದ ಶಿವಮೊಗ್ಗ ಟೈಮ್ಸ್ ವರದಿಗಾರ ಜಿ.ಎಂ. ತೋಟಪ್ಪ (ಸಂತೋಷ್), ನಮ್ಮನಾಡು ಪತ್ರಿಕೆ ವರದಿಗಾರ, ಬಿ. ಚಂದ್ರಪ್ಪ ತವನಂದಿ, ತಾಲೂಕು ಗೌರವಾಧ್ಯಕ್ಷರಾಗಿ ಸಂಯುಕ್ತ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ಯು.ಎನ್. ಲಕ್ಷ್ಮೀಕಾಂತ್, ಉಪಾಧ್ಯಕ್ಷರಾಗಿ ಪ್ರಜಾವಾಣಿ ವರದಿಗಾರ ರವಿ ಆರ್. ತಿಮ್ಮಾಪುರ, ಪ್ರಧಾನ ಕಾರ್ಯದರ್ಶಿಯಾಗಿ ಟೈಮ್ಸ್ ಆಫ್ ಕರ್ನಾಟಕ ಪತ್ರಿಕೆಯ ವರದಿಗಾರ ಯು.ಎಲ್. ಸಂದೀಪ್, ಸಹ ಕಾರ್ಯದರ್ಶಿಯಾಗಿ ಉದಯವಾಣಿ ವರದಿಗಾರ ಕೆ.ವಿ. ದತ್ತಾತ್ರೇಯ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಿ ಜಿಲ್ಲೆ ಸಮಿತಿಗೆ ವರದಿ ಕಳುಹಿಸಲಾಯಿತು. ನೂತನ ಪದಾಧಿಕಾರಿಗಳನ್ನು ಸರ್ವ ಸದಸ್ಯರು ಅಭಿನಂದಿಸಿದರು.
Also read: ಶ್ರೀಕ್ಷೇತ್ರ ಕೊಲ್ಲೂರಿಗೆ ಸಂಸದ ರಾಘವೇಂದ್ರ ಭೇಟಿ: ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿ
ಸಭೆಯಲ್ಲಿ ತಾಲೂಕು ಉಪಾಧ್ಯಕ್ಷ ಮುಹಮ್ಮದ್ ಆರೀಫ್, ಖಜಾಂಚಿ ಕೆ.ಪಿ. ಪ್ರವೀಣ್ ಕುಮಾರ್, ಸದಸ್ಯರಾದ ಶಿವಪ್ಪ ಹಿತ್ಲರ್, ಮಂಜುನಾಥ್ ಆನವಟ್ಟಿ, ರಾಜೇಂದ್ರ ಜೈನ್, ಮಧುರಾಮ್, ಯುವರಾಜ ಜೈನ್, ವಿಜಯಗೌಳಿ, ಉಪಸ್ಥಿತರರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post