ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಆರೋಗ್ಯದ ಕಾರಣ ಮುಂದಿಟ್ಟು ಇತ್ತೀಚೆಗಷ್ಟೇ ಜಮ್ಮು ಮತ್ತು ಕಾಶ್ಮೀರ ಘಟಕದ ಪದಾಧಿಕಾರಿ ಹುದ್ದೆಗೆ ರಾಜೀನಾಮೆ ನೀಡಿದ್ದ ಕಾಂಗ್ರೆಸ್ ಹಿರಿಯ ನಾಯಕ ಗುಲಾಂ ನಬಿ ಆಜಾದ್ Gulam Nabhi Azad ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲಾ ಸ್ಥಾನಗಳಿಗೆ ರಾಜೀನಾಮೆ ನೀಡಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.
ಕಾಂಗ್ರೆಸ್ ಪಕ್ಷದಲ್ಲಿ ವ್ಯವಸ್ಥಿತ ಬದಲಾವಣೆಗಳನ್ನು ಬಯಸಿದ ಜಿ 23 ನಾಯಕರ ಗುಂಪಿನ ಸದಸ್ಯರಾಗಿದ್ದ ಗುಲಾಂ ನಬಿ ಆಜಾದ್ ರಾಜೀನಾಮೆಯಿಂದ ಕಾಂಗ್ರೆಸ್‌ಗೆ ಭಾರೀ ಹಿನ್ನಡೆಯಾಗಿದೆ.
ಕಾಂಗ್ರೆಸ್ ಪಕ್ಷದಲ್ಲಿ ವ್ಯವಸ್ಥಿತ ಬದಲಾವಣೆಗಳನ್ನು ಬಯಸಿದ ಜಿ 23 ನಾಯಕರ ಗುಂಪಿನ ಸದಸ್ಯರಾಗಿದ್ದ ಗುಲಾಂ ನಬಿ ಆಜಾದ್ ಸಹ ಇದ್ದರು. ಗುಲಾಂ ನಬಿ ಆಜಾದ್ ಅವರನ್ನು ಜಮ್ಮು ಕಾಶ್ಮೀರ ಕಾಂಗ್ರೆಸ್ ಸಮಿತಿಯ ಪ್ರಚಾರ ಸಮಿತಿ ಅಧ್ಯಕ್ಷರಾಗಿ ನೇಮಿಸಲಾಗಿತ್ತು. ನೇಮಕಾತಿ ಆದೇಶ ಹೊರಬಿದ್ದ ಕೆಲಹೊತ್ತಿನಲ್ಲಿಯೇ ಅವರು ರಾಜೀನಾಮೆ ನೀಡುವ ಮೂಲಕ ಈ ಮೂಲಕ ಪಕ್ಷದ ಉನ್ನತ ನಾಯಕತ್ವದ ಕಾರ್ಯವೈಖರಿ ಬಗ್ಗೆ ತಮ್ಮ ಅಸಮಾಧಾನ ಮತ್ತೆ ಹೊರಹಾಕಿದ್ದರು.
Also read: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಅಧಿಕೃತ ಸಂಘಟನೆ: ನಾಗರಾಜ್ ಜೈನ್
ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕ ಆನಂದ್ ಶರ್ಮಾ ಅವರು ಪಕ್ಷದ ಪ್ರಮುಖ ಸ್ಥಾನಕ್ಕೆ ರಾಜೀನಾಮೆ ನೀಡಿದ ತರುವಾಯ ಆಜಾದ್ ಪಕ್ಷದ ಜಮ್ಮು ಕಾಶ್ಮೀರ ರಾಜಕೀಯ ವ್ಯವಹಾರ ಸಮಿತಿಗೂ ಆಜಾದ್ ರಾಜೀನಾಮೆ ನೀಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post