ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ಶಿಕಾರಿಪುರ ತಾಲೂಕಿನ ಹಿತ್ತಲ ಗ್ರಾಮದಲ್ಲಿ ಸಂಸದ ಬಿ. ವೈ. ರಾಘವೇಂದ್ರ MP Raghavendra ವಿವಿಧ ಸಮುದಾಯ ಭವನಗಳ ಉದ್ಘಾಟನೆ ನೆರವೇರಿಸಿದರು.
ದೇವಾಂಗ ಸಮಾಜ ವತಿಯಿಂದ ಹಿತ್ತಲ ಗ್ರಾಮದ ಶ್ರೀ ಬನಶಂಕರಿ ದೇವಸ್ಥಾನದ ಮುಂಭಾಗದಲ್ಲಿ ನಿರ್ಮಿಸಲಾಗುತ್ತಿರುವ ಸಮುದಾಯ ಭವನದ ಕಾಮಗಾರಿಯ ಚಾಲನೆಗೆ ಚಾಲನೆ ನೀಡಿದರು.
ಶ್ರೀ ಸಿದ್ದೇಶ್ವರ ದೇವಸ್ಥಾನದ ದಾಸೋಹ ಕೊಠಡಿ, ಶ್ರೀ ಮಾರಿಕಾಂಬಾ ದೇವಸ್ಥಾನದ ಸಮುದಾಯ ಭವನ, ಬಾಬು ಜಗಜೀವನ್ ರಾಂ ಭವನ ಹಾಗೂ ಚುರ್ಚಿಗುಂಡಿ ಗ್ರಾಮದಲ್ಲಿ ಈಶ್ವರ ಬಸವೇಶ್ವರ ದೇವಸ್ಥಾನದ ಸಮುದಾಯ ಭವನ ಲೋಕಾರ್ಪಣೆಗೊಳಿಸಿದರು.
ಈ ಸಂದರ್ಭದಲ್ಲಿ ಉತ್ಸವ ಸಮಿತಿಯ ಶಿವಮೂರ್ತಿ, ಗ್ರಾಪಂ ಅಧ್ಯಕ್ಷ ಸರ್ವೇಶ್, ತಾಲೂಕು ಬಿಜೆಪಿ ಅಧ್ಯಕ್ಷ ವೀರೇಂದ್ರ ಪಾಟೀಲ್, ಕೊರಲಹಳ್ಳಿ ನಾಗರಾಜ್, ಶಶಿ ಚುರ್ಚಿಗುಂಡಿ, ಮಂಜುಳಾ ಪ್ರಕಾಶ್, ಬಿ. ಡಿ. ಭೂಕಂತ, ಎಲ್ಲಾ ಸಮಾಜದ ಅಧ್ಯಕ್ಷರು, ಸದಸ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















