ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ನಡೆಸಲು ಬ್ರೇಕ್ ಹಾಕಿರುವ ಸುಪ್ರೀಂ ಕೋರ್ಟ್, ಯಥಾಸ್ಥಿತಿಯನ್ನು ಕಾಯ್ದುಕೊಳ್ಳುವಂತೆ ಆದೇಶಿಸಿದೆ.
ಈ ಕುರಿತಂತೆ ಆದೇಶ ಹೊರಡಿಸಿರುವ ನ್ಯಾಯಾಲಯ ಸದ್ಯ ಯಥಾಸ್ಥಿತಿಯನ್ನು ಕಾಯ್ದುಕೊಳ್ಳಬೇಕು. ಈವರೆಗೂ ಯಾವ ಆಚರಣೆಗಳನ್ನು ಅಲ್ಲಿ ನಡೆಸಲಾಗಿತ್ತೋ, ಅವುಗಳಿಗೆ ಮಾತ್ರ ಅನುಮತಿ ಎಂದು ಹೇಳುವ ಮೂಲಕ ಗಣೇಶೋತ್ಸವಕ್ಕೆ ತಡೆ ಹಾಕಿದೆ.
ವಕ್ಫ್ ಬೋರ್ಡ್ ಮನವಿಯನ್ನು ಪುರಸ್ಕರಿಸಿರುವ ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ, ಗಣೇಶೋತ್ಸವವನ್ನು ಬೇರೆಡೆಯಲ್ಲಿ ಆಚರಣೆ ಮಾಡಿಕೊಳ್ಳಿ ಎಂದು ಹೇಳಿದ್ದು, ಈದ್ಗಾ ಭೂ ಮಾಲೀಕತ್ವದ ವಿಚಾರ ಹೈಕೋರ್ಟ್ನಲ್ಲಿಯೇ ಇತ್ಯರ್ಥಪಡಿಸಿಕೊಳ್ಳಿ ಎಂದು ಸೂಚಿಸಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















