ಕಲ್ಪ ಮೀಡಿಯಾ ಹೌಸ್ | ಸಾಗರ |
ತಾಲ್ಲೂಕಿನ ಚಿಕ್ಕನೆಲ್ಲೂರು ಗ್ರಾಮದಲ್ಲಿ ಅಬಕಾರಿ ಇಲಾಖೆ ಸಿಬ್ಬಂದಿಗಳು ಅಕ್ರಮವಾಗಿ ಕಳ್ಳಭಟ್ಟಿ ತಯಾರಿಸುತ್ತಿದ್ದ ಘಟಕದ ಮೇಲೆ ಶನಿವಾರ ದಾಳಿ ನಡೆಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಚಿಕ್ಕನೆಲ್ಲೂರು ಗ್ರಾಮದ ಹರೀಶ್ ಎಂಬುವವರ ಮನೆಯ ಮೇಲೆ ದಾಳಿ ನಡೆಸಿದ ಅಬಕಾರಿ ಇಲಾಖೆ ಸಿಬ್ಬಂದಿಗಳು ಎರಡು ಲೀ. ಕಳ್ಳಭಟ್ಟಿ ಹಾಗೂ ಕಳ್ಳಭಟ್ಟಿ ತಯಾರಿಸಲು ಸಂಗ್ರಹಿಸಿ ಇರಿಸಲಾಗಿದ್ದ 150 ಲೀ. ಬೆಲ್ಲದ ಕೊಳೆಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
ಅಬಕಾರಿ ನಿರೀಕ್ಷಕ ಹನುಮಂತಪ್ಪ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಸಿಬ್ಬಂದಿಗಳಾದ ಪುಟ್ಟಪ್ಪ, ಸಚಿನ್, ಮಹಾಬಲೇಶ್ ಇನ್ನಿತರರು ಪಾಲ್ಗೊಂಡಿದ್ದರು.
Also read: ಶ್ರೀ ಗಣೇಶ ಚತುರ್ಥಿ ನಿಮಿತ್ತ ಧರ್ಮಜಾಗೃತಿ ಸಮಿತಿ ವತಿಯಿಂದ ದೇವಸ್ಥಾನ ಸ್ವಚ್ಛತಾ ಅಭಿಯಾನ ಸಂಪನ್ನ !
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post