ಕಲ್ಪ ಮೀಡಿಯಾ ಹೌಸ್ | ಮಂಗಳೂರು |
ಸೆ.2ರಂದು ಮಧ್ಯಾಹ್ನ 12.30ಕ್ಕೆ ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಭೇಟಿ ನೀಡಲಿದ್ದು, ಅವರ ಆಗಮನ ಹಿನ್ನೆಲೆಯಲ್ಲಿ ಮಂಗಳೂರಿನ ಪೊಲೀಸರು ಎಲ್ಲ ಭದ್ರತಾ ಕಾರ್ಯ ಕೈಗೊಂಡಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ Home Minister Araga Gnanendra ತಿಳಿಸಿದರು.
ಪ್ರಧಾನಿ ಸಮಾವೇಶ ನಡೆಯುವ ಮಂಗಳೂರಿನ ಕೂಳೂರು ಗೋಲ್ಡ್‌ಫಿಂಚ್ ಸಿಟಿ ಮೈದಾನಕ್ಕೆ ಇಂದು ಭೇಟಿ ನೀಡಿ, ಭದ್ರತೆ ಬಗ್ಗೆ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಭದ್ರತೆಗಾಗಿ ಅಧಿಕಾರಿಗಳ ಸಹಿತ ಒಟ್ಟು ಮೂರು ಸಾವಿರ ಪೊಲೀಸರನ್ನು ನಿಯೋಜಿಸಲಾಗಿದ್ದು, ಡಿಜಿಪಿ ಅವರು ಗುರುವಾರ ಮಂಗಳೂರಿಗೆ ಆಗಮಿಸಲಿದ್ದಾರೆ. ಎಡಿಜಿಪಿ ಅವರು ಈಗಾಗಲೇ ಬಂದಿದ್ದಾರೆ ಎಂದು ತಿಳಿಸಿದರು.
ಸಂಸದ, ಬಿಜೆಪಿ ರಾಜ್ಯಧ್ಯಕ್ಷ ನಳಿನ್‌ಕುಮಾರ್ ಕಟೀಲು, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್‌ಕುಮಾರ್, ದ.ಕ. ಜಿಲ್ಲೆಯ ಶಾಸಕರು ಪ್ರಧಾನಿ ಕಾರ್ಯಕ್ರಮದ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ. ಮಂಗಳೂರು ನಗರ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಭದ್ರತೆ ಕೈ ಗೊಳ್ಳಲಾಗಿದೆ. 100 ಜನ ಅಧಿಕಾರಿಗಳು, ಎರಡು ಸಾವಿರ ಮಂದಿ ಸಿವಿಲ್ ಪೊಲೀಸರು, ಕೆಎಸ್‌ಆರ್‌ಪಿ, ಎಎನ್‌ಎಫ್, ಸಿಎಆರ್, ಕರಾವಳಿ ಭದ್ರತಾ ಪಡೆ, ಆರ್‌ಎಎಫ್, ಗರುಡ ಪಡೆ ಸೇರಿದಂತೆ ಒಟ್ಟು ೩ ಸಾವಿರ ಪೊಲೀಸರು ಭದ್ರತೆ ಬಗ್ಗೆ ನಿಗಾ ಇರಿಸಿದ್ದಾರೆ. ಭದ್ರತೆ ಬಗ್ಗೆ ಯಾವುದೇ ಲೋಪ ಆಗದಂತೆ ಎಚ್ಚರ ವಹಿಸಲಾಗಿದೆ ಎಂದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















