ಕಲ್ಪ ಮೀಡಿಯಾ ಹೌಸ್ | ಬೈಂದೂರು |
ವಸತಿ ಯೋಜನೆಯಡಿ ಬೈಂದೂರು ಕ್ಷೇತ್ರಕ್ಕೆ ಹೆಚ್ಚುವರಿ ಮನೆ ಮಂಜೂರು ಮಾಡಿರುವ ಸಚಿವ ವಿ. ಸೋಮಣ್ಣ ಅವರಿಗೆ ಬೈಂದೂರು ಶಾಸಕ ಬಿ.ಎಮ್. ಸುಕುಮಾರ ಶೆಟ್ಟಿ ಧನ್ಯವಾದ ಸಲ್ಲಿಸಿದ್ದಾರೆ.
ಇತ್ತೀಚಿಗೆ ವಸತಿ ಸಚಿವ ವಿ ಸೋಮಣ್ಣ ಅವರನ್ನು ಕೊಲ್ಲೂರಿನಲ್ಲಿ ಭೇಟಿ ಮಾಡಿ ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ ಈವರೆಗೆ 1466 ಮನೆಗಳನ್ನು ನೀಡಿದ್ದು, ಅರ್ಹ ಫಲಾನುಭವಿಗಳಿಗೆ ಆದೇಶ ಪತ್ರ ನೀಡಲಾಗಿದೆ. ಇನ್ನೂ ಹೆಚ್ಚುವರಿಯಾಗಿ ಅನೇಕರು ವಸತಿ ಯೋಜನೆಗೆ ಕಾಯುತ್ತಿದ್ದು, ಕೊರೊನಾ ಮತ್ತಿತರ ಕಾರಣಗಳಿಂದ ಮನೆ ನಿರ್ಮಿಸಲು ಕಷ್ಟಪಡುತ್ತಿರುವ ಬಗ್ಗೆ ಮಂತ್ರಿಗಳ ಗಮನಸೆಳೆಯಲಾಯಿತು. ಈ ಬಗ್ಗೆ ಪೂರಕವಾಗಿ ಸ್ಪಂದಿಸಿದ ಸಚಿವರು ತಕ್ಷಣ 2000 ಮನೆಯನ್ನು ಬೈಂದೂರು ಕ್ಷೇತ್ರಕ್ಕೆ ಮಂಜೂರು ಮಾಡಿಸಲು ಆದೇಶಿಸಿದ್ದರು.
ಈ ಸಂಬಂಧ ಇಂದು ಬೈಂದೂರು ಮತ್ತು ಕುಂದಾಪುರ ತಾಲೂಕು ಕಾರ್ಯನಿರ್ವಹಾಣಾಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಸಭೆ ನಡೆಸಿ, ಶೀಘ್ರ ಫಲಾನುಭವಿಗಳ ಆಯ್ಕೆ ಮಾಡುವಂತೆ ನಿರ್ದೇಶಿಸಲಾಗಿದೆ. ತಮ್ಮ ಮನವಿ ಪುರಸ್ಕರಿಸಿ, ಕ್ಷೇತ್ರದ ಜನರಿಗೆ ಸಹಾಯ ಮಾಡಲು ಅನುವು ಮಾಡಿಕೊಟ್ಟ ಸೋಮಣ್ಣ ಅವರಿಗೆ ಕ್ಷೇತ್ರದ ಜನತೆಯ ಪರವಾಗಿ ಧನ್ಯವಾದ ಸಲ್ಲಿಸಿದ್ದಾರೆ.



ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















