ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ನಾಳೆ ಮುಂಜಾನೆವರೆಗೂ ಆರೆಂಜ್ ಅಲರ್ಟ್ ಹಾಗೂ ರಾಜ್ಯದ 16 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಭಾರೀ ಮಳೆಯಾಗುವ ಸೂಚನೆ ನೀಡಲಾಗಿದೆ.
ಈ ಕುರಿತಂತೆ ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ವರದಿ ಬಿಡುಗಡೆ ಮಾಡಿದ್ದು, ನಾಳೆ ಮುಂಜಾನೆವರೆಗೂ ಭಾರೀ ಪ್ರಮಾಣದಲ್ಲಿ ಮಳೆ ಸುರಿಯಲಿದೆ. ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು ಸೇರಿದಂತೆ ರಾಜ್ಯದ ಹಲವು ಪ್ರದೇಶಗಳಲ್ಲಿ ಸೆ.೫ರವರೆಗೂ ಭಾರೀ ಮಳೆ ಮನ್ಸೂಚನೆಯನ್ನು ನೀಡಲಾಗಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
Also read: ವಸತಿ ಯೋಜನೆಯಡಿ ಹೆಚ್ಚುವರಿ ಮನೆ ಮಂಜೂರು ಹಿನ್ನೆಲೆ ಸಚಿವರಿಗೆ ಅಭಿನಂದನೆ
ಎಲ್ಲೆಲ್ಲಿ, ಎಷ್ಟು ದಿನ ಯೆಲ್ಲೋ ಅಲರ್ಟ್:
- ಸೆ.2: ಬೆಳಗಾಂ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು
- ಸೆ.3: ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ
- ಸೆ.4: ಉತ್ತರಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ತುಮಕೂರು, ಬೆಂಗಳೂರು ಗ್ರಾಮೀಣ, ಬೆಂಗಳೂರು ನಗರ, ಚಾಮರಾಜನಗರ
- ಸೆ.5: ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಧಾರವಾಡ, ಉತ್ತರಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಹಾಸನ, ಕೊಡಗು, ತುಮಕೂರು, ಚಾಮರಾಜನಗರ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















