ಕಲ್ಪ ಮೀಡಿಯಾ ಹೌಸ್ | ಮುಂಬೈ |
ಇಂದು ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಟಾಟಾ ಸನ್ಸ್ ಮಾಜಿ ಅಧ್ಯಕ್ಷ, ಖ್ಯಾತ ಉದ್ಯಮಿ ಸೈರಸ್ ಮಿಸ್ತ್ರಿ(54) ಅವರು ನಿಧನರಾಗಿದ್ದಾರೆ.
ಅಹಮದಾಬಾದ್’ನಿಂದ ಮುಂಬೈಗೆ ಪ್ರಯಾಣಿಸುತ್ತಿದ್ದ ವೇಳೆ ಸೂರ್ಯ ನದಿಯ ಸೇತುವೆ ಮೇಲೆ ಡಿವೈಡರ್’ಗೆ ಕಾರು ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಮಿಸ್ತ್ರಿ ಸಾವನ್ನಪ್ಪಿದ್ದಾರೆ.
ಕಾರು ಚಾಲಕ ಸೇರಿದಂತೆ ಅವರೊಂದಿಗೆ ಪ್ರಯಾಣಿಸುತ್ತಿದ್ದ ಇನ್ನಿಬ್ಬರು ಗಾಯಗೊಂಡಿದ್ದಾರೆ. ಎಲ್ಲಾ ಗಾಯಾಳುಗಳನ್ನು ಗುಜರಾತ್ ಆಸ್ಪತ್ರೆಗೆ ರವಾನಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

















