ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಹಳೇನಗರದ ಶ್ರೀ ವೀರಶೈವ ಸಭಾಭವನದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್‌ರವರ ಜನ್ಮದಿನಾಚರಣೆ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗು ತಾಲೂಕು ಶಿಕ್ಷಕರ ದಿನಾಚರಣೆ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮಕ್ಕೆ ಶಾಸಕ ಬಿ.ಕೆ. ಸಂಗಮೇಶ್ವರ MLA Sangameshwar ಚಾಲನೆ ನೀಡಿದರು.
ಇದೇ ಸಂದರ್ಭದಲ್ಲಿ ತಾಲೂಕು ಮಟ್ಟದ ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ, ಮಾಡಲಾಯಿತು. ನಿವೃತ್ತ ಶಿಕ್ಷಕರಿಗೆ ಹಾಗೂ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.100ರಷ್ಟು ಫಲಿತಾಂಶ ಪಡೆದ ಶಾಲೆಗಳಿಗೆ ಸನ್ಮಾನ ಕಾರ್ಯಕ್ರಮಗಳು ಜರುಗಿದವು.
Also read: ದೆಹಲಿಯ ರಾಮಲೀಲಾ ಮೈದಾನದಲ್ಲಿ ಮೆಹೆಂಗಾಯಿ ಪರ್ ಹಲ್ಲಾ ಬೋಲ್ ರ‍್ಯಾಲಿ
ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ. ನಾಗೇಂದ್ರಪ್ಪ, ತಹಸೀಲ್ದಾರ್ ಆರ್. ಪ್ರದೀಪ್, ನಗರಸಭೆ ಅಧ್ಯಕ್ಷ ಚನ್ನಪ್ಪ, ಪೌರಾಯುಕ್ತ ಮನುಕುಮಾರ್, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ರಮೇಶ್, ನಗರಸಭೆ ಸದಸ್ಯರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post