ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಒಂದೆಡೆ ಮಾಜಿ ಶಾಸಕ ಎಂ.ಜೆ ಅಪ್ಪಾಜಿ 2ನೇ ವರ್ಷದ ಪುಣ್ಯಸ್ಮರಣೆ, ಮತ್ತೊಂದೆಡೆ ತುಂಬಿದ ಭದ್ರೆಗೆ ಬಾಗಿನ ಸಮರ್ಪಣೆ, ಇನ್ನೊಂದೆಡೆ ಜೆಡಿಎಸ್ ಪಕ್ಷದ ಶಕ್ತಿ ಪ್ರದರ್ಶನ ತಾಲೂಕಿನ ಗೋಣಿಬೀಡು, ಶಂಕರಘಟ್ಟ, ಬಿಆರ್’ಪಿ ವ್ಯಾಪ್ತಿಯಲ್ಲಿ ನಡೆಯಿತು.
ಮಾಜಿ ಶಾಸಕ ಎಂ.ಜೆ. ಅಪ್ಪಾಜಿ ಅವರ 2ನೇ ವರ್ಷದ ಪುಣ್ಯಸ್ಮರಣೆ ಗೋಣಿಬೀಡಿನ ಅವರ ತೋಟದಲ್ಲಿರುವ ಶಕ್ತಿಧಾಮದಲ್ಲಿ ಬೆಳಿಗ್ಗೆ ನಡೆಯಿತು. ಅಪ್ಪಾಜಿ ಪ್ರತಿಮೆಗೆ ಶಾರದ ಅಪ್ಪಾಜಿ ಹಾಗೂ ಕುಟುಂಬ ವರ್ಗದವರು ಅಭಿಮಾನಿಗಳು, ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದರು. ನಂತರ ಬಿಆರ್ಪಿ ಭದ್ರಾ ಜಲಾಶಯದಲ್ಲಿ ಬಾಗಿನ ಸಮರ್ಪಿಸಲಾಯಿತು. ಮಧ್ಯಾಹ್ನ ಜೆಡಿಎಸ್ ಪಕ್ಷದ ಶಕ್ತಿ ಪ್ರದರ್ಶನ ನಡೆಯಿತು. ನೂತನ ಪದಾಧಿಕಾರಿಗಳು ಪದಗ್ರಹಣ ಸ್ವೀಕರಿಸಿದರು.
ನ್ಯೂಟೌನ್ ಉಂಬ್ಳೆಬೈಲು ರಸ್ತೆ, ರೋಟರಿ ಕ್ಲಬ್ ಸಮೀಪದಲ್ಲಿರುವ ಅಪ್ಪಾಜಿ ನಿವಾಸದಿಂದ ಗೋಣಿಬೀಡಿನ ಶಕ್ತಿಧಾಮದವರೆಗೂ ನಂತರ ಶಂಕರಘಟ್ಟ, ಬಿಆರ್’ಪಿ ವ್ಯಾಪ್ತಿಯಲ್ಲಿ ಬೈಕ್ ರ್ಯಾಲಿ ನಡೆಸಲಾಯಿತು. ಈ ನಡುವೆ ಶಾರದ ಅಪ್ಪಾಜಿ ನೇತೃತ್ವದಲ್ಲಿ ಪಾದಯಾತ್ರೆ ಸಹ ನಡೆಯಿತು.
ನೂತನ ಪದಾಧಿಕಾರಿಗಳ ಪದಗ್ರಹಣ
ಜಿಲ್ಲಾ ಯುವ ಘಟಕದ ಅಧ್ಯಕ್ಷರಾಗಿ ಮಧುಕುಮಾರ್, ತಾಲೂಕು ನಗರ ಘಟಕದ ಅಧ್ಯಕ್ಷರಾಗಿ ಆರ್. ಕರುಣಾಮೂರ್ತಿ, ಗ್ರಾಮಾಂತರ ಘಟಕದ ಅಧ್ಯಕ್ಷರಾಗಿ ಕೆ. ಧರ್ಮಕುಮಾರ್, ನಗರ ಘಟಕದ ಮಹಿಳಾ ಅಧ್ಯಕ್ಷರಾಗಿ ವಿಶಾಲಾಕ್ಷಿ, ಗ್ರಾಮಾಂತರ ಘಟಕದ ಅಧ್ಯಕ್ಷರಾಗಿ ಪಾರ್ವತಿಬಾಯಿ, ಅಲ್ಪ ಸಂಖ್ಯಾತರ ನಗರ ಘಟಕದ ಅಧ್ಯಕ್ಷರಾಗಿ ಮುತುರ್ಜಾಖಾನ್, ತಾಲೂಕು ಯುವ ಘಟಕದ ಅಧ್ಯಕ್ಷರಾಗಿ ಎಂ.ಎ. ಅಜಿತ್, ನಗರ ಘಟಕದ ಕಾರ್ಯಾಧ್ಯಕ್ಷರಾಗಿ ಬಿ.ಸಿ. ಉಮೇಶ್, ಪರಿಶಿಷ್ಟ ಜಾತಿ ನಗರ ಘಟಕದ ಅಧ್ಯಕ್ಷರಾಗಿ ಮೈಲಾರಪ್ಪ, ಪರಿಶಿಷ್ಟ ಜಾತಿ ಗ್ರಾಮಾಂತರ ಘಟಕದ ಅಧ್ಯಕ್ಷರಾಗಿ ಶ್ರೀಧರನಾಯ್ಕ, ಪಕ್ಷದ ಪ್ರಧಾನ ಕಾರ್ಯದರ್ಶಿ ಹಾಗೂ ವಕ್ತಾರರಾಗಿ ಎಂ. ರಾಜು ಮತ್ತು ನಗರ ಘಟಕದ ಮಹಿಳಾ ಕಾರ್ಯದರ್ಶಿಯಾಗಿ ಭಾಗ್ಯಮ್ಮ ಅವರು ಪದಗ್ರಹಣ ಸ್ವೀಕರಿಸಿದರು.
Also read: ಆರೋಗ್ಯ ಸಂಜೀವಿನಿ: ನಗದು ರಹಿತ ವೈದ್ಯಕೀಯ ಸೇವಾ ಯೋಜನೆಗೆ ಸಿಎಂ ಚಾಲನೆ
ಜೆಡಿಎಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಗೀತಾ ಸತೀಶ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಜೆ.ಪಿ. ಯೋಗೇಶ್, ಮುಖಂಡರಾದ ಕರಿಯಪ್ಪ, ಡಿ.ಟಿ. ಶ್ರೀಧರ್, ಲೋಕೇಶ್ವರ ರಾವ್, ಧರ್ಮೇಗೌಡ ಹಾಗೂ ನಗರಸಭೆ ಮತ್ತು ಗ್ರಾಮ ಪಂಚಾಯಿತಿ ಸದಸ್ಯರು, ವಿವಿಧ ಸಂಘ-ಸಂಸ್ಥೆಗಳು ಮುಖಂಡರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post