No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Saturday, October 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬಳ್ಳಾರಿ

ಏಕಕಾಲಕ್ಕೆ 20 ಸಾವಿರ ಯೋಗಾಸಕ್ತರಿಂದ ಯೋಗಾಭ್ಯಾಸ: ಜಿಲ್ಲಾಡಳಿತದಿಂದ ಭರದ ಸಿದ್ಧತೆ

ಸೆ.17ರಂದು ಬಳ್ಳಾರಿಯಲ್ಲಿ ಬೃಹತ್ ಯೋಗಾಥಾನ್ ಯಶಸ್ವಿಗೊಳಿಸಲು ಕರೆ

kalpa News by kalpa News
September 7, 2022
in ಬಳ್ಳಾರಿ
0
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಬಳ್ಳಾರಿ |

ಭಾರತ ಸ್ವಾತಂತ್ರ್ಯದ ಅಮೃತಮಹೋತ್ಸವದ ಅಂಗವಾಗಿ ಬಳ್ಳಾರಿ ಹೊರವಲಯದ ಕೊಳಗಲ್ ಏರ್‍ಸ್ಟ್ರೀಪ್ ಬಳಿ ಇದೇ ಸೆ.17ರಂದು ಬೃಹತ್ ಯೋಗಾಥಾನ್ ಕಾರ್ಯಕ್ರಮ ಆಯೋಜಿಸಲಾಗಿದೆ. ಗಿನ್ನೆಸ್ ಹಾಗೂ ವಿಶ್ವ ದಾಖಲೆ ನಿರ್ಮಾಣಕ್ಕಾಗಿ ರಾಜ್ಯದಾದ್ಯಂತ ಏಕಕಾಲಕ್ಕೆ ಯೋಗಾಭ್ಯಾಸ ನಡೆಯಲಿದೆ. ಬಳ್ಳಾರಿಯಲ್ಲಿ ನಡೆಯಲಿರುವ ಯೋಗಭ್ಯಾಸ ಕಾರ್ಯಕ್ರಮದಲ್ಲಿ 20 ಸಾವಿರ ಯೋಗಾಸಕ್ತರು ಪಾಲ್ಗೊಳ್ಳಲಿದ್ದಾರೆ. ಇದಕ್ಕಾಗಿ ಎಲ್ಲ ಸಿದ್ಧತೆಗಳನ್ನು ಜಿಲ್ಲಾಡಳಿತ ಭರದಿಂದ ಕೈಗೊಳ್ಳುತ್ತಿದೆ.

ಈ ಕಾರ್ಯಕ್ರಮ ಅತ್ಯಂತ ಅಚ್ಚುಕಟ್ಟಾಗಿ ಯಶಸ್ವಿಯಾಗಿ ಜರುಗುವ ನಿಟ್ಟಿನಲ್ಲಿ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಅಧಿಕಾರಿಗಳು ತಮಗೆ ವಹಿಸಲಾದ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಬೃಹತ್ ಯೋಗಾಥಾನ್ ಕಾರ್ಯಕ್ರಮ ಯಶಸ್ವಿಗೆ ಎಲ್ಲರೂ ಕೈಜೋಡಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ ಅವರು ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಬೃಹತ್ ಯೋಗಾಥಾನ್ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲಾಡಳಿತ, ಜಿಲ್ಲಾಪಂಚಾಯ್ತಿ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ,ಆಯುμï ಇಲಾಖೆ,ಆಯುμï ಟಿವಿ,ನೆಹರು ಯುವ ಕೇಂದ್ರ ಹಾಗೂ ಯೋಗ ಸಂಸ್ಥೆಗಳ ಸಹಯೋಗದಲ್ಲಿ ಬೃಹತ್ ಯೋಗಾಥಾನ್ ಕಾರ್ಯಕ್ರಮವನ್ನು ಸೆ.17ರಂದು ಬೆಳಗ್ಗೆ 9ಕ್ಕೆ ಬಳ್ಳಾರಿಯ ಕೊಳಗಲ್ ಏರ್‍ಸ್ಟ್ರೀಪ್ ಆವರಣದಲ್ಲಿ ಆಯೋಜಿಸಲು ಉದ್ದೇಶಿಸಲಾಗಿದೆ.ಜಿಲ್ಲೆಯಲ್ಲಿ ಕಡ್ಡಾಯವಾಗಿ 20 ಸಾವಿರ ಜನರು ಈ ಯೋಗಾಥಾನ್‍ದಲ್ಲಿ ಪಾಲ್ಗೊಳ್ಳಬೇಕು;ಪಾಲ್ಗೊಳ್ಳುವವರು ಕಡ್ಡಾಯವಾಗಿ ನೋಂದಣಿಯಾಗಿರಬೇಕು;ನೋಂದಣಿ ಮಾಡಿಕೊಳ್ಳುವುದಕ್ಕೆ ಸಂಬಂಧಿಸಿದಂತೆ ಶಾಲಾ-ಕಾಲೇಜುಗಳ ಪ್ರಾಂಶುಪಾಲರು,ಶಿಕ್ಷಕರು ಅಗತ್ಯ ಕ್ರಮಕೈಗೊಳ್ಳಬೇಕು;ಈ ವಿಷಯದಲ್ಲಿ ಯಾವುದೇ ಕಾರಣಕ್ಕೂ ಉದಾಸೀನತೆ ಮಾಡುವಂತಿಲ್ಲ ಎಂದು ಅವರು ಸೂಚನೆ ನೀಡಿದರು.

ಇಡೀ ರಾಜ್ಯದಲ್ಲಿಯೇ ಅತ್ಯಂತ ಯಶಸ್ವಿಯಾಗಿ ಬಳ್ಳಾರಿ ಜಿಲ್ಲೆಯಲ್ಲಿ ಕಾರ್ಯಕ್ರಮವನ್ನು ಜರುಗಿಸುವ ನಿಟ್ಟಿನಲ್ಲಿ ಎಲ್ಲ ಸಿದ್ಧತೆಗಳನ್ನು ಜಿಲ್ಲಾಡಳಿತ ಕೈಗೊಳ್ಳಲಿದೆ. ಜಿಲ್ಲೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಯೋಗ ತರಬೇತಿ ಸಂಸ್ಥೆಗಳಿವೆ,ಎಲ್ಲಾ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು. ಆಯುμï ವೈದ್ಯಕೀಯ ವಿದ್ಯಾರ್ಥಿಗಳು, ಎನ್.ಎಸ್.ಎಸ್.ಸ್ವಯಂ ಸೇವಕರು ,ಆಸಕ್ತ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಯೋಗಾಥಾನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಗಿನ್ನೆಸ್ ಹಾಗೂ ವಿಶ್ವದಾಖಲೆ ನಿರ್ಮಾಣದ ಬೃಹತ್ ಕಾರ್ಯದಲ್ಲಿ ನಾವೆಲ್ಲ ಪಾಲುದಾರರಾಗಬೇಕು ಎಂದು ಮನವಿ ಮಾಡಿದರು.
ಯೋಗಾಥಾನ್ 2022 ಗಿನ್ನೆಸ್ ಹಾಗೂ ವಿಶ್ವದಾಖಲೆ ಸೃಷ್ಟಿಸಲು ರಾಜ್ಯದಾದ್ಯಂತ ಏಕಕಾಲದಲ್ಲಿ ಯೋಗಾಭ್ಯಾಸ ಆಯೋಜಿಸಲಾಗುತ್ತಿದೆ. ಬಳ್ಳಾರಿಯಲ್ಲಿ ಸೆ.14ರಂದು ಯೋಗಾಥಾನ್‍ಗೆ ಪೂರ್ವಭ್ಯಾಸ(ರಿಹರ್ಸಲ್)ವನ್ನು ಕೊಳಗಲ್ ಏರ್‍ಸ್ಟ್ರೀಪ್‍ನಲ್ಲಿ ಆಯೋಜಿಸಲಾಗುವುದು ಎಂದರು.

*ಪ್ರತಿ ಸಾವಿರ ಯೋಗಾಸಕ್ತರಿಗೆ ಒಂದು ಚೌಕ್;ಅದಕ್ಕೆ ಇಬ್ಬರು ತರಬೇತುದಾರರು: ಪ್ರತಿ ಸಾವಿರ ಯೋಗಾಸಕ್ತರಿಗೆ ಒಂದು ಚೌಕ(ಬಾಕ್ಸ್‍ಗಳು)ಗಳನ್ನು ಗುರುತಿಸಲಾಗುತ್ತಿದ್ದು,ಪ್ರತಿ ಬಾಕ್ಸ್‍ಗೆ ಇಬ್ಬರು ಯೋಗ ತರಬೇತುದಾರರು ಇರಲಿದ್ದಾರೆ. ಅವರು ಬೃಹತ್ ಯೋಗಾಥಾನ್‍ಗಾಗಿ ಸಿದ್ದಪಡಿಸಿದ ನಿಯಮಾನುಸಾರ ಯೋಗಾಸನಗಳನ್ನು 45 ನಿಮಿಷಗಳ ಕಾಲ ತಿಳಿಸಿಕೊಡಲಿದ್ದಾರೆ;ಅದರಂತೆ ಯೋಗಾಸಕ್ತರು ಮಾಡಬೇಕು ಎಂದು ಅವರು ಹೇಳಿದರು.

20 ಸಾವಿರ ಯೋಗಾಸಕ್ತರಿಗೆ 20 ಬಾಕ್ಸ್‍ಗಳು ಹಾಗೂ ಯೋಗ ತರಬೇತಿ ನೀಡುವವರಿಗೆ ಚಿಕ್ಕದಾದ ವೇದಿಕೆ ನಿರ್ಮಿಸಲು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಶಾಲಾ-ಕಾಲೇಜುಗಳು ಮತ್ತು ವಿಶ್ವವಿದ್ಯಾಲಯ ಹಾಗೂ ಯೋಗಸಂಸ್ಥೆಗಳು ಹಾಗೂ ಸ್ವಯಂಸೇವಾ ಸಂಸ್ಥೆಗಳ ಯೋಗಾಸಕ್ತರು ಎಷ್ಟೆಷ್ಟು ಜನರು ಈ ಯೋಗಾಥಾನ್‍ದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂಬುದರ ವಿವರವನ್ನು ಅಧಿಕಾರಿಗಳಿಂದ ಪಡೆದ ಎಡಿಸಿ ಮಂಜುನಾಥ ಅವರು ಪ್ರತಿ ಅಧಿಕಾರಿಗಳಿಗೂ ನಿಖರ ಗುರಿಗಳನ್ನು ಇದೇ ಸಂದರ್ಭದಲ್ಲಿ ನೀಡಿದರು.

ಕಡ್ಡಾಯವಾಗಿ ನೋಂದಣಿಯಾಗುವುದನ್ನು ಇದೇ ಸಂದರ್ಭದಲ್ಲಿ ಪಾಲಿಸುವಂತೆ ಅವರು ಸೂಚಿಸಿದರು ಯೋಗಥಾನ್-2022 ವೆಬ್‍ಸೈಟ್: https://play.google.com/store/apps/details… ರಲ್ಲಿ ಆನ್‍ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ ಎಂದರು.

Also read: ಕರಾವಳಿಯ 3 ಜಿಲ್ಲೆಗಳಲ್ಲಿ ರೆಡ್, ಶಿವಮೊಗ್ಗ ಸೇರಿ 5 ಜಿಲ್ಲೆಗಳಲ್ಲಿ ನಾಳೆ ಆರೆಂಜ್ ಅಲರ್ಟ್

ದಾಖಲೆ ನಿರ್ಮಿಸಲು ನಡೆಯುತ್ತಿರುವ ಈ ಯೋಗಾಥಾನ್‍ನಲ್ಲಿ ಭಾಗವಹಿಸಲು ಕುಶಲಕೋಶ ಮೊಬೈಲ್ ಆ್ಯಪ್ ಮೂಲಕ ನೋಂದಣಿ ಮಾಡಿಕೊಳ್ಳಬಹುದು.ಯೋಗ ಸಂಸ್ಥೆಗಳು ಅಥವಾ ವೈಯಕ್ತಿಕವಾಗಿಯೂ ಆಸಕ್ತರು ಭಾಗವಹಿಸಿ,ಗಿನ್ನೆಸ್ ಬುಕ್ ಆಫ್ ರೆಕಾಡ್ರ್ಸ್ ಸಂಸ್ಥೆಯ ಸೂಚನೆಯಂತೆ ಯೋಗಾಸಕ್ತರು ಸಮಯಪಾಲನೆ, ಆವರಣಕ್ಕೆ ಪ್ರವೇಶಿಸುವ ಹಾಗೂ ಹೊರಗಡೆ ತೆರಳುವ ಎರಡೂ ಮಾರ್ಗಗಳಲ್ಲಿ ಪಾಲ್ಗೊಂಡವರ ನೋಂದಣಿ ,ಪರಿಶೀಲನೆ ನಡೆಯುತ್ತದೆ.ಭಾಗವಹಿಸಿದವರ ಸಂಖ್ಯೆಯನ್ನು ನಿಖರವಾಗಿ ದಾಖಲಿಸಿಕೊಳ್ಳಲು ಈ ಕ್ರಮವಹಿಸಲಾಗುತ್ತಿದೆ ಎಂದರು.
ಕುಶಲಕೋಶ ಮೊಬೈಲ್ ಆ್ಯಪ್‍ನಲ್ಲಿ ತಮ್ಮ ವಿವರ ದಾಖಲಿಸಿ ಯೋಗಾಥಾನ್‍ನಲ್ಲಿ ಭಾಗವಹಿಸಿದ ಪ್ರತಿಯೊಬ್ಬರಿಗೂ ಪ್ರಮಾಣಪತ್ರಗಳನ್ನು ಒದಗಿಸಲಾಗುತ್ತದೆ ಎಂದು ವಿವರಿಸಿದ ಅವರು ಯೋಗಾಭ್ಯಾಸದ ದಿನಗಳು ಹಾಗೂ ಯೋಗಾಥಾನ್ ದಿನದಂದು ಸಾರಿಗೆ ವ್ಯವಸ್ಥೆ,ಆಹಾರ ವ್ಯವಸ್ಥೆ,ಭದ್ರತಾ ವ್ಯವಸ್ಥೆ, ಏರ್‍ಸ್ಟ್ರೀಪ್ ಸ್ವಚ್ಛತೆ,ಕುಡಿಯುವ ನೀರು ಮತ್ತಿತರರ ಸೌಲಭ್ಯಗಳು,ಸ್ವಯಂ ಸೇವಕರು ಮತ್ತಿತರ ಅಗತ್ಯಗಳ ಪೂರ್ವಸಿದ್ಧತೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ಅಗತ್ಯ ಸಲಹೆ-ಸೂಚನೆಗಳನ್ನು ಅಪರ ಜಿಲ್ಲಾಧಿಕಾರಿ ಮಂಜುನಾಥ ಅವರು ನೀಡಿದರು.

ಯೋಗಾಥಾನ್ ನಡೆಯುವ ಸ್ಥಳದಲ್ಲಿ ವಿವಿಧ ಇಲಾಖೆಗಳ ಮಳಿಗೆಗಳನ್ನು ಹಾಕಿ ಯೋಜನೆಗಳ ಕುರಿತು ಅರಿವು ಮೂಡಿಸಲಾಗುತ್ತಿದ್ದು,ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಇಲಾಖೆಯ ಮಳಿಗೆಗಳನ್ನು ಹಾಕುವಂತೆ ಅವರು ಸೂಚನೆ ನೀಡಿದರು.

ಯೋಗಾಥಾನ್ ಕಾರ್ಯಕ್ರಮದ ಯಶಸ್ವಿ ಸಂಘಟನೆಗೆ ರಚಿಸಲಾಗಿರುವ ಪ್ರಚಾರ ಸಮಿತಿ,ವೇದಿಕೆ ಸಮಿತಿ, ಆಹಾರ ಸಮಿತಿ, ಕಾರ್ಯಕ್ರಮ ಸಂಘಟನಾ ಸಮಿತಿ, ಸಾರಿಗೆ ಸಮಿತಿ ಸೇರಿದಂತೆ ವಿವಿಧ ಸಮಿತಿಗಳಿಗೆ ಅಗತ್ಯ ಸಲಹೆ-ಸೂಚನೆಗಳನ್ನು ಇದೇ ಸಂದರ್ಭದಲ್ಲಿ ನೀಡಿದರು.
ಬಳ್ಳಾರಿ ಉಪವಿಭಾಗಾಧಿಕಾರಿ ಡಾ.ಆಕಾಶ ಶಂಕರ್ ಅವರು ಮಾತನಾಡಿ ಅನೇಕ ಸಲಹೆ-ಸೂಚನೆಗಳನ್ನು ಇದೇ ಸಂದರ್ಭದಲ್ಲಿ ನೀಡಿದರು.

ಮಹಾನಗರ ಪಾಲಿಕೆಯ ಆಯುಕ್ತರಾದ ರುದ್ರೇಶ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮನ್ಸೂರ್ ಅಲಿ,ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಹರಿಸಿಂಗ್ ರಾಠೋಡ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ರೆಹಮತ್‍ಉಲ್ಲಾ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ ರಂಗಣ್ಣನವರ್ ಮಾತನಾಡಿದರು.

ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು,ವಿವಿಧ ಯೋಗ ಸಂಸ್ಥೆಗಳ ಪದಾಧಿಕಾರಿಗಳು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BellaryKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaYogaಬಳ್ಳಾರಿ
Share205Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಕರಾವಳಿಯ 3 ಜಿಲ್ಲೆಗಳಲ್ಲಿ ರೆಡ್, ಶಿವಮೊಗ್ಗ ಸೇರಿ 5 ಜಿಲ್ಲೆಗಳಲ್ಲಿ ನಾಳೆ ಆರೆಂಜ್ ಅಲರ್ಟ್

Next Post

Rain damage: CM Bommai seeks a fair relief as per Central guidelines

kalpa News

kalpa News

Next Post
ಕೇರಳದಿಂದ ಬಂದವರಿಂದ ಮಂಗಳೂರಿನಲ್ಲಿ ಹಿಂಸಾಚಾರ: ಗೃಹ ಸಚಿವ

Rain damage: CM Bommai seeks a fair relief as per Central guidelines

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL