ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ದಾಖಲೆ ಇಲ್ಲದೆ ಹಣ ಇಟ್ಟುಕೊಂಡಿದ್ದ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿ 76 ಲಕ್ಷ ಹಣ ವಶಪಡಿಸಿಕೊಂಡಿದ್ದಾರೆ.
ಇದು ಹವಾಲ ಹಣವಿರಬಹುದೆಂದು ಶಂಕಿಸಲಾಗಿದ್ದು, ಪೊಲೀಸರು ಈ ಬಗ್ಗೆ ಮುಂದಿನ ತನಿಖೆ ಕೈಗೊಂಡಿದ್ದಾರೆ.
ಗುಜರಾತ್ ಮೂಲದ ರಾಬಿನ್ ಕುಮಾರ್(26), ರಾಜಸ್ಥಾನದ ಸುಂದರ್‍ಲಾಲ್(39) ಮತ್ತು ಬೆಂಗಳೂರಿನ ಸುದಾಮ ನಗರದ ಸಿಕೆಸಿ ಗಾರ್ಡನ್ ನಿವಾಸಿ ನೀರಜ್ ಮಿಶ್ರಾ(37) ಬಂಧಿತರು.

Also read: ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವ: ಸಂಭ್ರಮಾಚರಣೆ ಹೇಗಿದೆ ಗೊತ್ತಾ? ಇಲ್ಲಿದೆ ಮಾಹಿತಿ
ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಸ್ಥಳಕ್ಕೆ ತೆರಳಿ ಮೂವರನ್ನು ಬಂಧಿಸಿ ಅವರ ಬಳಿ ಇದ್ದ 76 ಲಕ್ಷ ರೂ. ಹಣ ಹಾಗೂ ಮೂರು ಮೊಬೈಲ್‍ಗಳನ್ನು ವಶಪಡಿಸಿಕೊಂಡಿದ್ದಾರೆ.

ಈ ಕಾರ್ಯಾಚರಣೆಯನ್ನು ಬೆಂಗಳೂರು ನಗರ ಸಿಸಿಬಿ ಸಂಘಟಿತ ಅಪರಾಧ ದಳ (ಪೂರ್ವ) ವಿಭಾಗದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕೈಗೊಂಡಿದ್ದಾರೆ.










Discussion about this post