ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ತಂದೆ, ಮಗ ಆಯತಪ್ಪಿ ರೈಲಿನ ಕೆಳಗೆ ಬಿದ್ದು, ಸಾವನ್ನಪ್ಪಿರುವ ದಾರಣ ಘಟನೆ ಭದ್ರಾವತಿ ರೈಲು ನಿಲ್ದಾಣದಲ್ಲಿ ನಡೆದಿದೆ.
ತಾಳಗುಪ್ಪ-ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ರೈಲು ಬೆಂಗಳೂರಿಗೆ ಭದ್ರಾವತಿ ರೈಲು ನಿಲ್ದಾಣದಿಂದ ಹೊರಡುತ್ತಿತ್ತು. ಈ ವೇಳೆ ರೈಲು ಹತ್ತಲು ಓಡಿ ಬಂದ ತಂದೆ, ಮಗ ಮೃತಪಟ್ಟಿದ್ದಾರೆ.
ರೈಲು ಹತ್ತುವಾಗ ಕಾಲು ಜಾರಿ ರೈಲಿನ ಅಡಿಗೆ ಮಗ ಬಿದ್ದಿದ್ದಾರೆ. ಮಗನ ರಕ್ಷಣೆಗೆ ಮುಂದಾದ ತಂದೆಯೂ ಸಹ ಜಾರಿ ರೈಲಿನ ಅಡಿಯಲ್ಲಿ ಬಿದ್ದಿದ್ದಾರೆ. ತಲೆಗೆ ತೀವ್ರ ಪೆಟ್ಟಾದ ಪರಿಣಾಮ ತಂದೆ ಸ್ಥಳದಲ್ಲೇ ಅಸುನೀಗಿದರೆ, ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲಿ ಮಗ ಮೃತಪಟ್ಟಿದ್ದಾನೆ.
ಮೃತರನ್ನು ಮೋಹನ್ ಪ್ರಸಾದ್ (70) ಹಾಗೂ ಅಮರನಾಥ್ (31) ಎಂದು ಗುರುತಿಸಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















