ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮನೆ ಬಾಡಿಗೆ ಕೇಳುವ ನೆಪದಲ್ಲಿ ಬಂದ ಓರ್ವ ಪುರುಷ ಮತ್ತು ಬುರ್ಖಾಧಾರಿ ಮಹಿಳೆ ಮನೆಯೊಡತಿ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ ಘಟನೆಗೆ ಸಂಬಂಧಪಟ್ಟಂತೆ ಒಬ್ಬರನ್ನು ಬಂಧಿಸಿರುವ ಘಟನೆ ಜಯನಗರದಲ್ಲಿ ನಡೆದಿದೆ.
ಮನೆ ಬಾಡಿಗೆ ಕೇಳಿಕೊಂಡು ಬಂದ ಅಪರಿಚಿತ ಪುರುಷ ಮತ್ತು ಮಹಿಳೆ ಏಕಾಏಕಿ ಮನೆಯೊಳಗೆ ನುಗ್ಗಿ ಮಹಿಳೆಯ ಕುತ್ತಿಗೆಯಲ್ಲಿದ್ದ ಮಾಂಗಲ್ಯ ಸರ ಕಿತ್ತುಕೊಳ್ಳಲು ಪ್ರಯತ್ನಿಸಿ ವಿಫಲರಾಗಿದ್ದು, ಅಲ್ಲಿಯೇ ಇಟ್ಟಿದ್ದ 21 ಗ್ರಾಂ ಚಿನ್ನದ ಸರವನ್ನು ಎತ್ತಿಕೊಂಡು ಪರಾರಿಯಾಗಿದ್ದರು. ಪ್ರಕರಣದ ಜಾಡು ಹಿಡಿದ ಪೊಲೀಸರು ಓರ್ವ ಮಹಿಳೆಯನ್ನು ಬಂದಿಸುವಲ್ಲಿ ಯಶಸ್ವಿಯಾಗಿದ್ದು, ಇನ್ನೋರ್ವನಿಗಾಗಿ ಹುಡುಕಾಟ ಮುಂದುವರೆಸಿದ್ದಾರೆ ಎಂದು ತಿಳಿದುಬಂದಿದೆ.










Discussion about this post