ಕಲ್ಪ ಮೀಡಿಯಾ ಹೌಸ್ | ಪುತ್ತೂರು |
ಸ್ವೀಟ್ ಖರೀದಿಸಲು ಅಂಗಡಿಗೆ ಬಂದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಸಂಪ್ಯ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ತಾಲೂಕಿನ ಕೆದಂಬಾಡಿ ಗ್ರಾಮದ ತಿಂಗಳಾಡಿ ಎಂಬಲ್ಲಿರುವ ಬೇಕರಿಯಲ್ಲಿ ಸಂತ್ರಸ್ತ ಯುವತಿ ಸ್ವೀಟ್ ಖರೀದಿಸುತ್ತಿದ್ದ ವೇಳೆ ಏಕಾಏಕಿ ಸ್ಥಳಕ್ಕಾಮಿಸಿದ ಅಪರಿಚಿತ ವ್ಯಕ್ತಿ ಅಸಭ್ಯವಾಗಿ ಯುವತಿಯನ್ನು ಸ್ಪರ್ಶಿಸಿದ್ದು, ಯುವತಿ ಕಿರುಚಿಕೊಂಡಾಗ ಸ್ಥಳದಿಂದ ಪರಾರಿಯಾಗಿದ್ದ. ಈ ಘಟನೆಗೆ ಸಂಬಂಧಿಸಿದಂತೆ ಯುವತಿ ನೀಡಿದ ದೂರನ್ನು ಆಧರಿಸಿ, ಕಾರ್ಯಾಚರಣೆ ಕೈಗೊಂಡ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸರ್ವೆ ಗ್ರಾಮದ ಸೊರಕೆ ಮನೆಯ ಬದ್ರದ್ದೀನ್ ಬಂಧಿತ ಆರೋಪಿಯಾಗಿದ್ದು, ಈತನ ವಿರುದ್ಧ ಐಪಿಸಿ ಸೆಕ್ಷನ್ ೩೫೪ರಂತೆ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
Also read: ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಇಂಜಿನಿಯರ್ ಗಳಿಗೆ ಸರ್ ಎಂ. ವಿಶ್ವೇಶ್ವರಯ್ಯ ಸೇವಾರತ್ನ ಪ್ರಶಸ್ತಿ ಪ್ರದಾನ


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















