ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಬಿಜೆಪಿ ಸರ್ಕಾರದ ಮಹತ್ವಾಕಾಂಕ್ಷಿ ಮತಾಂತರ ನಿಷೇಧ ಕಾಯ್ದೆಗೆ ವಿಧಾನ ಪರಿಷತ್’ನಲ್ಲಿ ಅಂಗೀಕಾರ ದೊರೆತಿದ್ದು, ಈ ಮೂಲಕ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದೆ.
ಈಗಾಗಲೇ ವಿಧಾನ ಸಭೆಯಲ್ಲಿ ಅಂಗೀಕಾರಗೊಂಡಿರುವ ಕರ್ನಾಟಕ ಧಾರ್ಮಿಕ ಸ್ವಾತಂತ್ರ ಹಕ್ಕು ಸಂರಕ್ಷಣಾ ಕಾಯ್ದೆ ಅಥವಾ ಮತಾಂತರ ನಿಷೇಧ ವಿಧೇಯಕವನ್ನು ಪರಿಷತ್’ನಲ್ಲಿ ಪ್ರತಿಪಕ್ಷಗಳ ಭಾರೀ ವಿರೋಧದ ನಡುವೆಯೂ ಅಂಗೀಕರಿಸಲಾಗಿದೆ.
ವಿಧೇಯಕ ಮಂಡಿಸಿ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಇದರ ಮೂಲಕ ಯಾರ ಧಾರ್ಮಿಕ ಸ್ವಾತಂತ್ರವನ್ನೂ ಕಸಿಯುವ ಉದ್ದೇಶವಿಲ್ಲ. ಈ ಕಾಯ್ದೆ ಹೀಗೆ ರೂಪುಗೊಂಡಿಲ್ಲ. ಬಲವಂತದ ಮೂಲಕ ಅಥವಾ ಆಮಿಷವೊಡ್ಡಿ ಮತಾಂತರ ಮಾಡುವುದನ್ನು ನಿಷೇಧಿಸಿ ಸುಪ್ರೀಂ ಕೋರ್ಟ್ ಹೇಳಿದ್ದು, ಇದರಂತೆಯೇ ಕಾಯ್ದೆಯನ್ನು ರೂಪಿಸಲಾಗಿದೆ ಎಂದರು.
ಈ ವಿಧೇಯಕಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಅವರು, ಈ ಮಸೂದೆ ಅಸಂವಿಧಾನಿಕವಾಗಿದ್ದು, ಧಾರ್ಮಿಕ ಹಕ್ಕಿನ ಮೇಲೆ ಪರಿಣಾಮ ಬೀರುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿ, ಪ್ರತಿಯನ್ನು ಹರಿದು ಹಾಕಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post