ಕಲ್ಪ ಮೀಡಿಯಾ ಹೌಸ್ | ಮಂಡ್ಯ |
ಪ್ರಧಾನಮAತ್ರಿ ನರೇಂದ್ರ ಮೋದಿಯವರ 72 ನೇ ಹುಟ್ಟು ಹಬ್ಬದ ಅಂಗವಾಗಿ ದೇಶಾದ್ಯಂತ ರಕ್ತದಾನ ಸೇರಿದಂತೆ ವಿವಿಧ ಸಾಮಾಜಿಕ ಸೇವಾ ಕಾರ್ಯಗಳನ್ನು ಹಮ್ಮಿಕೊಂಡಿರುವುದ ಅವರ ಜನಪ್ರಿಯತೆಗೆ ಸಾಕ್ಷಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ. ಗೋಪಾಲಯ್ಯ Minister Gopalaiah ಹೇಳಿದರು.
ಪಕ್ಷದ ಜಿಲ್ಲಾ ಕಾರ್ಯಾಲಯದಲ್ಲಿಂದು ಹಮ್ಮಿಕೊಂಡಿದ್ದ ರಕ್ತದಾನ ಶಿಬಿರದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡೀ ವಿಶ್ವದ ಮನ್ನಣೆಗಳಿಸಿರುವ ನರೇಂದ್ರ ಮೋದಿಯವರು ತಮ್ಮ ಹುಟ್ಟುಹಬ್ಬವನ್ನು ಕೇಕು ಕತ್ತರಿಸದೇ ಸಾಮಾಜಿಕ ಸೇವಾ ಕಾರ್ಯಗಳ ಮೂಲಕ ಮಾಡಲು ಸೂಚಿಸಿರುವ ಹಿನ್ನೆಲೆಯಲ್ಲಿ ಮಂಡ್ಯ ಸೇರಿದಂತೆ ರಾಜ್ಯಾದ್ಯಂತ ಸಾವಿರಾರು ಕಡೆಗಳಲ್ಲಿ ಹಮ್ಮಿಕೊಳ್ಳಲಾಗಿದೆ ಎಂದರು.
ಭಾರತವನ್ನು ವಿಶ್ವಮಟ್ಟಕ್ಕೆ ಪರಿಚಯಿಸಿದ ಕೀರ್ತಿ ಮೋದಿಯವರಿಗೆ ಸಲ್ಲುತ್ತದೆ. ಅಂಥಹ ಮಹಾನ್ ನಾಯಕರಿಗೆ ಇನ್ನೂ ಹೆಚ್ಚಿನ ಆಯುಷ್ಯ, ಆರೋಗ್ಯ ಭಗವಂತ ನೀಡಲಿ ಎಂದು ಶುಭ ಹಾರೈಸಿದರು.
Also read: ಮಡಿಕೇರಿ, ಗೋಣಿಕೊಪ್ಪ ದಸರಾ ಸಂಪ್ರದಾಯದಂತೆ ಆಚರಿಸಿ: ಸಚಿವ ಬಿ.ಸಿ. ನಾಗೇಶ್
ಇದೇ ವೇಳೆ ಕ್ಷಯ ಮುಕ್ತ ಭಾರತ ನಿರ್ಮಾಣ ಕೂಡ ಪ್ರಧಾನಮಂತ್ರಿಗಳ ಕನಸಾಗಿದೆ.2025 ರ ವೇಳೆಗೆ ಭಾರತವನ್ನು ಕ್ಷಯ ರೋಗ ಮುಕ್ತಗೊಳಿಸುವುದು ಪ್ರಧಾನಿಗಳ ಕನಸಾಗಿದೆ. ಮಂಡ್ಯ ಜಿಲ್ಲೆಯಲ್ಲಿ 700 ಕ್ಕೂ ಅಧಿಕ ಕ್ಷಯ ರೋಗಿಗಳಿದ್ದಾರೆ. ಈ ಎಲ್ಲರಿಗೂ ವೈದ್ಯರ ಸಲಹೆ ಮೇರೆಗೆ ಫುಡ್‌ಕಿಟ್ ವಿತರಣೆ ಮಾಡಲಾಗುವುದು ಎಂದರು.
ಇಂದು 112 ಜನರಿಗೆ ಫುಡ್ ಕಿಟ್ ವಿತರಣೆ ಮಾಡಲಾಗಿದೆ.ಅಕ್ಟೋಬರ್ 2 ರೊಳಗೆ ಉಳಿದ 780 ಜನರಿಗೆ ಫುಡ್ ಕಿಟ್‌ಗಳನ್ನು ಅವರು ಗುಣಮುಖರಾಗುವವರೆಗೂ ಪ್ರತಿ ತಿಂಗಳೂ ನೀಡಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಪದಾಧಿಕಾರಿಗಳು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post