ಕಲ್ಪ ಮೀಡಿಯಾ ಹೌಸ್ | ಉತ್ತರ ಕನ್ನಡ |
ಅರಣ್ಯ ಸಂರಕ್ಷಣಾ ಕಾಯ್ದೆ ಪ್ರಕರಣದಲ್ಲಿ 42 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಉತ್ತರ ಕನ್ನಡ ಪೊಲೀಸರು ಯಶಸ್ವಿಯಾಗಿದ್ದಾರೆ.
ಹನುಮಂತಪ್ಪ ಯಮನಪ್ಪ ನಿಂಗದಾಳ ಪೂಜಾರಿ ಎಂಬತ ಅರಣ್ಯ ಸಂರಕ್ಷಣಾ ಕಾಯ್ದೆಯೊಂದರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 42 ವರ್ಷಗಳಿಂದಲೂ ತಲೆ ಮರೆಸಿಕೊಂಡಿದ್ದನು. ಆದರೆ, ಛಲಬಿಡದ ತ್ರಿವಿಕ್ರಮನಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು ಕೊನೆಗೂ ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಪತ್ತೆ ಕಾರ್ಯದಲ್ಲಿ ಭಾಗಿಯಾದ ಕದ್ರಾ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿಗಳೂ ಸಹ ಪಾಲ್ಗೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post