ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕಾರು ಹಾಗೂ ಆಟೋ ನಡುವೆ ಡಿಕ್ಕಿಯಾಗಿ ಆಟೋದಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ತಾಲ್ಲೂಕಿನ ಮಲ್ಲಿಗೇನಹಳ್ಳಿ ಬಳಿ ನಡೆದಿದೆ.
ಡಿಕ್ಕಿಯಾದ ರಭಸಕ್ಕೆ ಆಟೋ ಪಲ್ಟಿಯಾಗಿ ರಸ್ತೆಯ ಮೇಲೆ ಪಲ್ಟಿಯಾಗಿ ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ. ಇನ್ನು ಘಟನೆಯಲ್ಲಿ ಆಟೋದಲ್ಲಿದ್ದವರು ಗಾಯಗೊಂಡಿದ್ದು, ಅವರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂಬಂಧ ಶಿವಮೊಗ್ಗ ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುರೆಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















