ಕಲ್ಪ ಮೀಡಿಯಾ ಹೌಸ್ | ಮಂಡ್ಯ |
ಭಾರತೀಯ ಆದರ್ಶ ಮತ್ತು ಸಂಸ್ಕೃತಿಗೆ ಹೆಸರಾದ ಮಹರ್ಷಿ ವಾಲ್ಮೀಕಿ ಅವರ ಜಯಂತಿಯನ್ನು ಅಕ್ಟೋಬರ್ 09 ರಂದು ನಗರದ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಎಚ್.ಎಸ್.ನಾಗರಾಜು ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮಹರ್ಷಿವಾಲ್ಮೀಕಿ ರವರ ಜಯಂತಿ ಆಚರಣೆಯ ಸಂಬಂಧ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

Also read: ರಾಜಕಾರಣ ಪ್ರವೇಶಿಸುವ ಇಂಗಿತದ ಹಿಂದೆ ಯಾವುದೇ ಪಕ್ಷದ ಮುಖಂಡರ ಪ್ರೇರಣೆ ಇಲ್ಲ: ಡಾ. ಧನಂಜಯ ಸರ್ಜಿ ಸ್ಪಷ್ಟನೆ
ವೇದಿಕೆ ಕಾರ್ಯಕ್ರಮ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಡೆಯಲಿದ್ದು,ಶಿಷ್ಠಾಚಾರದ ಪ್ರಕಾರ ಗಣ್ಯರನ್ನು ಆಹ್ವಾನಿಸಲಾಗುವುದು.ಮುಖ್ಯ ಭಾಷಣಕಾರರಾಗಿ ಚೆನ್ನಪಟ್ಟಣ ಸಾರ್ವಜನಿಕ ಆಸ್ಪತ್ರೆಯ ದಂತ ವೈದ್ಯೆ ಡಾ.ಸುಗುಣ ರವರನ್ನು ಆಹ್ವಾನಿಸುವಂತೆ ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು.

ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಬಿ.ರಂಗೇಗೌಡ, ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಶ್ರೀನಿವಾಸ್, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ಮಂಜುನಾಥ್, ಜಿಲ್ಲಾ ವಾರ್ತಾಧಿಕಾರಿ ಎಸ್.ಹೆಚ್. ನಿರ್ಮಲ ವಿವಿಧ ಸಂಘ ಸಂಸ್ಥೆಗಳ ಮುಖಂಡರುಗಳಾದ ವೆಂಕಟೇಶ್, ಟಿ.ಸಿ.ಪುಟ್ಟಸ್ವಾಮಿ ನಾಯಕ, ಚಂದ್ರನಾಯಕ, ಕೃಷ್ಣನಾಯಕ ಸೇರಿದಂತೆ ಇತರರು ಉಪಸ್ಥಿತರಿದ್ದರು.











Discussion about this post