ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ತಾಲೂಕಿನಲ್ಲಿ ನಡೆದ ಭದ್ರಾ ವಲಯ ಮಟ್ಟದ ಕ್ರೀಡಾಕೂಟದಲ್ಲಿ ನಗರದ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯ ಪ್ರೌಢಶಾಲಾ ವಿಭಾಗದ ಬಾಲಕ-ಬಾಲಕಿಯರು ಭಾಗವಹಿಸಿ ವೈಯಕ್ತಿಕ ಪ್ರಶಸ್ತಿ, ತಂಡ ಪ್ರಶಸ್ತಿ ಹಾಗೂ 2022-23 ನೇ ಸಾಲಿನ ಸಮಗ್ರ ಪ್ರಶಸ್ತಿ ಪಡೆದಿಪಡೆದಿದ್ದು, ಆಡಳಿತ ಮಂಡಳಿ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು.
ಮೊಹಮ್ಮದ್ ಸೈಯದ್ ಅಲಿ ಹಾಗೂ ಭಾವನ ವೈಯಕ್ತಿಕ ಪ್ರಶಸ್ತಿಯನ್ನು ಪಡೆದುಕೊಂಡಿದ್ದು, ಕ್ರೀಡಾಕೂಟದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ವಿಶ್ವೇಶ್ವರಯ್ಯ ವಿದ್ಯಾ ಸಂಸ್ಥೆಯ ಅಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕ್ರಿಯಾಶೀಲ ಅಧ್ಯಕ್ಷ ಬಿ. ಸಿದ್ದಬಸಪ್ಪ, ಆಡಳಿತಾಧಿಕಾರಿ ಡಾ. ರಾಕೇಶ್ ಶುಭ ಹಾರೈಸಿದ್ದಾರೆ.
ಈ ಸಂದರ್ಭದಲ್ಲಿ ದೈಹಿಕ ಶಿಕ್ಷಣ ನಿರ್ದೇಶಕ ಶಿವಲಿಂಗೇಗೌಡ, ಎಲ್ಲಾ ವಿಭಾಗಗಳ ಮುಖ್ಯಶಿಕ್ಷಕರು, ದೈಹಿಕ ಶಿಕ್ಷಕ ರವಿ ಹಾಗೂ ರೇವತಿ ಹಾಗೂ ಶಿಕ್ಷಕ ವೃಂದದವರು ವಿಜೇತರಿಗೆ ಶುಭ ಹಾರೈಸಿರುತ್ತಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post