ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ನಗರಸಭೆ ಅಧ್ಯಕ್ಷರ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಅನುಸುಧಾ ಮೋಹನ್ ಇಂದು ನಾಮಪತ್ರ ಸಲ್ಲಿಸಿದರು.
ವಾರ್ಡ್ ನಂ. 13ರ ಸದಸ್ಯೆ ಅನುಸುಧಾ ಮೋಹನ್ ಬೆಳಿಗ್ಗೆ ಚುನಾವಣಾಧಿಕಾರಿ ಎಸ್.ಬಿ ದೊಡ್ಡೆಗೌಡರ ಅವರಿಗೆ ನಾಮಪತ್ರ ಸಲ್ಲಿಸಿದರು. ಪಕ್ಷದ ಅಧ್ಯಕ್ಷ ಟಿ. ಚಂದ್ರೇಗೌಡ, ನಗರ ಸಭೆ ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿ ಸಮಿತಿಯ ಅಧ್ಯಕ್ಷ ಕೆ ಸುದೀಪ್ ಕುಮಾರ್,ಸದಸ್ಯ ಮಣಿ ಎ.ಎನ್.ಎಸ್, ಟಿ.ವಿ ಗೋವಿಂದಸ್ವಾಮಿ ಮೋಹನ್ ಉಪಸ್ಥಿತರಿದ್ದರು.
ಗೀತಾ ರಾಜಕುಮಾರ್ ಅವರಿಂದ ತೆರವಾಗಿರುವ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ನಗರಸಭೆ ಅಧಿಕಾರದ ಚುಕ್ಕಾಣಿಯನ್ನು ಕಾಂಗ್ರೆಸ್ ಪಕ್ಷ ಹಿಡದಿದ್ದು ಆಂತರಿಕ ಒಪ್ಪಂದದಂತೆ ಸಾಮಾನ್ಯ ಸ್ಥಾನಕ್ಕೆ ಮೀಸಲಾಗಿರುವ ಅಧ್ಯಕ್ಷ ಸ್ಥಾನಕ್ಕೆ ಮೊದಲ 10 ತಿಂಗಳ ಅವಧಿಗೆ ಗೀತ ರಾಜಕುಮಾರ ಅವರು ಅಧ್ಯಕ್ಷರಾಗಿ ಅಧಿಕಾರ ನಡೆಸಿದ್ದಾರೆ.
ಎರಡನೇ ಅವಧಿಗೆ ಮತ್ತೊಬ್ಬರಿಗೆ ಅವಕಾಶ ಮಾಡಿಕೊಡುವ ಹಿನ್ನೆಲೆಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಜಿಲ್ಲಾಧಿಕಾರಿಗಳು ಚುನಾವಣೆ ಘೋಷಿಸಿದ್ದು ಇಂದು ನಡೆಯಲಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















