No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Tuesday, July 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಅ.30ರಂದು ಕಲಬುರಗಿಯಲ್ಲಿ ಹಿಂದುಳಿದ ವರ್ಗಗಳ ಜಾಗೃತಿ ಸಮಾವೇಶ: ಶಾಸಕ ಈಶ್ವರಪ್ಪ

ಮುಸ್ಲಿಂ ಸಮಾಜದ ಹಿರಿಯರುದಾರಿ ತಪ್ಪುತ್ತಿರುವ ಯುವಕರನ್ನು ಹದ್ದುಬಸ್ತಿನಲ್ಲಿಡಬೇಕಾಗಿದೆ: ಕೆಎಸ್‌ಈ

kalpa News by kalpa News
September 23, 2022
in ಶಿವಮೊಗ್ಗ
0
ರಾಜ್ಯಪಾಲರ ಭೇಟಿ ವಿಚಾರದಲ್ಲಿ ಸಚಿವ ಈಶ್ವರಪ್ಪ ನೀಡಿದ ಸ್ಪಷ್ಟೀಕರಣವೇನು? ಇಲ್ಲಿದೆ ಮಾಹಿತಿ

File Photo

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ರಾಜ್ಯ ಬಿಜೆಪಿ ವತಿಯಿಂದ ಅ.30 ರಂದು ಕಲಬುರಗಿಯಲ್ಲಿ ಹಿಂದುಳಿದ ವರ್ಗಗಳ ಜಾಗೃತಿ ಸಮಾವೇಶ ನಡೆಯಲಿದ್ದು, ಈ ಹಿನ್ನಲೆಯಲ್ಲಿ ಅ.9 ರಂದು ಹುಬ್ಬಳ್ಳಿಯಲ್ಲಿ ಸಮಾವೇಶದ ಪೂರ್ವಭಾವಿ ಸಭೆ ನಡೆಯಲಿದೆ ಎಂದು ಶಾಸಕ ಈಶ್ವರಪ್ಪ MLA Eshwarappa ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಮಾವೇಶದ ಹಿನ್ನಲೆಯಲ್ಲಿ ಪೂರ್ವಭಾವಿ ಪ್ರವಾಸವನ್ನು ಪಕ್ಷದ ಮುಖಂಡರು ಹಮ್ಮಿಕೊಂಡಿದ್ದು, 5 ತಂಡ ರಚಿಸಲಾಗಿದೆ. ಪೂರ್ವಭಾವಿ ಸಭೆಯಲ್ಲಿ 224 ವಿಧಾನಸಭಾ ಕ್ಷೇತ್ರಗಳಿಂದಲೂ ಸುಮಾರು 3 ಸಾವಿರ ಹಿಂದುಳಿದ ವರ್ಗದ ಪ್ರಮುಖ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ. ಅ.30ರ ಕಲಬುರಗಿ ಸಮಾವೇಶದಲ್ಲಿ ಸುಮಾರು 4 ಲಕ್ಷಕ್ಕೂ ಹೆಚ್ಚು ಜನ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದರು.
ತಂಡ 1 ರಲ್ಲಿ ಕೆ.ಎಸ್. ಈಶ್ವರಪ್ಪ ನೇತೃತ್ವ ವಹಿಸಲಿದ್ದು, ಸೆ. 27 ರಂದು ಶಿವಮೊಗ್ಗ, ಚಿಕ್ಕಮಗಳೂರು, 30 ರಂದು ಚಾಮರಾಜನಗರ, ಅ. 1ರಂದು ಮಂಡ್ಯ, ಹಾಸನ, 3 ರಂದು ಬೀದರ್ ನಲ್ಲಿ ಪ್ರವಾಸ ಕೈಗೊಳ್ಳುವರು ಎಂದರು.

2 ನೇ ತಂಡದಲ್ಲಿ ಇಂಧನ ಸಚಿವ ವಿ. ಸುನಿಲ್ ಕುಮಾರ್ ನೇತೃತ್ವದಲ್ಲಿ ಸೆ. 27 ರಂದು ಮಂಗಳೂರು, ಉಡುಪಿ, ಅ. 3 ರಂದು ರಾಯಚೂರು, ಯಾದಗಿರಿಯಲ್ಲಿ ಪ್ರವಾಸ ಕೈಗೊಳ್ಳಲಾಗಿದೆ. 3 ನೇ ತಂಡದ ನೇತೃತ್ವವನ್ನು ಸಚವಿ ಕೋಟ ಶ್ರೀನಿವಾಸ ಪೂಜಾರಿ ವಹಿಸಲಿದ್ದು, ಸೆ. 28 ರಂದು ಕೋಲಾರ, ಚಿಕ್ಕಬಳ್ಳಾಪುರ, 29 ರಂದು ಬೆಂಗಳೂರು ಗ್ರಾಮಾಂತರ, ಉತ್ತರ, ದಕ್ಷಿಣ ಹಾಗೂ ರಾಮನಗರ ಪ್ರವಾಸ ಕೈಗೊಂಡಿದ್ದಾರೆ ಎಂದರು.
ತಂಡ 4 ರ ನೇತೃತ್ವವನ್ನು ಸಚಿವ ಬೈರತಿ ಬಸವರಾಜ್ ವಹಿಸಲಿದ್ದು, ಅ. 1 ರಂದು ಚಿತ್ರದುರ್ಗ, ದಾವಣಗೆರೆ, ಅ. 2 ರಂದು ಹಾವೇರಿ, ಹುಬ್ಬಳ್ಳಿ, ಧಾರವಾಡ, ಗದಗ, 3 ರಂದು ತುಮಕೂರು, ಮಧುಗಿರಿಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. 5 ನೇ ತಂಡದಲ್ಲಿ ಸಚಿವ ಆನಂದ್ ಸಿಂಗ್ ನೇತೃತ್ವ ವಹಿಸಲಿದ್ದು, ಅ. 1 ರಂದು ವಿಜಯನಗರ, ಬಳ್ಳಾರಿ, 3 ರಂದು ಬೆಳಗಾವಿ, ಚಿಕ್ಕೋಡಿಯಲ್ಲಿ ಪ್ರವಾಸ ಕೈಗೊಂಡಿದ್ದಾರೆ ಎಂದರು.

ಹಿಂದುಳಿದ ವರ್ಗಗಳಿಗೆ ಕಾಂಗ್ರೆಸ್ ನವರು ಏನೂ ಮಾಡಿಲ್ಲ. ಖಾಲಿ ಡಬ್ಬ ಅಲುಗಾಡಿಸಿ ಶಬ್ಧ ಜಾಸ್ತಿ ಮಾಡಿದ್ದು ಬಿಟ್ಟರೆ ಹಿಂದುಳಿದ ವರ್ಗಕ್ಕೆ ಅನ್ಯಾಯ ಮಾಡಿದ್ದಾರೆ. ಹಿಂದುಳಿದ ವರ್ಗದ ಸಮಾವೇಶ ಮಾಡದೇ ಸಿದ್ಧರಾಮೋತ್ಸವ ಮಾಡಿದ್ದಾರೆ. ಈಗಾಗಲೇ ಡಿಕೆಶಿ ಸರ್ವಾಧಿಕಾರಿ ಧೋರಣೆ ವಿರುದ್ಧ ದಿನೇಶ್ ಗುಂಡೂರಾವ್, ಆರ್.ವಿ. ದೇಶಪಾಂಡೆ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ವಿಭಜನೆಯತ್ತ ಸಾಗಿದೆ. ಹಿಂದುಳಿದ ವರ್ಗದ ಬಗ್ಗೆ ಕಾಂತರಾಜ್ ವರದಿಯನ್ನು 140 ಕೋಟಿ ರೂ. ವೆಚ್ಚದಲ್ಲಿ ತಯಾರಿಸಿ ಅದನ್ನು ವಿಧಾನಸಭೆಯಲ್ಲಿ ಮಂಡಿಸಲಿಲ್ಲ. ಆ ವರದಿಗೆ ಮುಖ್ಯ ಕಾರ್ಯದರ್ಸಿ ಸಹಿಯನ್ನೇ ಹಾಕಿಲ್ಲ. ಮೂಗಿಗೆ ತುಪ್ಪ ಸವರಿ ಕಾಂಗ್ರೆಸ್ ನವರು ಹಿಂದುಳಿದ ವರ್ಗಕ್ಕೆ ಮೋಸ ಮಾಡಿದ್ದಾರೆ. ಹಿಂದುಳಿದವರ ಬಗ್ಗೆ ಮಾತನಾಡಲು ಕಾಂಗ್ರೆಸ್ ಗೆ ನೈತಿಕತೆ ಇಲ್ಲ ಎಂದರು.
ಬಿಜೆಪಿ ಅಧಿಕಾರಕ್ಕೆ ಬಂದು 4 ವರ್ಷವಾದರೂ ಕಾಂತರಾಜ್ ವರದಿ ಏಕೆ ಮಂಡಿಸಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ಕರ್ನಾಟದಲ್ಲಿ ಅನೇಕ ಜಾತಿ ಸಮುದಾಯಗಳು ಮೀಸಲಾತಿ ಕೇಳುತ್ತಿದ್ದಾರೆ. ಅದಕ್ಕಾಗಿ ಕುಲಶಾಸ್ತ್ರೀಯ ಅಧ್ಯಯನ ನಡೆಸಲು ಸರ್ಕಾರ ಆದೇಶ ನೀಡಿದ್ದು, ಜಯಪ್ರಕಾಶ್ ಹೆಗ್ಗಡೆ ನೇತೃತ್ವದ ಸಮಿತಿ ಸಂಪೂರ್ಣ ವರದಿ ಕೊಟ್ಟ ನಂತರ ಜಾರಿ ಮಾಡಲು ಬಿಜೆಪಿ ಸರ್ಕಾರ ಬದ್ಧವಾಗಿದೆ ಎಂದರು.

Also read: ಸೆ.26ರಿಂದ ಅ.4ರವರೆಗೆ ಅದ್ಧೂರಿ ಸಾಂಸ್ಕೃತಿಕ ದಸರಾ ಆಚರಣೆ: ಎಸ್.ಜಿ. ರಾಜು

‘ಪೇ ಸಿಎಂ’ ಪೋಸ್ಟರ್ ಬಗ್ಗೆ ಮಾತನಾಡಿದ ಈಶ್ವರಪ್ಪ, ಕಾಂಗ್ರೆಸ್ ಇಷ್ಟು ನೀಚಮಟ್ಟಕ್ಕೆ ಇಳಿಬಾರದಿತ್ತು. ಕಂಟ್ರ್ಯಾಕ್ಟ್ ಅಸೋಸಿಯೇಷನ್ ಅಧ್ಯಕ್ಷ ಕಾಂಗ್ರೆಸಿಗರ ಚೇಲಾ ಕೆಂಪಣ್ಣ ಪ್ರಧಾನಿ ಮೋದಿಗೂ ಪತ್ರ ಬರೆದು ಆರೋಪ ಮಾಡಿದರು. ಆದರೆ, 40 ಪರ್ಸೆಂಟ್ ಕಮಿಷನ್ ಬಗ್ಗೆ ಒಂದೇ ಒಂದು ದಾಖಲೆ ಬಿಡುಗಡೆಯಾಗಿಲ್ಲ. ಚುನಾವಣೆ ನಡೆದರೆ ಕಾಂಗ್ರೆಸ್ ಮತ ಬ್ಯಾಂಕ್ ನಲ್ಲಿ ಶೇ. 40 ರಷ್ಟು ಮತಗಳು ಕಡಿಮೆಯಾಗಲಿವೆ ಎಂದರು.
ದಾರಿ ತಪ್ಪುತ್ತಿರುವ ಮುಸ್ಲಿಂ ಯುವಕರನ್ನು ಅವರ ಸಮುದಾಯದ ಹಿರಿಯರು ಹದ್ದುಬಸ್ತಿನಲ್ಲಿ ಇಡದಿದ್ದರೆ ಅವರು ರಾಷ್ಟ್ರದ್ರೋಹಿಗಳಾಗಿ ಹೊರ ಹೊಮ್ಮುತ್ತಾರೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಮುಸ್ಲಿಂ ಹಿರಿಯರಿಗೆ ಕಿವಿಮಾತು ಹೇಳಿದ್ದಾರೆ.

ಅವರು ಇಂದು ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಎಸ್.ಡಿ.ಪಿ.ಐ., ಪಿಎಫ್ಐ ಮುಂತಾದ ಸಂಘಟನೆಗಳು ರಾಷ್ಟ್ರದ್ರೋಹದ ಸಂಘಟನೆಗಳಾಗಿ ಹೊರ ಹೊಮ್ಮುತ್ತಿವೆ. ಬಿಜೆಪಿ ಇಂತಹ ಸಂಘಟನೆಗಳ ಬಗ್ಗೆ ಹುಷಾರಾಗಿರಬೇಕೆಂದು ಆಗಾಗ ಎಚ್ಚರಿಸುತ್ತಾ ಬಂದಿದೆ. ಆದರೂ, ಮುಸ್ಲಿಂ ಯುವಕರು ಪ್ರಚೋದನೆಗೆ ಒಳಗಾಗಿ ಐಎಸ್ಐ ಉಗ್ರ ಸಂಘಟನೆಗೆ ಸೇರುತ್ತಿದ್ದಾರೆ. ಇದು ತುಂಬಾ ಅಪಾಯಕಾರಿ ಎಂದರು.

ಮುಸ್ಲಿಂ ಸಮಾಜದ ಹಿರಿಯರು ಇವರನ್ನು ಹದ್ದುಬಸ್ತಿನಲ್ಲಿಡಬೇಕಾಗಿದೆ. ಇಲ್ಲದಿದ್ದರೆ ಇವರು ಬಾಂಬ್ ತಯಾರಿಸಿಯೋ ಅಥವಾ ತರಬೇತಿ ಪಡೆದೋ, ಚಾಕು ಚೂರಿ ಸಂಸ್ಕೃತಿ ಹೊಂದಿ ರಾಷ್ಟ್ರದ್ರೋಹಿಗಳಾಗಿ, ಭಯೋತ್ಪಾದಕರಾಗಿ ಜೈಲು ಸೇರುವುದು ಖಚಿತ. ಇಂತಹ ಸಂಘಟನೆಗಳಿಗೆ ವಿದೇಶಗಳಿಂದ ಕೋಟ್ಯಂತರ ರೂ. ಹರಿದು ಬರುತ್ತಿದೆ ಎಂದರು.
ಈಗಾಗಲೇ ಎನ್ಐಎ ವಿಶೇಷ ನ್ಯಾಯಾಲಯ ಸೆ. 21 ರಂದು ತನಿಖೆಗೆ ಆದೇಶ ನೀಡಿ ವಾರೆಂಟ್ ಜಾರಿಗೊಳಿಸಿತ್ತು. ಈ ಹಿನ್ನಲೆಯಲ್ಲಿ ಏಕಕಾಲದಲ್ಲಿ ದೇಶಾದ್ಯಂತ ದಾಳಿ ನಡೆದಿದ್ದು, ದುಷ್ಕೃತ್ಯಗಳು ಹೊರ ಬಂದಿವೆ. ಇಂತಹ ದುಷ್ಕೃತ್ಯಗಳು ನಡೆಯುತ್ತಿದ್ದರೂ ಒಬ್ಬನೇ ಒಬ್ಬ ಕಾಂಗ್ರೆಸ್ ಮುಖಂಡ ಇದು ತಪ್ಪು ಎಂದು ಹೇಳಿಲ್ಲ. ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ನಲಪಾಡ್, ಯುವಕರಿಗೆ ಉದ್ಯೋಗವಿಲ್ಲ. ಹಾಗಾಗಿ ಬಾಂಬ್ ತಯಾರು ಮಾಡುತ್ತಾರೆ ಎಂದು ಹೇಳುವ ಮೂಲಕ ಇಂತಹ ಸಂಘಟನೆಗಳಿಗೆ ಬೆಂಬಲ ನೀಡಿದರೆ ಇದು ತಪ್ಪು ಎಂದು ಕಾಂಗ್ರೆಸ್ ಮುಖಂಡರು ಹೇಳಿಲ್ಲ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsMLA EshwarappaNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಮಾಜಿ ಸಚಿವ ಈಶ್ವರಪ್ಪಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸೆ.26ರಿಂದ ಅ.4ರವರೆಗೆ ಅದ್ಧೂರಿ ಸಾಂಸ್ಕೃತಿಕ ದಸರಾ ಆಚರಣೆ: ಎಸ್.ಜಿ. ರಾಜು

Next Post

ಐಐಐಟಿಗೆ ರಾಷ್ಟ್ರಪತಿಗಳ ಭೇಟಿ: ಬುಡಕಟ್ಟು ಆದಿವಾಸಿಗಳ ಭಾಷೆಗಳಿಗೆ ಧ್ವನಿಭಾಷಾನುವಾದ ರೋಬೋಟ್ ಸಂಶೋಧನೆ

kalpa News

kalpa News

Next Post
ಐಐಐಟಿಗೆ ರಾಷ್ಟ್ರಪತಿಗಳ ಭೇಟಿ: ಬುಡಕಟ್ಟು ಆದಿವಾಸಿಗಳ ಭಾಷೆಗಳಿಗೆ ಧ್ವನಿಭಾಷಾನುವಾದ ರೋಬೋಟ್ ಸಂಶೋಧನೆ

ಐಐಐಟಿಗೆ ರಾಷ್ಟ್ರಪತಿಗಳ ಭೇಟಿ: ಬುಡಕಟ್ಟು ಆದಿವಾಸಿಗಳ ಭಾಷೆಗಳಿಗೆ ಧ್ವನಿಭಾಷಾನುವಾದ ರೋಬೋಟ್ ಸಂಶೋಧನೆ

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL