No Result
View All Result
RPF Mysuru Division Records Notable Achievements in 2026
English Articles

RPF Mysuru Division Records Notable Achievements in 2026

by kalpa News
July 20, 2026
0

Kalpa Media House  | Mysuru | The Railway Protection Force (RPF), Mysuru Division, has recorded significant achievements during the current...

Read moreDetails
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
  • Advertise With Us
  • Grievances
  • About Us
  • Contact Us
Monday, July 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ ವಿಮಾನ ನಿಲ್ದಾಣ ಲೋಕಾರ್ಪಣೆ ಸನ್ನಿಹಿತ: ಸಂಸದ ರಾಘವೇಂದ್ರ ಹೇಳಿದ್ದೇನು?

ಜನವರಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಂದ ಉದ್ಘಾಟನೆ ಸಾಧ್ಯತೆ!

kalpa News by kalpa News
September 24, 2022
in ಶಿವಮೊಗ್ಗ
0
ಶಿವಮೊಗ್ಗ ವಿಮಾನ ನಿಲ್ದಾಣ ಲೋಕಾರ್ಪಣೆ ಸನ್ನಿಹಿತ: ಸಂಸದ ರಾಘವೇಂದ್ರ ಹೇಳಿದ್ದೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಶಿವಮೊಗ್ಗ ಸಮೀಪದ ಸೋಗಾನೆಯಲ್ಲಿ ವಿಮಾನ ನಿಲ್ದಾಣದ ರನ್ವೇ, ಟರ್ಮಿನಲ್ ಕಟ್ಟಡ, ವಿಮಾನಸಂಚಾರ ನಿಯಂತ್ರಣ ಘಟಕ ಸೇರಿದಂತೆ ಅನೇಕ ಕಾಮಗಾರಿಗಳು ಭರದಿಂದ ಸಾಗಿದ್ದು, ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಅಂತಿಮ ಹಂತದ ಕಾಮಗಾರಿ ಪ್ರಗತಿಯಲ್ಲಿದೆ. ಈ ಎಲ್ಲಾ ಕಾಮಗಾರಿಗಳು ನವೆಂಬರ್ ಮಾಸಾಂತ್ಯಕ್ಕೆ ಪೂರ್ಣಗೊಂಡು ವಿಮಾನ ನಿಲ್ಧಾಣ ಲೋಕಾರ್ಪಣೆಗೆ ಸರ್ವಸನ್ನದ್ಧಗೊಳ್ಳಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ MP Raghavendra ಅವರು ಹೇಳಿದರು.

ಅವರು ಇಂದು ಸೋಗಾನೆ ವಿಮಾನ ನಿಲ್ದಾಣಕ್ಕೆ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯದ ಅಪರ ಕಾರ್ಯದರ್ಶಿ ಉಷಾಪಾಧಿ, ಗೌರವಗುಪ್ತಾ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೆಲ್ವಕುಮಾರ್ ಸೇರಿದಂತೆ ರಾಷ್ಟ ಮತ್ತು ರಾಜ್ಯ ಮಟ್ಟದ ತಂತ್ರಜ್ಞರು, ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿದ ನಂತರ ಮಾಧ್ಯಮದ ಪ್ರತಿನಿಧಿಗಳಿಗೆ ಮಾಹಿತಿ ನೀಡಿದರು.
ಯಾವುದೇ ಒಂದು ರಾಜ್ಯ, ಜಿಲ್ಲಾ, ಸಂಸ್ಥೆ ಅಥವಾ ವ್ಯವಸ್ಥೆ ನಿರೀಕ್ಷಿತ ಪ್ರಗತಿ ಸಾಧಿಸಲು ಮೂಲಭೂತ ಸೌಕರ್ಯಗಳು ಇರಬೇಕಾದುದು ಅಗತ್ಯ. ಬಹುದಿನಗಳ ಈ ಕನಸಿನ ಯೋಜನೆಯ ಅನುಷ್ಠಾನಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಸತತ ಪರಿಶ್ರಮ, ಸಂಕಲ್ಪ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಸಹಕಾರವೂ ಕೂಡ ಸ್ಮರಣೀಯವಾದುದು ಎಂದರು.

ವಿಮಾನ ನಿಲ್ದಾಣದ ವ್ಯವಸ್ಥಿತ ನಿರ್ವಹಣೆ, ಸಂಚಾರ ಸಂಪರ್ಕ ಮತ್ತು ಉಸ್ತುವಾರಿ ಕಾರ್ಯಗಳ ಕುರಿತು ಗಮನಹರಿಸಬೇಕಾದ ಅಗತ್ಯವಿದೆ. ನಿಲ್ದಾಣದ ನಿರ್ವಹಣೆ ಕುರಿತು ಉನ್ನತ ಮಟ್ಟದ ಅಧಿಕಾರಿಗಳು ಸಭೆ ಸೇರಿ ನಿರ್ಣಯ ಕೈಗೊಂಡು ಮುಂದಿನ ಕ್ರಮಗಳಿಗೆ ಅನುವು ಮಾಡಿಕೊಡುವಂತೆ ಗೌರವಗುಪ್ತಾ ಅವರಿಗೆ ಮನವಿ ಮಾಡಿದ ಅವರು, ನಿಲ್ದಾಣದ ಉದ್ಘಾಟನೆಗೆ ಜನವರಿ ಮಾಸಾಂತ್ಯದೊಳಗಾಗಿ ಪ್ರಧಾನಮಂತ್ರಿ ಅವರ ಸಮಯವನ್ನು ನಿಗಧಿಗೊಳಿಸಿಕೊಡುವಂತೆ ರಾಜ್ಯ ಸರ್ಕಾರದ ವತಿಯಿಂದ ಕೋರಲಾಗುವುದು ಎಂದರು.
ಶಿವಮೊಗ್ಗ-ಬೆಂಗಳೂರು ಅಲ್ಲದೇ ನೆರೆ ರಾಜ್ಯಗಳ ಹಲವು ಪ್ರಮುಖ ನಗರಗಳ ಸಂಪರ್ಕ ಹಾಗೂ ಸಂಚಾರಕ್ಕೆ ಕ್ರಮ ವಹಿಸುವಂತೆ ವಿಮಾನಯಾನ ಸಂಸ್ಥೆಗಳಿಗೆ ಮನವಿ ಮಾಡಲಾಗಿದೆ. ಅಲ್ಲದೇ ರಾಜ್ಯದ ಉನ್ನತ ಅಧಿಕಾರಿಗಳ ತಂಡ ಸದ್ಯದಲ್ಲಿ ನೆರೆಯ ರಾಜ್ಯ ಮಹಾರಾಷ್ಟದ ಶಿರಡಿ ವಿಮಾನ ನಿಲ್ದಾಣಗಳಿಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆ ಮತ್ತು ನಿರ್ವಹಣೆಯ ಬಗ್ಗೆ ಮಾಹಿತಿ ಪಡೆದುಕೊಳ್ಳಲಿದೆ ಎಂದರು.

Also read: ಮಲೆನಾಡಿನಲ್ಲಿ ಉಗ್ರರ ಕರಿನೆರಳು: ಶಿವಮೊಗ್ಗಕ್ಕೆ `ರಾ’ ಟೀಂ ಎಂಟ್ರಿ?

ಈಗಾಗಲೇ ಗತಿಶಕ್ತಿ ಯೋಜನೆಯಡಿ ಕೇಂದ್ರ ಸರ್ಕಾರವು 65ಕೋಟಿ ಅನುದಾನ ಬಿಡುಗಡೆ ಮಾಡಿದ್ದು, ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಶೀಥಲೀಕರಣ ಘಟಕಗಳು, ಗೋದಾಮುಗಳು, ಕಿರು ಉದ್ಯಮ ಘಟಕಗಳ ಆರಂಭದಿಂದಾಗಿ ಸರಕು-ಸಾಗಾಟಕ್ಕೆ ಅನುಕೂಲವಾಗಲಿದೆ ಎಂದರು.
ಈ ಸಂದರ್ಭದಲ್ಲಿ ಬ್ರಿಗೇಡಿಯರ್ ಪೂರ್ವಿಮಠ್, ರಾಜೀವ್ ಕುಮಾರ್ ರೈ, ಹೆಪ್ಸಿಬಾರಾಣಿ ಕೊರ್ಲಪಾಟಿ, ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿ ಎಚ್.ಆರ್. ರಾಜಪ್ಪ, ರೈಟ್ಸ್ ಸಂಸ್ಥೆಯ ಇಂಜಿನಿಯರ್ ರವಿ, ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ. ಲಕ್ಷ್ಮೀಪ್ರಸಾದ್, ಲೋಕೋಪಯೋಗಿ ಇಲಾಖೆಯ ಅಭಿಯಂತರರಾದ ಕಾಂತರಾಜ್, ಸಂಪತ್ ಕುಮಾರ್ ಮುಂತಾದ ಅಧಿಕಾರಿಗಳು ಹಾಗೂ ವಿಮಾನಯಾನ ಸಂಸ್ಥೆಯ ತಂತ್ರಜ್ಞರು, ಗುತ್ತಿಗೆದಾರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsMP RaghavendraNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಂಸದ ಬಿ.ವೈ. ರಾಘವೇಂದ್ರ
Share202Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಲೆನಾಡಿನಲ್ಲಿ ಉಗ್ರರ ಕರಿನೆರಳು: ಶಿವಮೊಗ್ಗಕ್ಕೆ `ರಾ’ ಟೀಂ ಎಂಟ್ರಿ?

Next Post

ಸೆ.26 ಕೃಷಿ, ತೋಟಗಾರಿಕೆ ವಿವಿ ಸಂಸ್ಥಾಪನಾ ದಿನಾಚರಣೆ: 28ರಂದು ಘಟಿಕೋತ್ಸವ

kalpa News

kalpa News

Next Post
ಸೆ.26 ಕೃಷಿ, ತೋಟಗಾರಿಕೆ ವಿವಿ ಸಂಸ್ಥಾಪನಾ ದಿನಾಚರಣೆ: 28ರಂದು ಘಟಿಕೋತ್ಸವ

ಸೆ.26 ಕೃಷಿ, ತೋಟಗಾರಿಕೆ ವಿವಿ ಸಂಸ್ಥಾಪನಾ ದಿನಾಚರಣೆ: 28ರಂದು ಘಟಿಕೋತ್ಸವ

Leave a Reply Cancel reply

Your email address will not be published. Required fields are marked *

No Result
View All Result
RPF Mysuru Division Records Notable Achievements in 2026
English Articles

RPF Mysuru Division Records Notable Achievements in 2026

by kalpa News
July 20, 2026
0

Kalpa Media House  | Mysuru | The Railway Protection Force (RPF), Mysuru Division, has recorded significant achievements during the current...

Read moreDetails
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL